ಬೆಂಗಳೂರು | ವ್ಹಿಲೀಂಗ್ ಮಾಡುತ್ತಿದ್ದ 14 ವಾಹನ ಸವಾರರ ವಿರುದ್ಧ ಪ್ರಕರಣ ದಾಖಲು

Date:

ಬೆಂಗಳೂರು ಪೊಲೀಸರು ವ್ಹಿಲೀಂಗ್ ಮಾಡುವ ಅಪಾಯದ ಬಗ್ಗೆ ನಿತ್ಯ ಜಾಗೃತಿ ಮೂಡಿಸುತ್ತಿದ್ದಾರೆ. ಸಾರ್ವಜನಿಕರ ಸುರಕ್ಷತೆಗೆ ಅಪಾಯ ತಂದೊಡ್ಡುವ ವ್ಹಿಲೀಂಗ್ ಮಾಡಬೇಡಿ ಎಂದು ಎಷ್ಟೇ ಹೇಳಿದರೂ ಪುಂಡರ ಪುಂಡಾಟಿಕೆ ಮುಂದುವರೆದಿದೆ. ಹೆದ್ದಾರಿ, ಪ್ರಮುಖ ರಸ್ತೆ ಸೇರಿದಂತೆ ಜನಸಂದಣಿ ಪ್ರದೇಶಗಳಲ್ಲಿಯೂ ಕೂಡ ವ್ಹಿಲೀಂಗ್ ಮಾಡುತ್ತಿದ್ದಾರೆ. ಇದೀಗ, ವಿಶೇಷ ಕಾರ್ಯಾಚರಣೆ ನಡೆಸಿದ ಬೆಂಗಳೂರು ಉತ್ತರ ವಿಭಾಗದ ಟ್ರಾಫಿಕ್ ಪೊಲೀಸರು ರಸ್ತೆಗಳಲ್ಲಿ ವ್ಹಿಲೀಂಗ್ ಮಾಡುತ್ತಿದ್ದ 14 ಬೈಕ್ ಸವಾರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ದ್ವಿಚಕ್ರ ವಾಹನ ಸವಾರರು ರಸ್ತೆಯಲ್ಲಿ ಸಂಚರಿಸುವವರಿಗೆ ತೊಂದರೆ ನೀಡುತ್ತಿದ್ದಾರೆ ಎಂಬ ಸಾಮಾಜಿಕ ಜಾಲತಾಣದಲ್ಲಿ ಬಂದಿದ್ದ ದೂರಿನ ಆಧಾರದ ಮೇಲೆ ಬುಧವಾರ ವಿಶೇಷ ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ.

ಸಂಚಾರ ಉತ್ತರ ವಿಭಾಗದ ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿನ ರಿಂಗ್ ರಸ್ತೆ, ವಾಟಾಳ್ ನಾಗರಾಜ್ ರಸ್ತೆಯ ಬಾಷ್ಯಂ ಸರ್ಕಲ್, ಕೆ.ಎಲ್.ಇ ಕಾಲೇಜ್ ಮುಂಭಾಗ, ಮೆಟ್ರೋ ನಿಲ್ದಾಣ ಬಳಿ, ಮುತ್ಯಾಲಮ್ಮ ದೇವಾಲಯ ಮುಂಭಾಗ, ವೆಸ್ಟ್ ಆಫ್ ಕಾರ್ಡ್ ರಸ್ತೆ, ಇನ್ನಿತರೆ ಸಾರ್ವಜನಿಕ ರಸ್ತೆಗಳಲ್ಲಿ ಅಪಾಯಕಾರಿಯಾಗಿ ಸಾರ್ವಜನಿಕರ ಪ್ರಾಣಕ್ಕೆ ಹಾಗೂ ಸಾರ್ವಜನಿಕ ಆಸ್ತಿಗೆ ತೊಂದರೆ ಉಂಟಾಗುವಂತೆ ವಾಹನಗಳನ್ನು ಚಲಾಯಿಸಿ ವ್ಹಿಲೀಂಗ್ ಮಾಡುತ್ತಿದ್ದವರ ವಿರುದ್ಧ ಜನವರಿ 1ರಿಂದ ಮೇ 6 ರವರೆಗೆ ಒಟ್ಟು 14 ವ್ಹಿಲೀಂಗ್ ಪ್ರಕರಣಗಳನ್ನು ದಾಖಲಿಸಿದೆ ಎಂದು ಮಾಹಿತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಾಹನಗಳನ್ನು ವಶಪಡಿಸಿಕೊಂಡಿರುವ ಪೊಲೀಸರು 12 ಆರೋಪಿಗಳನ್ನು ಬಂಧನ ಮಾಡಿದ್ದಾರೆ. ಈ ಪೈಕಿ ಇಬ್ಬರು ಬಾಲಕರು ಬೈಕ್ ವ್ಹಿಲೀಂಗ್ ಮಾಡುತ್ತಿದ್ದು, ಈ ಹಿನ್ನೆಲೆ, ವಾಹನದ ಮಾಲೀಕ ಅಥವಾ ಪೋಷಕರ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ. 5 ಡಿಎಲ್ ಅಮಾನತ್ತು ಪಡಿಸಲು ಸಂಬಂಧಪಟ್ಟ ಆರ್‌ಟಿಓ ಅಧಿಕಾರಿಗಳಿಗೆ ಕಳುಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವರ್ಷದ ಮೊದಲ ಮಳೆ; ರಸ್ತೆಗಳು ಜಲಾವೃತ, ನೆಲಕ್ಕೊರಗಿದ ಮರಗಳು, ಸಂಚಾರ ಅಸ್ತವ್ಯಸ್ತ

“ಐದು ಡ್ರೈವಿಂಗ್ ಲೈಸೆನ್ಸ್‌ಗಳನ್ನು ವಶಪಡಿಸಿಕೊಂಡು ಅಮಾನತಿಗೆ ಶಿಫಾರಸು ಮಾಡಿ ಸಂಬಂಧಪಟ್ಟ ಆರ್‌ಟಿಒ ಅಧಿಕಾರಿಗಳಿಗೆ ಕಳುಹಿಸಲಾಗಿದೆ” ಎಂದು ಉತ್ತರ ವಿಭಾಗದ ಸಂಚಾರ ವಿಭಾಗದ ಡಿಸಿಪಿ ಸಿರಿ ಗೌರಿ ಡಿ.ಆರ್ ಹೇಳಿದ್ದಾರೆ.

“ಈ ರೀತಿ ಸಾಮಾಜಿಕ ಶಾಂತಿಯ ಭಂಗಕ್ಕೆ ಕಾರಣರಾಗುವವರ ವಿರುದ್ಧ ಕಾನೂನಿನ ಅಡಿಯಲ್ಲಿ ಮುಂದಿನ ದಿನಗಳಲ್ಲಿಯೂ ಸಹ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

ಈ ಕಾರ್ಯಾಚರಣೆಯನ್ನು ಪೊಲೀಸ್ ಇನ್ಸ್‌ಪೆಕ್ಟರ್ ಅವರ ನೇತೃತ್ವದಲ್ಲಿ ಠಾಣಾವಾರು ತಂಡವನ್ನು ರಚಿಸಿಕೊಂಡು ಕ್ರಮ ಕೈಗೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...