ವರುಣಾ ಗೆದ್ದರೆ ದೊಡ್ಡ ಸ್ಥಾನ ಕೊಡುವುದಾಗಿ ಅಮಿತ್​ ಶಾ ಭರವಸೆ: ಸಚಿವ ಸೋಮಣ್ಣ

Date:

ವರುಣಾ ಕ್ಷೇತ್ರದಲ್ಲಿ ಗೆದ್ದರೆ ದೊಡ್ಡ ಸ್ಥಾನ ಕೊಡುತ್ತೇವೆ ಎಂದು ಅಮಿತ್​ ಶಾ ಭರವಸೆ ನೀಡಿದ್ದಾರೆ ಎಂದು ಸಚಿವ ವಿ ಸೋಮಣ್ಣ ಹೇಳಿದ್ದಾರೆ.

ಮೈಸೂರಿನ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, “ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುತ್ತಾರೆ ಅನ್ನೋದು ಕನಸು. ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಮಾಡಲ್ಲ. ಸಿದ್ದರಾಮಯ್ಯ ಓಲೈಕೆಗಾಗಿ ಎಂ ಬಿ ಪಾಟೀಲ್​ ಹೇಳಿಕೆ ನೀಡುತ್ತಿದ್ದಾರೆ” ಎಂದರು.

“ದುಷ್ಟ ಶಕ್ತಿಯ ನಿಗ್ರಹಕ್ಕೆ ಎಲ್ಲಾ ಶಕ್ತಿಗಳು ಒಂದಾಗುತ್ತವೆ. ಸೋಮಣ್ಣ ಗೆಲ್ಲಿಸಿ ದೊಡ್ಡ ಸ್ಥಾನ ಕೊಡುತ್ತೇವೆ ಎಂದು ಸ್ವತಃ ಅಮಿತ್​ ಶಾ ಹೇಳಿದ್ದಾರೆ. ನಾನು ಹರಕೆಯ ಕುರಿಯಲ್ಲ” ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಪಾಳಯದಲ್ಲಿ ಟಿಕೆಟ್​ ಘೋಷಣೆಗೂ ಮುನ್ನ ವಿ ಸೋಮಣ್ಣ, ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಪುತ್ರ ವಿಜಯೇಂದ್ರ ವಿಚಾರವಾಗಿ ಅಸಮಾಧಾನಗೊಂಡಿದ್ದರು. ಸೋಮಣ್ಣ ಅವರ ಪುತ್ರ ಅರುಣ್ ಸೋಮಣ್ಣ ಅವರೂ ಕೂಡಾ ಬಹಿರಂಗವಾಗಿಯೇ ವಿಜಯೇಂದ್ರ ವಿರುದ್ಧ ತಮ್ಮ ಕೋಪ ತೋಡಿಕೊಂಡಿದ್ದರು.

ಇದಾದ ಬಳಿಕ ವಿ ಸೋಮಣ್ಣ ಜೊತೆಗೆ ಮಾತುಕತೆ ನಡೆಸುವುದಾಗಿ ಯಡಿಯೂರಪ್ಪ ತಿಳಿಸಿದರೂ ಮಾತುಕತೆ ನಡೆಸಿರಲಿಲ್ಲ. ಇದರ ಮೂಲಕ ಇಬ್ಬರ ನಡುವಿನ ಮುನಿಸು ದೊಡ್ಡ ರಾಜಕೀಯ ಚರ್ಚೆಗೂ ಕಾರಣವಾಗಿತ್ತು. ಬಳಿಕ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ವಿ ಸೋಮಣ್ಣ ಭೇಟಿ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...