ಅಕ್ಕಿ ನೀಡದ ಕೇಂದ್ರ | ಬಿಜೆಪಿ ರಾಜ್ಯ ನಾಯಕರು ಜನತೆಗೆ ಉತ್ತರಿಸಲಿ: ಸಚಿವ ಜಮೀರ್ ಅಹಮದ್

Date:

ಎಫ್‌ಸಿಐ ಗೋದಾಮಿನಲ್ಲಿ 8 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಇಟ್ಟುಕೊಂಡು ರಾಜ್ಯಕ್ಕೆ ಪೂರೈಕೆ ಮಾಡುವ ಬಗ್ಗೆ ಸಮ್ಮತಿ ಪತ್ರ ಕೊಟ್ಟು, ಅಕ್ಕಿ ನೀಡದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಬಗ್ಗೆ ರಾಜ್ಯ ಬಿಜೆಪಿ ನಾಯಕರು ರಾಜ್ಯದ ಜನತೆಗೆ ಉತ್ತರಿಸಲಿ ಎಂದು ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹಮದ್ ಖಾನ್ ಆಗ್ರಹಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಬಿಪಿಎಲ್ ಕುಟುಂಬಗಳಿಗೆ ತಲಾ 10 ಕೆ.ಜಿ ಅಕ್ಕಿ ಕೊಡುವ ಗ್ಯಾರಂಟಿ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ಎಷ್ಟೇ ಅಸಹಕಾರ ತೋರಿದರೂ ನಾವು ನಮ್ಮ ಬದ್ಧತೆ ತೋರಿದ್ದೇವೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಅಕ್ಕಿ ಪೂರೈಕೆ ಮಾಡದೆ ತೊಂದರೆ ನೀಡಿದರೂ ಬಿಪಿಎಲ್ ಕುಟುಂಬಗಳಿಗೆ ಅಕ್ಕಿ ಬದಲು ಕೆ.ಜಿಗೆ 34 ರೂ. ನಂತೆ ಹಣ ನೀಡಲು ಸಂಪುಟ ಸಭೆ ನಿರ್ಣಯ ಮಾಡಿದ್ದು, ಇದು ಕಾಂಗ್ರೆಸ್ ನ ಜನಪರ ನಿಲುವಿಗೆ ಸಾಕ್ಷಿ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ನಮ್ಮ ಸರ್ಕಾರ 10 ಕೆ.ಜಿ ಅಕ್ಕಿ ಕೊಡುವ ವಾಗ್ದಾನ ಪೂರೈಸಿಯೇ ತೀರುತ್ತದೆ. ನಾವು ಕೊಟ್ಟ ಮಾತಿನಂತೆ ನಡೆಯುತ್ತೇವೆ. ಈಗಲಾದರೂ ಕೇಂದ್ರ ಬಿಜೆಪಿ ಸರ್ಕಾರ ಜನವಿರೋಧಿ ಧೋರಣೆ ಕೈ ಬಿಟ್ಟು ರಾಜ್ಯದ ಜನಪರ ಯೋಜನೆಗೆ ಸಹಕಾರ ನೀಡಲಿ ಎಂದು ಆಶಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅನ್ನಭಾಗ್ಯ ಯೋಜನೆ | 10 ಕೆ.ಜಿ ಅಕ್ಕಿಯ ಹಣವನ್ನು ಜನರ ಖಾತೆಗೆ ವರ್ಗಾಯಿಸಿ: ಬಿಜೆಪಿ

ಸಂಪುಟ ಸಭೆಯಲ್ಲಿ ರಾಜ್ಯದ ಬಡವರಿಗೆ 5 ಕೆ.ಜಿ ಉಚಿತ ಅಕ್ಕಿ ಮತ್ತು ಇನ್ನುಳಿದ 5 ಕೆ.ಜಿಗೆ ಅಕ್ಕಿ ಬದಲಾಗಿ ಕೆ.ಜಿಗೆ 34 ರೂ.ಗಳಂತೆ ಹಣ ಸಿಗಲಿದೆ. ಆದಷ್ಟು ಬೇಗ ಇನ್ನುಳಿದ 5 ಕೆ.ಜಿ ಅಕ್ಕಿ ಕೂಡ ಕೊಡುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...