ಇಸ್ರೋದಲ್ಲಿ 224 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Date:

ಬೆಂಗಳೂರು ಕೇಂದ್ರಿತ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ (ಇಸ್ರೋ) ನಾನಾ ಹುದ್ದೆಗಳ ಭರ್ತಿಗೆ ಉದ್ಯೋಗಾಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಇಸ್ರೋದಲ್ಲಿ ಇಂಜಿನಿಯರ್​, ತಾಂತ್ರಿಕ ಸಹಾಯಕರು, ಡ್ರಾಫ್ಟ್‌ಮ್ಯಾನ್, ಡ್ರೈವರ್​ ಸೇರಿದಂತೆ ಒಟ್ಟು 224 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.

ಸೈಂಟಿಸ್ಟ್​​ ಎಂಜಿನಿಯರ್​ -5, ಟೆಕ್ನಿಕಲ್​ ಸಹಾಯಕ – 55, ಸೈಂಟಿಫಿಕ್​​ ಸಹಾಯಕ – 6, ಲೈಬ್ರರಿ ಅಸಿಸ್ಟಂಟ್​ – 1, ಟೆಕ್ನಿಷಿಯನ್​ ಬಿ ಮತ್ತು ಡ್ರಾಫ್ಟ್​ ಮ್ಯಾನ್​ ಬಿ – 142, ಫೈರ್​​ ಮ್ಯಾನ್​ ಎ -3, ಕುಕ್​​ – 4, ಡ್ರೈವರ್ -​ 8 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮಾರ್ಚ್‌ 1 ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಇಸ್ರೋ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಸಕ್ತ ಅಭ್ಯರ್ಥಿಗಳು www.isro.gov.in ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ

ಸೈಂಟಿಸ್ಟ್​​, ಎಂಜಿನಿಯರ್​​, ಟೆಕ್ನಿಕ್​ ಮತ್ತು ಸೈಂಟಿಫಿಕ್​ ಸಹಾಯಕರ ಹುದ್ದೆಗೆ ಅಭ್ಯರ್ಥಿಗಳು ₹250 ಅರ್ಜಿ ಶುಲ್ಕ ಹಾಗೂ ಉಳಿದ ಹುದ್ದೆಗೆ ಅರ್ಜಿ ಶುಲ್ಕ ₹100 ಇದೆ. ಪ್ರೊಸೆಸಿಂಗ್​ ಶುಲ್ಕ ₹500 ರೂಪಾಯಿ ಆಗಿದೆ. ಮಹಿಳಾ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಕಲಚೇತನರಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಮಾತ್ರ ಪ್ರೋಸಸಿಂಗ್​​ ಶುಲ್ಕವನ್ನು ಮರುಪಾವತಿಸಲಾಗುತ್ತದೆ ಎಂದು ಹೇಳಿದೆ.

ಟೆಕ್ನಿಷಿಯನ್-ಬಿ, ಡ್ರಾಟ್ಸ್‌ಮನ್-ಬಿ, ಕುಕ್, ಫೈರ್‌ಮ್ಯಾನ್-ಎ, ಲಘು ವಾಹನ ಚಾಲಕ-ಎ ಮತ್ತು ಹೆವಿ ವೆಹಿಕಲ್ ಡ್ರೈವರ್-ಎ ಅರ್ಜಿ ಶುಲ್ಕವನ್ನು ಮರುಪಾವತಿಸಲಾಗುವುದಿಲ್ಲ. ಆರಂಭದಲ್ಲಿ ಎಲ್ಲ ಅಭ್ಯರ್ಥಿಗಳು ಏಕರೂಪವಾಗಿ ₹500 ಪಾವತಿಸಬೇಕು.

ವಿದ್ಯಾರ್ಹತೆ ವಿವರ

ಸೈಂಟಿಸ್ಟ್​​ ಇಂಜಿನಿಯರ್​ ಹುದ್ದೆಗೆ ಅಭ್ಯರ್ಥಿಗಳು ಬಿಇ, ಬಿಟೆಕ್​​, ಎಂಇ ಅಥವಾ ಎಂಟೆಕ್​, ಎಂಎಸ್ಸಿ ಪದವಿ ಪಡೆದಿರಬೇಕು. ಟೆಕ್ನಿಕಲ್​ ಸಹಾಯಕರ ಹುದ್ದೆಗೆ ಅಭ್ಯರ್ಥಿ ಇಂಜಿನಿಯರಿಂಗ್​ ಡಿಪ್ಲೊಮಾ ಪದವಿ, ಸೈಂಟಿಫಿಕ್​​ ಸಹಾಯಕರ ಹುದ್ದೆಗೆ ಬಿಎಸ್​​​​​ಸಿ ಪದವಿ, ಲೈಬ್ರರಿ ಸಹಾಯಕರ ಹುದ್ದೆಗೆ ಪದವಿ ಅಥವಾ ಸ್ನಾತಕೋತ್ತರ ಪದವಿ, ಟೆಕ್ನಿಷಿಯನ್​ ಬಿ ಮತ್ತು ಡ್ರಾಫ್ಟ್​ ಮ್ಯಾನ್​ ಬಿ, ಫೈರ್​​ ಮ್ಯಾನ್​ ಎ, ಕುಕ್​​, ಡ್ರೈವರ್​ ಹುದ್ದೆಗೆ ಅಭ್ಯರ್ಥಿಗಳು 10ನೇ ತರಗತಿ ಅಥವಾ ಐಟಿಐ ಉತ್ತೀರ್ಣರಾಗಿರಬೇಕು.

ವಯೋಮಿತಿ

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ದಾಖಲೆಗಳ ಅಗತ್ಯ

ಅಗತ್ಯವಿರುವ ದಾಖಲೆಗಳಲ್ಲಿ ಇತ್ತೀಚಿನ ಬಣ್ಣದ ಪಾಸ್‌ಪೋರ್ಟ್ ಗಾತ್ರದ ಫೋಟೋ, ಸಹಿ, ಅರ್ಹತಾ ಪ್ರಮಾಣಪತ್ರಗಳು ಮತ್ತು ಎಸ್‌ಸಿ/ಎಸ್‌ಟಿ/ಅಂಗವಿಕಲತೆ/ ಮಾಜಿ ಸೈನಿಕರ ಪ್ರಮಾಣಪತ್ರ (ಅನ್ವಯವಾಗುವಂತೆ) ದಾಖಲೆಗಳ ಅಗತ್ಯವಿದೆ. ಫೆಬ್ರವರಿ 10 ರಂದು ಪ್ರಾರಂಭಗೊಂಡಿರುವ ನೇಮಕಾತಿ ಪ್ರಕ್ರಿಯೆ 2024ರ ಮಾರ್ಚ್ 1ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಈ ಸುದ್ದಿ ಓದಿದ್ದೀರಾ? ನಮ್ಮ ಮೆಟ್ರೋ | ಮೂರನೇ ಹಂತದ ಯೋಜನೆಗೆ ₹1,003.47 ಕೋಟಿ ಅನುದಾನಕ್ಕೆ ಬೇಡಿಕೆ

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ, ಕಂಪ್ಯೂಟರ್​​ ಆಧಾರಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಈ ಹುದ್ದೆ ಕುರಿತ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಅಭ್ಯರ್ಥಿಗಳು isro.gov.in ಈ ವೆಬ್‌ಸೈಟ್‌ಗೆ​​ ಭೇಟಿ ನೀಡಬಹುದಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...