ಅಲೋಕ್‌ ಕುಮಾರ್‌ ಎಡಿಜಿಪಿ ಹುದ್ದೆ ಮುಂದುವರಿಸದಂತೆ ಕೋರಿದ್ದ ಅರ್ಜಿ ವಜಾ

Date:

  • ಅಲೋಕ್‌ ವಿರುದ್ಧ ಹಲವು ಕ್ರಿಮಿನಲ್ ಪ್ರಕರಣ ಬಾಕಿ
  • ಫೈಟರ್ ರವಿ ಎಂಬುವವರಿಂದ ಅರ್ಜಿ ಸಲ್ಲಿಕೆ

ರಾಜ್ಯ ಪೊಲೀಸ್ ಇಲಾಖೆಯ ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರಾಗಿರುವ (ಎಡಿಜಿಪಿ) ಅಲೋಕ್ ಕುಮಾರ್ ವಿರುದ್ಧ ಹಲವು ಕ್ರಿಮಿನಲ್ ಪ್ರಕರಣಗಳು ಬಾಕಿ ಇರುವುದರಿಂದ ಅವರನ್ನು ಆ ಹುದ್ದೆಯಲ್ಲಿ ಮುಂದುವರಿಸದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ.

ಭಾರತೀಯ ಚುನಾವಣಾ ಆಯೋಗವು (ಇಸಿಐ) 2022ರ ಡಿ. 8ರಂದು ಹೊರಡಿಸಿರುವ ಅಧಿಸೂಚನೆ ಪ್ರಕಾರ ಯಾವುದೇ ಅಧಿಕಾರಿಯ ಮೇಲೆ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ಬಾಕಿ ಇದ್ದರೆ, ಅಂತಹ ವ್ಯಕ್ತಿಗಳನ್ನು ಚುನಾವಣಾ ಕೆಲಸಕ್ಕೆ ನಿಯೋಜಿಸುವಂತಿಲ್ಲ. ಆದರೂ ಕೂಡ ಅಲೋಕ್ ಕುಮಾರ್ ಅವರನ್ನು ಎಡಿಜಿಪಿ ಹುದ್ದೆಯಲ್ಲಿ ಮುಂದುವರಿಸಲಾಗಿದೆ ಎಂದು ಬಿ ಎಂ ಮಲ್ಲಿಕಾರ್ಜುನ ಅಲಿಯಾಸ್ ಫೈಟರ್ ರವಿ ಎಂಬುವವರು ಈ ಬಗ್ಗೆ ಕರ್ನಾಟಕ ಹೈಕೋರ್ಟ್ ಗೆ ಇತ್ತೀಚೆಗೆ ಅರ್ಜಿ ಸಲ್ಲಿಸಿದ್ದರು.

ಮಲ್ಲಿಕಾರ್ಜುನ ಅಲಿಯಾಸ್‌ ಫೈಟರ್‌ ರವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು “ಅರ್ಜಿದಾರರು ಸಲ್ಲಿಸಿದ್ದ ವಿಚಾರಣೆಯು ಅಷ್ಟೇನು ಮಾನ್ಯತೆ ಹೊಂದಿಲ್ಲ. ಇದು ನಿಷ್ಪ್ರಯೋಜಕ ಅರ್ಜಿ” ಎಂಬ ಕಾರಣ ನೀಡಿ ಅರ್ಜಿ ವಜಾಗೊಳಿಸಿದೆ.

a1b8f011336c8b30aec8eb65b1fdef709a9ae9be2d3f6e92a0d93ac3d2ff3a42?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...