ಬೆಂಗಳೂರು | ₹11.77 ಲಕ್ಷ ಮೌಲ್ಯದ 47 ಕೆಜಿ ಗಾಂಜಾ ವಶ, ಇಬ್ಬರ ಬಂಧನ: ಪೊಲೀಸ್ ಆಯುಕ್ತ ದಯಾನಂದ

Date:

“ಬೆಂಗಳೂರು ನಗರ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಅಕ್ರಮ ಮಾದಕ ದ್ರವ್ಯ ಸಾಗಾಟಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ₹11,77,100 ಮೌಲ್ಯದ 47 ಕೆಜಿ 100 ಗ್ರಾಂ ಗಾಂಜಾ, ನಗದು ಹಾಗೂ 2 ಮೊಬೈಲ್ ಫೋನ್‌ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ” ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಹೇಳಿದರು.

ಶುಕ್ರವಾರ ವಾರದಗೋಷ್ಟಿಯಲ್ಲಿ ಮಾತನಾಡಿದ ಅವರು, “ಬೆಂಗಳೂರಿನ ಪುಲಕೇಶಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಿಕ್ಷಾಟನೆ ದಂಧೆಯಿಂದ 47 ಅಪ್ರಾಪ್ತ ಮಕ್ಕಳನ್ನು ಪೊಲೀಸ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಂಟಿ ಕಾರ್ಯಾಚರಣೆಯಲ್ಲಿ ರಕ್ಷಿಸಲಾಗಿದೆ. ಈ ದಂಧೆಯಲ್ಲಿ ತೊಡಗಿದ್ದ 36 ಮಹಿಳೆಯರನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ” ಎಂದರು.

“ಮಾರ್ಚ್‌ 29ರಂದು ರಾಜಗೋಪಾಲನಗರ ಪೊಲೀಸ್ ಠಾಣಾ ಅಪರಾಧ ವಿಭಾಗವು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 4 ಜನರನ್ನು ಬಂಧಿಸಿದ್ದು, ಬಂಧಿತರ ಪೈಕಿ ಒಬ್ಬರು ರಾಜಗೋಪಾಲನಗರದ ರೌಡಿಯಾಗಿದ್ದಾನೆ. ಅಧಿಕಾರಿಗಳು ₹28,50,000 ಮೌಲ್ಯದ ದ್ವಿಚಕ್ರ ವಾಹನದ ಜತೆಗೆ 470 ಗ್ರಾಂ ಚಿನ್ನಾಭರಣಗಳು, 500 ಗ್ರಾಂ ಬೆಳ್ಳಿ ವಸ್ತುಗಳು ಹಾಗೂ ₹50,000 ನಗದು ವಶಪಡಿಸಿಕೊಂಡಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...


“ಸಂಜಯನಗರ ಠಾಣೆಯ ಪೊಲೀಸರು ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಅಪರಾಧಕ್ಕೆ ಬಳಸಿದ 1 ದ್ವಿಚಕ್ರ ವಾಹನದ ಜೊತೆಗೆ ₹10,00,000 ಮೌಲ್ಯದ 151 ಗ್ರಾಂ ಚಿನ್ನಾಭರಣವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಹೆಚ್ಚಿನ ತನಿಖೆಯಿಂದ ಬಂಧಿತರಲ್ಲಿ ಒಬ್ಬ ಗಿರಿನಗರ ಪೊಲೀಸ್ ಠಾಣೆಯ ರೌಡಿ ಪಟ್ಟಿಯಲ್ಲಿದ್ದಾನೆ ಎಂದು ತಿಳಿದುಬಂದಿದೆ” ಎಂದರು.

“2012ರಲ್ಲಿ ಡಕಾಯಿತಿ ಪ್ರಕರಣ ಮತ್ತು 2009ರಲ್ಲಿ ಹಲ್ಲೆ ಪ್ರಕರಣ ಸೇರಿದಂತೆ ಬೆಂಗಳೂರು ಮತ್ತು ತಮಿಳುನಾಡಿನಲ್ಲಿ ಒಟ್ಟು 10 ಪ್ರಕರಣಗಳನ್ನು ಎದುರಿಸುತ್ತಿದ್ದ ದೀರ್ಘಕಾಲದವರೆಗೆ ತಲೆಮರೆಸಿಕೊಂಡಿದ್ದ ಇಬ್ಬರನ್ನು ಏ.8ರಂದು ಬಸವನಗುಡಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಬಂಧಿತ ಆರೋಪಿಗಳು ಕಳೆದ 8 ವರ್ಷಗಳಿಂದ ಪರಾರಿಯಾಗಿದ್ದರು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ | ಇಬ್ಬರು ಶಂಕಿತರನ್ನು ಪಶ್ಚಿಮ ಬಂಗಾಳದ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ ಎನ್​ಐಎ

“ವೈಟ್‌ಫೀಲ್ಡ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸರಣಿ ಮೊಬೈಲ್ ದರೋಡೆಗಳಿಗೆ ಸಂಬಂಧಿಸಿದಂತೆ 6 ಅಂತಾರಾಜ್ಯ ಅಪರಾಧಿಗಳನ್ನು ಏ.5ರಂದು ಪೊಲೀಸರು ಬಂಧಿಸಿದ್ದಾರೆ. ಮೊಬೈಲ್ ಫೋನ್ ಪಿಕ್ ಪಾಕೆಟ್ ಮಾಡಲು ಜನದಟ್ಟಣೆಯ ಬಿಎಂಟಿಸಿ ಬಸ್‌ಗಳನ್ನು ಗುರಿಯಾಗಿಸಿಕೊಂಡು ಇತರ ರಾಜ್ಯಗಳಲ್ಲಿ ಮಾರಾಟ ಮಾಡಲಾಗುತ್ತಿದೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...