ಬೆಂಗಳೂರು | 2 ವರ್ಷದಲ್ಲಿ 259ಕ್ಕೂ ಹೆಚ್ಚು ಮಹಿಳೆಯರಿಗೆ ವಂಚಿಸಿದ 45 ವರ್ಷದ ವ್ಯಕ್ತಿಯ ಬಂಧನ

Date:

45 ವರ್ಷದ ವ್ಯಕ್ತಿಯೊಬ್ಬ ಮ್ಯಾಟ್ರಿಮೋನಿಯಲ್ ಸೈಟ್ ಮತ್ತು ಸಾಮಾಜಿಕ ಜಾಲತಾಣದಲ್ಲಿ 259ಕ್ಕೂ ಹೆಚ್ಚು ಮಹಿಳೆಯರೊಂದಿಗೆ ಸ್ನೇಹ ಬೆಳೆಸಿ, ಅವರ ಪೋಷಕರಿಗೆ ಹಣ ನೀಡುವಂತೆ ಆಮಿಷವೊಡಿದ್ದವನನ್ನು ಬೆಂಗಳೂರು ರೈಲ್ವೆ ಪೊಲೀಸರು ಬಂಧಿಸಿದ್ದಾರೆ.

ನರೇಶ್ ಪೂಜಾರಿ ಗೋಸ್ವಾಮಿ (45) ಬಂಧಿತ ವ್ಯಕ್ತಿ. ಈತ ಮೂಲತಃ ರಾಜಸ್ಥಾನದವನು. ಕಳೆದ 20 ವರ್ಷದಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾನೆ.

ಈತ ಮ್ಯಾಟ್ರೀಮೋನಿಯಲ್ ಸೈಟ್ ಮತ್ತು ಸಾಮಾಜಿಕ ಜಾಲತಾಣದಲ್ಲಿ ನಕಲಿ ಪ್ರೊಫೈಲ್‌ ಸೃಷ್ಟಿ ಮಾಡುತ್ತಿದ್ದನು. ತನ್ನ ಪ್ರೊಫೈಲ್‌ಗಳಿಗೆ ಸುಂದರ ಯುವಕರ ಫೋಟೋ ಬಳಸಿ ಆನ್‌ಲೈನ್‌ನಲ್ಲಿ ಪ್ರೊಫೈಲ್ ರಚಿಸುತ್ತಿದ್ದನು. ಅಲ್ಲದೇ, ತನ್ನನ್ನು ಕಸ್ಟಮ್ ಅಧಿಕಾರಿ ಮತ್ತು ಸಾಫ್ಟ್‌ವೇರ್ ಎಂಜಿನಿಯರ್ ಎಂದು ಹೇಳಿಕೊಳ್ಳುತ್ತಿದ್ದನು. ಈತ ಹೆಚ್ಚಾಗಿ ವಿಧವೆಯರು ಹಾಗೂ ವಿಚ್ಛೇದಿತ ಮಹಿಳೆಯರಿಗೆ ವಂಚನೆ ಮಾಡುತ್ತಿದ್ದನು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಡರಾತ್ರಿಯವರೆಗೂ ಮಹಿಳೆಯರೊಂದಿಗೆ ಸಂದೇಶ ಕಳುಹಿಸಿ, ಅವರೊಂದಿಗೆ ಮಾತನಾಡುತ್ತಿದ್ದನು. ಅವರ ವಿಶ್ವಾಸ ಗಳಿಸಿ ಹಣ ನೀಡುವಂತೆ ಮಹಿಳೆಯರು ಮತ್ತು ಅವರ ಪೋಷಕರಿಗೆ ಆಮಿಷವೊಡ್ಡುತ್ತಿದ್ದನು. ಈತ ಮಹಿಳೆಯರೊಂದಿಗೆ ಮಾತನಾಡಲು ಬೇರೆ ಬೇರೆ ನಕಲಿ ಹೆಸರಿನ ಸಿಮ್ ಕಾರ್ಡ್‌ಗಳನ್ನು ಬಳಸಿದ್ದಾನೆ ಎಂದು ಬೆಂಗಳೂರಿನ ರೈಲ್ವೆ ಡಿಐಜಿಪಿ ಡಾ. ಎಸ್‌.ಡಿ.ಶರಣಪ್ಪ ತಿಳಿಸಿದ್ದಾರೆ.

ಕೊಯಮತ್ತೂರು ಮೂಲದ ಮಹಿಳೆಯೊಬ್ಬರನ್ನ ಮದುವೆ ಮಾತುಕತೆಗೆ ಬೆಂಗಳೂರಿಗೆ ಕರೆಸಿಕೊಳ್ಳುತ್ತಿದ್ದನು. ಬಳಿಕ, ಟಿಕೆಟ್ ರಿಸರ್ವೇಷನ್ ಮಾಡಿಸಬೇಕಿರುವುದರಿಂದ ಪರ್ಸ್ ಮನೆಯಲ್ಲಿಯೇ ಬಿಟ್ಟು ಬಂದಿದ್ದಾಗಿ ತಿಳಿಸಿ ಹಣ ಪಡೆಯುತ್ತಿದ್ದನು. ಆರೋಪಿ ಎರಡು ಸಿಮ್ ಕಾರ್ಡ್‌ಗಳನ್ನ ಬ್ಲಾಕ್‌ನಲ್ಲಿ ಬಳಸುತ್ತಿದ್ದನು.

ಆರೋಪಿ ಕೊಯಮತ್ತೂರು ಸಂತ್ರಸ್ತೆಯ ಪೋಷಕರನ್ನು ಭೇಟಿಯಾಗಲು ಬೆಂಗಳೂರಿಗೆ ಕರೆದಿದ್ದನು. ತನ್ನ ಸಂಬಂಧಿಕರಿಗೆ ಟಿಕೆಟ್ ಕಾಯ್ದಿರಿಸುವುದಾಗಿ ಹೇಳಿ ರೈಲ್ವೆ ನಿಲ್ದಾಣದಲ್ಲಿ ಅವರಿಂದ ₹10 ಸಾವಿರ ಪಡೆದು ರೈಲು ನಿಲ್ದಾಣದಿಂದ ಪರಾರಿಯಾಗಿದ್ದಾನೆ. ಕೊಯಮತ್ತೂರಿನ ಸಂತ್ರಸ್ತೆಯೊಬ್ಬರು ಈ ಬಗ್ಗೆ ರೈಲ್ವೆ ಪೊಲೀಸರಿಗೆ ದೂರು ನೀಡಿದ್ದು, ದೂರಿನ ಮೇರೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ತೆರವು ವೇಳೆ ಜೆಸಿಬಿಗೆ ಬೆಂಕಿ ಹಚ್ಚಿದ ಒತ್ತುವರಿದಾರ

ಬಂಧಿತ ವ್ಯಕ್ತಿ ಸುಮಾರು 259 ಮಹಿಳೆಯರಿಗೆ ವಂಚನೆ ಮಾಡಿದ್ದಾಗಿ ತಿಳಿದುಬಂದಿದೆ. ರಾಜಸ್ಥಾನದಿಂದ 56, ಉತ್ತರ ಪ್ರದೇಶದ 32, ದೆಹಲಿಯಿಂದ 32, ಕರ್ನಾಟಕದಿಂದ 17, ಮಧ್ಯಪ್ರದೇಶದಿಂದ 16, ಮಹಾರಾಷ್ಟ್ರದಿಂದ 13, ಗುಜರಾತ್‌ನಿಂದ 11, ತಮಿಳುನಾಡಿನಿಂದ 6, ಬಿಹಾರ ಮತ್ತು ಜಾರ್ಖಂಡ್‌ನಿಂದ 6 ಮತ್ತು ಆಂಧ್ರಪ್ರದೇಶ 2 ಮಹಿಳೆಯರಿಗೆ ಈತ ವಂಚನೆ ಮಾಡಿದ್ದಾನೆ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಪ್ರಕರಣದ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...