ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆಯಾಗಿ ನಟಿ ಜಯಮಾಲಾ ಆಯ್ಕೆ     

Date:

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ (ಕೆಎಫ್‌ಸಿಸಿ) ಶನಿವಾರ(ಜ.31) ನಡೆದ ಚುನಾವಣೆಯಲ್ಲಿ ಹಿರಿಯ ನಟಿ ಜಯಮಾಲಾ ಆಯ್ಕೆಯಾಗಿದ್ದಾರೆ.

ಬೆಂಗಳೂರು ನಗರದ ರೇಸ್‌ ಕೋರ್ಸ್‌ ರಸ್ತೆಯಲ್ಲಿರುವ ಗುರುರಾಜ ಕಲ್ಯಾಣ ಮಂಟಪದಲ್ಲಿ ಚುನಾವಣೆ ನಡೆದಿತ್ತು. ಈ ಭಾರಿಯ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಿರ್ಮಾಪಕರ ವಲಯ ಮೀಸಲಾಗಿತ್ತು. ಅದರಂತೆ ಚುನಾವಣೆಯಲ್ಲಿ ಹಿರಿಯ ನಟಿ ಜಯಮಾಲಾ ಹಾಗೂ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಭಾ.ಮಾ.ಹರೀಶ್‌ ಕಣದಲ್ಲಿದ್ದರು. ಈ ಇಬ್ಬರ ನಡುವೆ ತೀವ್ರ ಪೈಪೋಟಿ ಏರ್ಪಟ್ಟು, ಒಟ್ಟು ಚಲಾವಣೆಗೊಂಡ 846 ಮತಗಳಲ್ಲಿ ಜಯಮಾಲಾ ಅವರು 512 ಮತಗಳನ್ನು ಪಡೆದುಕೊಂಡು ಜಯಸಾಧಿಸಿದರು.

ಉಪಾಧ್ಯಕ್ಷ ಸ್ಥಾನಕ್ಕೆ ನಿರ್ಮಾಪಕ ವಲಯದಿಂದ ನಟ ಸುಂದರ್‌ರಾಜ್‌, ವಿತರಕ ವಲಯದಿಂದ ನಿರ್ಮಾಪಕ ಕೆ.ಮಂಜು ಹಾಗೂ ಪ್ರದರ್ಶಕರ ವಲಯದಿಂದ ಕಿಶೋರ್‌ ಕುಮಾರ್‌ ಎಂ.ಎನ್‌. ಆಯ್ಕೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗೌರವ ಕಾರ್ಯದರ್ಶಿ ಸ್ಥಾನಕ್ಕೆ ನಿರ್ಮಾಪಕ ವಲಯದಿಂದ ಎ.ಗಣೇಶ್‌, ಪ್ರದರ್ಶಕ ವಲಯದಿಂದ ಅಶೋಕ್‌ ಕೆ.ಸಿ, ವಿತರಕ ವಲಯದಿಂದ ರಮೇಶ್‌ ಬಾಬು ಎಂ.ಆರ್‌. ಚುನಾಯಿತರಾದರು.

ಖಜಾಂಚಿಯಾಗಿ ಜಯಸಿಂಹ ಮುಸುರಿ ಬಿ.ಕೆ. ಆಯ್ಕೆಯಾದರು. ವಾಣಿಜ್ಯ ಮಂಡಳಿಯ ಕಾರ್ಯಕಾರಿ ಸಮಿತಿಗೆ ಮೂರು ವಲಯದಿಂದ 48 ಮಂದಿ ಸದಸ್ಯರನ್ನು ಚುನಾವಣೆಯ ಮೂಲಕ ಆಯ್ಕೆ ಮಾಡಲಾಗಿದೆ.

1970ರ ದಶಕದಿಂದಲೂ ಜಯಮಾಲಾ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಈ ಹಿಂದೆ 2008 ರಿಂದ 2010 ರ ವರೆಗೆ ಜಯಮಾಲಾ ಕೆಎಫ್‌ಸಿಸಿ ಅಧ್ಯಕ್ಷೆ ಆಗಿದ್ದರು. ಇದೀಗ 2ನೇ ಬಾರಿಗೆ ಜಯಮಾಲಾ ಅಧ್ಯಕ್ಷೆ ಆಗಿ ಆಯ್ಕೆಯಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧುರಂಧರ್ 2 ನೋಡಿ, ಹಣ ಸಮಯ ವ್ಯರ್ಥ ಮಾಡಿಕೊಳ್ಳಬೇಡಿ; ನಟಿ ರಮ್ಯಾ ಖಡಕ್ ಹೇಳಿಕೆ

ಇತ್ತೀಚೆಗಷ್ಟೇ ಬಿಡುಗಡೆಯಾಗಿರುವ ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ಹಾಗೂ ಆದಿತ್ಯ...

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

‘ಬೋಳು ತಲೆಯೇ ನನ್ನ ಬಲ, ಎಷ್ಟೇ ಹಣ ಕೊಟ್ಟರೂ ಕೂದಲು ನಾಟಿ ಬೇಡ’: ನಟ ಅನುಪಮ್ ಖೇರ್

'ನಾನು ಪ್ರತಿಯೊಂದು ಕೂದಲು ನಾಟಿ ಮಾಡುವ ಕಂಪನಿ ಮತ್ತು ವೈದ್ಯರ ಪಾಲಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...