ಘೋಷಿತ ಕಾಯಿಲೆಗಳ ಪಟ್ಟಿಗೆ ಹಾವು ಕಡಿತವನ್ನೂ ಆರೋಗ್ಯ ಇಲಾಖೆ ಸೇರ್ಪಡೆ ಮಾಡಿ ಆದೇಶ ಹೊರಡಿಸಿದೆ.
ಫೆಬ್ರವರಿ 12 ರಂದು ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, “ಎಲ್ಲ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಸಂಸ್ಥೆಗಳು ಹಾವು ಕಡಿತದ ಎಲ್ಲ ಪ್ರಕರಣಗಳನ್ನು ಅಂದರೆ ಒಳರೋಗಿಗಳು, ಹೊರರೋಗಿಗಳು ಮತ್ತು ಸಾವಿನ ಪ್ರಕರಣಗಳೇ ಆಗಿರಲಿ ಸಮಗ್ರ ಆರೋಗ್ಯ ಮಾಹಿತಿ ವೇದಿಕೆಯಲ್ಲಿ ನೋಂದಾಯಿಸಬೇಕು” ಎಂದು ನಿರ್ದೇಶಿಸಿದೆ.
ಭಾರತದಲ್ಲಿ ಉಂಟಾಗುವ ಹಾವು ಕಡಿತವನ್ನು ವಿಶ್ವ ಆರೋಗ್ಯ ಸಂಸ್ಥೆಯು ‘ಉಷ್ಣವಲಯದ ನಿರ್ಲಕ್ಷಿತ ರೋಗಗಳು’ ಎಂದು ವರ್ಗೀಕರಿಸಿದೆ. ಹೀಗಾಗಿ, ಕರ್ನಾಟಕದಲ್ಲಿ 2023–24ರ ಸಾಲಿನಲ್ಲಿ ಹಾವು ಕಡಿತ ತಡೆಗಟ್ಟುವ ಕಾರ್ಯಕ್ರಮ ಆರಂಭಿಸಲಾಗಿದೆ. ರಾಜ್ಯದಲ್ಲಿ ಹಾವು ಕಡಿತದ ಘಟನೆಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನಿರ್ಮಾಣ ಹಂತದ ಕಟ್ಟಡದಲ್ಲಿ ಯುವತಿಯ ಮೃತದೇಹ ಪತ್ತೆ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವರದಿ ಮತ್ತು ಮಾಹಿತಿಯ ಪ್ರಕಾರ, 2023ರಲ್ಲಿ ಕರ್ನಾಟಕದಲ್ಲಿ 6,595 ಜನರಿಗೆ ಹಾವುಗಳು ಕಡದಿವೆ. ಇದರಲ್ಲಿ 19 ಜನರು ಮೃತಪಟ್ಟಿದ್ದಾರೆ. ಈ ವರ್ಷ, ಅಧಿಕೃತ ಅಂಕಿಅಂಶಗಳ ಪ್ರಕಾರ, ಇದುವರೆಗೆ 543 ಜನರಿಗೆ ಹಾವುಗಳು ಕಡಿದಿವೆ.




