ಗುತ್ತಿಗೆ ಪದ್ಧತಿ ರದ್ದು, ಬೀದಿ ವ್ಯಾಪಾರಿಗಳಿಗೆ ನಿಗಮ, ಕತ್ತೆ ಸಾಕಾಣಿಕೆಗೆ ಒತ್ತು: ಆಯೋಗದ ಶಿಫಾರಸು

Date:

ರಾಜ್ಯದಲ್ಲಿ ದಶಕಗಳಿಂದ ಬೇರೂರಿರುವ ಗುತ್ತಿಗೆ ಕಾರ್ಮಿಕ ವ್ಯವಸ್ಥೆಯನ್ನು ಸಂಪೂರ್ಣವಾಗಿ ರದ್ದುಪಡಿಸುವುದು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ನ್ಯಾಯಸಮ್ಮತ ಕನಿಷ್ಠ ವೇತನ ನಿಗದಿ ಮಾಡುವುದು ಹಾಗೂ ಕತ್ತೆ ಸಾಕಾಣಿಕೆಗೆ ಪ್ರೋತ್ಸಾಹ ನೀಡುವಂತಹ ಹಲವು ಕ್ರಾಂತಿಕಾರಕ ಶಿಫಾರಸುಗಳನ್ನು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಸಮಿತಿ ತನ್ನ ವರದಿಯಲ್ಲಿ ಮಂಡಿಸಿದೆ.

​ಮುಂಬರುವ ಆಯವ್ಯಯದಲ್ಲಿ ಈ ಪ್ರಮುಖ ಪ್ರಸ್ತಾವನೆಗಳನ್ನು ಸೇರ್ಪಡೆ ಮಾಡಲು ಆಯೋಗ ಸರ್ಕಾರದ ಮುಂದಿಟ್ಟಿದೆ. ಸಮಾಜದ ಕಟ್ಟಕಡೆಯ ಶ್ರಮಿಕರನ್ನು ಶೋಷಣೆಯಿಂದ ಮುಕ್ತಗೊಳಿಸುವುದು ಹಾಗೂ ರೈತರಿಗೆ ಪರ್ಯಾಯ ಆದಾಯದ ಮೂಲಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ಈ ವರದಿಯು ಹಲವು ಮಹತ್ವದ ಹೆಜ್ಜೆಗಳನ್ನು ಗುರುತಿಸಿದೆ.

ಗುತ್ತಿಗೆ ಪದ್ಧತಿಗೆ ಕೊಕ್: ವಿವಿಧ ಸರ್ಕಾರಿ ಇಲಾಖೆಗಳು, ನಿಗಮ-ಮಂಡಳಿಗಳು ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ದಶಕಗಳಿಂದ ನಡೆಯುತ್ತಿರುವ ಶೋಷಣಾತ್ಮಕ ‘ಗುತ್ತಿಗೆ ಮತ್ತು ಹೊರ ಗುತ್ತಿಗೆ ವ್ಯವಸ್ಥೆ’ಯನ್ನು ಸಂಪೂರ್ಣವಾಗಿ ರದ್ದುಪಡಿಸಬೇಕು ಎಂದು ಸಮಿತಿ ಕಟ್ಟುನಿಟ್ಟಾಗಿ ಶಿಫಾರಸು ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

​ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಗುತ್ತಿಗೆ ಕಾರ್ಮಿಕರನ್ನು ದಳ್ಳಾಳಿಗಳ ಶೋಷಣೆಯಿಂದ ತಪ್ಪಿಸಲು ‘ನೇರ ಪಾವತಿ ವ್ಯವಸ್ಥೆ’ಅಡಿ ತಂದು, ಅವರಿಗೆ ಉದ್ಯೋಗ ಭದ್ರತೆ ಒದಗಿಸಬೇಕು. ಇದು ಕಾರ್ಮಿಕರಿಗೆ ತಮ್ಮದೇ ಆದ ಹಕ್ಕು ಮತ್ತು ಭದ್ರತೆಯನ್ನು ಖಚಿತಪಡಿಸಲಿದೆ.

​ವಿಶೇಷವಾಗಿ 240 ದಿನಗಳ ಸೇವೆಯನ್ನು ಪೂರೈಸಿದ ಗುತ್ತಿಗೆ ಕಾರ್ಮಿಕರ ಉದ್ಯೋಗವನ್ನು ಕಾಯಂಗೊಳಿಸಲು ಅಸ್ಸಾಂ ಮತ್ತು ತಮಿಳುನಾಡು ರಾಜ್ಯಗಳ ಮಾದರಿಯ ವಿಶೇಷ ಕಾಯ್ದೆಯನ್ನು ರಾಜ್ಯದಲ್ಲೂ ಜಾರಿಗೆ ತರಬೇಕು ಎಂದು ವರದಿಯಲ್ಲಿ ಆಗ್ರಹಿಸಲಾಗಿದೆ. ಇದು ಲಕ್ಷಾಂತರ ಕಾರ್ಮಿಕರ ಬದುಕಿನಲ್ಲಿ ಹೊಸ ಆಶಾಕಿರಣವಾಗಿದೆ.

ಆಶಾ, ಅಂಗನವಾಡಿಯವರಿಗೆ ನ್ಯಾಯಸಮ್ಮತ ವೇತನ: ಸಮಾಜದ ಅತ್ಯಗತ್ಯ ಸೇವೆಗಳನ್ನು ಒದಗಿಸುತ್ತಿರುವ ಅಂಗನವಾಡಿ, ಆಶಾ ಹಾಗೂ ಬಿಸಿಯೂಟ ಕಾರ್ಯಕರ್ತೆಯರನ್ನು ಕೇವಲ ‘ಗೌರವಧನ ಪಡೆಯುವವರು’ ಎಂದು ವರ್ಗೀಕರಿಸಿರುವುದು ಅವರ ಶೋಷಣೆಗೆ ಕಾರಣವಾಗಿದೆ. ವರದಿಯ ಈ ಕಾರ್ಯಕರ್ತೆಯರನ್ನು ಅಧಿಕೃತವಾಗಿ ‘ಕಾರ್ಮಿಕರು’ ಎಂದು ಮಾನ್ಯ ಮಾಡಬೇಕು.

​ಇವರನ್ನು ಕೇವಲ ಸಣ್ಣ ಮೊತ್ತದ ಗೌರವಧನಕ್ಕೆ ಸೀಮಿತಗೊಳಿಸದೆ, ಅವರ ಸೇವಾ ಮೌಲ್ಯವನ್ನು ಪರಿಗಣಿಸಿ ನ್ಯಾಯಸಮ್ಮತ ಕನಿಷ್ಠ ವೇತನವನ್ನು ಕಡ್ಡಾಯವಾಗಿ ನಿಗದಿ ಮಾಡಬೇಕು. ಜೊತೆಗೆ ಅವರಿಗೆ ಉದ್ಯೋಗ ಹಾಗೂ ಸಾಮಾಜಿಕ ಭದ್ರತೆಯನ್ನು ಖಚಿತಪಡಿಸಬೇಕು ಎಂದು ಆಯೋಗ ಸರ್ಕಾರವನ್ನು ಒತ್ತಾಯಿಸಿದೆ.

ಬೀದಿ ಬದಿ ವ್ಯಾಪಾರಿಗಳ ನಿಗಮ: ನಗರ ಪ್ರದೇಶದ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಮತ್ತು ದಿನನಿತ್ಯದ ಕಿರುಕುಳ ಎದುರಿಸುತ್ತಿರುವ ಬೀದಿ ಬದಿ ವ್ಯಾಪಾರಿಗಳ ರಕ್ಷಣೆ ಹಾಗೂ ಕಲ್ಯಾಣಕ್ಕಾಗಿ ರಾಜ್ಯ ಮಟ್ಟದಲ್ಲಿ ಪ್ರತ್ಯೇಕ ‘ಬೀದಿ ಬದಿ ವ್ಯಾಪಾರಿಗಳ ಅಭಿವೃದ್ಧಿ ನಿಗಮ’ ಸ್ಥಾಪಿಸಬೇಕು ಎಂದು ವರದಿ ಹೇಳಿದೆ.

​ಈ ನಿಗಮದ ಮೂಲಕ ಸಾಲ, ತಳ್ಳುವ ಗಾಡಿ, ಛತ್ರಿ, ಹಾಗೂ ಸೋಲಾರ್ ದೀಪಗಳ ಸೌಲಭ್ಯ ಒದಗಿಸಬೇಕು. ಎಲ್ಲಾ ಮಾರುಕಟ್ಟೆ ಹಾಗೂ ವ್ಯಾಪಾರ ವಲಯಗಳಲ್ಲಿ ಶೌಚಾಲಯ-ಸ್ವಚ್ಛತಾ ಸೌಲಭ್ಯಗಳನ್ನು ಒಳಗೊಂಡ ಮೂಲಭೂತ ಸೌಕರ್ಯಗಳನ್ನು ಕಡ್ಡಾಯವಾಗಿ ಒದಗಿಸಬೇಕು ಎಂದು ತಿಳಿಸಲಾಗಿದೆ.

ಕತ್ತೆ ಸಾಕಾಣಿಕೆಗೆ ವಿಶೇಷ ಪ್ರೋತ್ಸಾಹ: ಕೃಷಿ ಹಾಗೂ ಪಶುಸಂಗೋಪನಾ ವಲಯದಲ್ಲಿ ವಿನೂತನ ಹಾಗೂ ಲಾಭದಾಯಕ ಹೆಜ್ಜೆಯಾಗಿ ‘ಕತ್ತೆ (ಗಾರ್ದಭ) ಸಾಕಾಣಿಕೆ’ಗೆ ವಿಶೇಷ ಆದ್ಯತೆ ನೀಡಲು ವರದಿಯಲ್ಲಿ ಸೂಚಿಸಲಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಕತ್ತೆ ಹಾಲಿಗೆ ಅಪಾರ ಬೇಡಿಕೆ ಇದ್ದು, ಇದನ್ನು ಅಧಿಕವಾಗಿ ಉತ್ಪಾದಿಸಲು ಸಮಗ್ರ ಕೃಷಿ ಪದ್ಧತಿಯಲ್ಲಿ ಗಾರ್ದಭಗಳನ್ನು ಬಳಸಿಕೊಳ್ಳಬೇಕು. ಇವುಗಳ ಉತ್ತಮ ತಳಿಯನ್ನು ಅಭಿವೃದ್ಧಿಪಡಿಸಿ, ಆ ಮರಿಗಳನ್ನು ರೈತರಿಗೆ ವಿತರಿಸುವ ಜವಾಬ್ದಾರಿಯನ್ನು ಸಂಬಂಧಪಟ್ಟ ಕೃಷಿ-ಪಶುವೈದ್ಯಕೀಯ ವಿಶ್ವವಿದ್ಯಾಲಯಗಳಿಗೆ ವಹಿಸಬೇಕು ಎಂದು ಶಿಫಾರಸನ್ನು ಮುಂದಿಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...