ಸಿಎಂ ಸಿದ್ದರಾಮಯ್ಯಗೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಆಪ್ತ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರ ನೇಮಕ

Date:

ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ಹಿರಿಯ ಐಎಎಸ್‌ ಅಧಿಕಾರಿ ರಜನೀಶ್‌ ಗೋಯಲ್‌, ಆಪ್ತ ಕಾರ್ಯದರ್ಶಿಯಾಗಿ ಹಿರಿಯ ಕೆಎಎಸ್ ಅಧಿಕಾರಿ ಡಾ. ವೆಂಕಟೇಶಯ್ಯ ಹಾಗೂ ಮಾಧ್ಯಮ ಸಲಹೆಗಾರರಾಗಿ ಹಿರಿಯ ಪತ್ರಕರ್ತ ಕೆ ವಿ ಪ್ರಭಾಕರ್‌ ಅವರನ್ನು ನೇಮಿಸಲಾಗಿದೆ.

ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಗಳ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ರಜನೀಶ್‌ ಗೋಯಲ್‌ ಅವರು ಸದ್ಯ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದು, ಅದರ ಜೊತೆಗೆ ಹೊಸ ಜವಾಬ್ದಾರಿ ವಹಿಸಲಾಗಿದೆ. ಡಾ. ವೆಂಕಟೇಶಯ್ಯ ಅವರು ಇಲ್ಲಿಯವರೆಗೆ ಸಿದ್ದರಾಮಯ್ಯ ಅವರಿಗೆ ವಿಶೇಷ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಹಾಗೆಯೇ ಕೆ ವಿ ಪ್ರಭಾಕರ್‌ ಅವರು ಮೀಡಿಯಾ ಕೋಆರ್ಡಿನೇಟರ್‌ ಆಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...