ದೇವೇಗೌಡ, ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಬಿ ವೈ ವಿಜಯೇಂದ್ರ

Date:

  • ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ
  • ನ.15ರಂದು ರಾಜ್ಯಾಧ್ಯಕ್ಷ ಜವಾಬ್ದಾರಿ ಸ್ವೀಕಾರ ಸಮಾರಂಭ 

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನಕ್ಕೆ ಮುಂದಾಗಿದ್ದು, ಸೋಮವಾರ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದುಕೊಂಡರು.

ಸೋಮವಾರ ಬೆಳಗ್ಗೆ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರನ್ನು ಭೇಟಿ ಮಾಡಿದ ವಿಜಯೇಂದ್ರ, ಮುಂದಿನ ಹೋರಾಟಕ್ಕೆ ಸಹಕಾರ ಹಾಗೂ ಮಾರ್ಗದರ್ಶನ ಕೋರಿದರು. ಇದಕ್ಕೂ ಮೊದಲು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ, ದೀಪಾವಳಿ ಶುಭಾಶಯ ತಿಳಿಸಿ ಅವರ ಆಶೀರ್ವಾದ ಪಡೆದುಕೊಂಡರು.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ವಿಜಯೇಂದ್ರ, “ಈ ನೇಮಕದಿಂದ ರಾಜ್ಯಕ್ಕೆ, ರಾಜ್ಯ ಬಿಜೆಪಿಗೆ ದೊಡ್ಡ ಶಕ್ತಿ ಬಂದಂತಾಗಿದೆ. ನಾನಷ್ಟೇ ಅಲ್ಲ; ಹಿರಿಯರೆಲ್ಲರೂ ನಿನ್ನ ಜೊತೆ ಇರಲಿದ್ದೇವೆ; ಸಹಕಾರ ನೀಡುವ ಮತ್ತು ಮಾರ್ಗದರ್ಶನ ನೀಡುವ ಮಾತನಾಡಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶದ ಭವಿಷ್ಯ ರೂಪಿಸುವ ಮುಂಬರುವ ಲೋಕಸಭಾ ಚುನಾವಣೆಯನ್ನು ನಾವೆಲ್ಲರೂ ಒಗ್ಗಟ್ಟಾಗಿ ಎದುರಿಸಬೇಕಾಗಿದೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸವನ್ನು ನಿನ್ನ ನೇತೃತ್ವದಲ್ಲಿ ಮಾಡೋಣ ಎಂದು ಬೊಮ್ಮಾಯಿ ಅವರು ಹೇಳಿದರು” ಎಂದರು.

“ನಾನು ರಾಜ್ಯಾಧ್ಯಕ್ಷನಾಗಿರುವುದಕ್ಕೆ ಬಸವರಾಜ ಬೊಮ್ಮಾಯಿ ಅವರು ಬಹಳ ಸಂತೋಷ ಪಟ್ಟಿದ್ದಾರೆ. ರಾಜ್ಯಾಧ್ಯಕ್ಷರಾಗಿ ನಿನ್ನ ನೇಮಕ ಮಾಡುವ ಮೂಲಕ ರಾಷ್ಟ್ರೀಯ ನಾಯಕರು ಅತ್ಯುತ್ತಮ ನಿರ್ಣಯ ಮಾಡಿದ್ದಾಗಿ ಬೊಮ್ಮಾಯಿ ಹೇಳಿದರು” ಎಂದು ತಿಳಿಸಿದರು.

“ನ.15ರಂದು ಬುಧವಾರ ರಾಜ್ಯಾಧ್ಯಕ್ಷ ಜವಾಬ್ದಾರಿ ಸ್ವೀಕರಿಸುವ ಸಂದರ್ಭದಲ್ಲಿ ತಾವು ಬಂದು ಆಶೀರ್ವಾದ ಮಾಡಬೇಕೆಂದು ಹಿರಿಯ ನಾಯಕರನ್ನು ಕೋರಿದ್ದೇನೆ. ಬರಲೆತ್ನಿಸುವುದಾಗಿ ತಿಳಿಸಿದ್ದಾರೆ” ಎಂದು ಹೇಳಿದರು.

ಭೇಟಿ ವೇಳೆ ಶಾಸಕ ಕೃಷ್ಣಪ್ಪ, ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...