ಬೆಂಗಳೂರು | ಕನ್ನಡ ನಾಮಫಲಕ ಬಳಸದ 18 ಉದ್ದಿಮೆಗಳು ತಾತ್ಕಾಲಿಕ ಬಂದ್

Date:

ಬೆಂಗಳೂರಿನ ಪೂರ್ವ ವಲಯ ವ್ಯಾಪ್ತಿಯಲ್ಲಿರುವ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಸದ ಉದ್ದಿಮೆಗಳ ಮೇಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕ್ರಮ ಕೈಗೊಳ್ಳಲಾಗುತ್ತಿದ್ದು, ಉದ್ದಿಮೆ ಮಾಲೀಕರಿಗೆ ಕೂಡಲೇ ಕನ್ನಡ ನಾಮಫಲಕಗಳನ್ನು ಅಳವಡಿಸಲು ಸೂಚನೆ ನೀಡಿದೆ.

ಅದರಂತೆ ಪೂರ್ವ ವಲಯ ವ್ಯಾಪ್ತಿಯಲ್ಲಿ ಫೆ.16ರಂದು ಶಾಂತಿನಗರ ಹಾಗೂ ಸಿ.ವಿ ರಾಮನ್‌ನಗರ ವ್ಯಾಪ್ತಿಯಲ್ಲಿ ವಲಯ ಆಯುಕ್ತೆ ಸ್ನೇಹಲ್, ವಲಯ ಜಂಟಿ ಆಯುಕ್ತೆ ಪಲ್ಲವಿ ರವರ ನಿರ್ದೇಶನದಂತೆ ವಲಯ ಆರೋಗ್ಯಾಧಿಕಾರಿಯಾದ ಡಾ. ಸವಿತಾ ಅವರ ನೇತೃತ್ವದಲ್ಲಿ ಆರೋಗ್ಯ ವೈದ್ಯಾಧಿಕಾರಿಗಳ ತಂಡವು ಉದ್ದಿಮೆಗಳನ್ನು ಪರಿಶೀಲಿಸಿ ನಿಯಮಾನುಸಾರ ಶೇ.60% ರಷ್ಟು ಕನ್ನಡ ಭಾಷೆ ನಾಮಫಲಕಗಳನ್ನು ಅಳವಡಿಸದಿರುವ ಉದ್ದಿಮೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

“ನಗರದ ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಮತ್ತು ರೆಸಿಡೆನ್ಸಿ ರಸ್ತೆಯಲ್ಲಿ ಇದುವರೆಗೆ 200ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳನ್ನು ಪರಿಶೀಲಿಸಲಾಗಿದೆ. ಈ ಪೈಕಿ 170ಕ್ಕೂ ಹೆಚ್ಚು ಮಳಿಗೆಗಳಲ್ಲಿ ಈಗಾಗಲೇ ಕನ್ನಡ ನಾಮಫಲಕಗಳನ್ನು ಅಳವಡಿಸಿಕೊಂಡಿದ್ದಾರೆ. ಇನ್ನು ಕನ್ನಡ ನಾಮಫಲಕ ಅಳವಡಿಸದೇ ಇರುವ ಮಳಿಗೆಗಳ ಮಾಲೀಕರಿಗೆ ಅಂತಿಮ ತಿಳುವಳಿಕೆ ಪತ್ರ ನೀಡಿ ಕೂಡಲೇ ನಾಮಫಲಕ ಬದಲಾಯಿಸಿಕೊಳ್ಳಲು ಸೂಚನೆ ನೀಡಲಾಗಿದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ದೇಹದೊಳಗೆ ₹9.2 ಕೋಟಿ ಮೌಲ್ಯದ ಕೊಕೇನ್ ಮರೆಮಾಚಿ ಅಕ್ರಮ ಸಾಗಾಟ

“ಆಂಗ್ಲ ಭಾಷೆ ಬಳಸಿರುವ ವಾಣಿಜ್ಯ ಮಳಿಗೆಗಳ ನಾಮಫಲಕಗಳನ್ನು ಆಂಗ್ಲ ಭಾಷೆ ಕಾಣದಂತೆ ಮುಚ್ಚಲ್ಪಟ್ಟಿದ್ದು, ಕೂಡಲೇ ಶೇ.60 ರಷ್ಟು ಕನ್ನಡ ಭಾಷೆಯ ನಾಮಫಲಕಗಳನ್ನು ಅಳವಡಿಸಿಕೊಳ್ಳುವಂತೆ ಪಾಲಿಕೆಯ ಆರೋಗ್ಯಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಇದಲ್ಲದೆ ನಗರದ ಬ್ರಿಗೇಡ್ ರಸ್ತೆ, ಎಂ.ಜಿ ರಸ್ತೆ ಹಾಗೂ ಚರ್ಚ್ ಸ್ಟ್ರೀಟ್‌ಗಳಲ್ಲಿ ಕನ್ನಡ ನಾಮಫಲಕ ಬಳಸದ ಸುಮಾರು 18 ಉದ್ದಿಮೆಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ತಪಾಸಣೆಯ ವೇಳೆ ವಲಯ ಆರೋಗ್ಯ ವೈದ್ಯಾಧಿಕಾರಿಗಳು, ಸ್ಥಳೀಯ ಪೋಲಿಸ್ ಸಿಬ್ಬಂದಿ, ಮಾರ್ಷಲ್‌ಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...