ಬೆಂಗಳೂರು | ಹೊಸ ಕಾರಿನ ಮೇಲೆ ಬಿದ್ದ ದೊಡ್ಡ ಮರ; ಕಾರು ಸಂಪೂರ್ಣ ಜಖಂ

Date:

ಹೊಚ್ಚ ಹೊಸ ಕಾರಿನ ಮೇಲೆ ದೊಡ್ಡ ಒಣಗಿದ ಮರ ಬಿದ್ದು, ಕಾರು ಸಂಪೂರ್ಣವಾಗಿ ಜಖಂ ಆದ ಘಟನೆ ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿ ನಡೆದಿದೆ. ಸದ್ಯ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ನಗರದ ಹೃದಯ ಭಾಗದ ಲ್ಯಾವೆಲ್ಲೆ ರಸ್ತೆಯಲ್ಲಿ ಮೇ 2ರಂದು ಬೆಳಗ್ಗೆ 9.15ರ ಸುಮಾರಿಗೆ ಹಳೆಯ ದೊಡ್ಡದಾದ ಒಣಗಿದ ಮರವೊಂದು ನೆಲಕ್ಕುರುಳಿದೆ.

ಬೌರಿಂಗ್ ಇನ್‌ಸ್ಟಿಟ್ಯೂಟ್ ಹಿಂಭಾಗದಲ್ಲಿರುವ ದಕ್ಷಿಣ್ ಹೋಂಡಾ ಕಾರ್ ಡೀಲರ್‌ಶಿಪ್ ಎದುರು ಹೊಸದಾಗಿ ನೋಂದಾಯಿಸಲಾದ ಹೋಂಡಾ ಎಲಿವೇಟ್ ಎಸ್‌ಯುವಿ ಕಾರು ನಿಲ್ಲಿಸಲಾಗಿತ್ತು. ಒಣಗಿದ ಮರವು ಈ ಹೊಚ್ಚ ಹೊಸ ಕಾರಿನ ಮೇಲೆ ಬಿದ್ದಿದೆ. ಅದರ ಛಾವಣಿ ಮತ್ತು ವಿಂಡ್‌ಶೀಲ್ಡ್ ಹಾನಿಗೊಳಗಾಗಿದೆ. ಯಾರಿಗೂ ಗಾಯಗಳಾದ ಬಗ್ಗೆ ವರದಿಯಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಥಳಕ್ಕೆ ಕಬ್ಬನ್ ಪಾರ್ಕ್ ಸಂಚಾರ ಪೊಲೀಸರು ದೌಡಾಯಿಸಿ ಅವಶೇಷಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

“ಬೌರಿಂಗ್ ಇನ್ಸ್ಟಿಟ್ಯೂಟ್ ಕಾಂಪೌಂಡ್ ಗೋಡೆಯಿಂದ ಚಾಚಿಕೊಂಡಿರುವ ಮರವು ಹಲವಾರು ವರ್ಷಗಳಿಂದ ಒಣಗಿದೆ. ಅಲ್ಲದೇ, ಬಿಸಿಲಿನ ತಾಪಕ್ಕೆ ಮರ ಬಿದ್ದಿರುವ ಸಾಧ್ಯತೆ ಇದೆ” ಎಂದು ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದರು.

ಘಟನೆ ನಡೆದ ಕೆಲವೇ ನಿಮಿಷಗಳಲ್ಲಿ ಸಂಚಾರ ಪೊಲೀಸರು ಪ್ರಯಾಣಿಕರು ಪರ್ಯಾಯ ಮಾರ್ಗದಲ್ಲಿ ತೆರಳುವಂತೆ ಸವಾರರಿಗೆ ಸಲಹೆ ಸೂಚನೆ ನೀಡಿ ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೋರ್‌ವೆಲ್ ಕೊರೆಯುತ್ತಿರುವ ಜಲಮಂಡಳಿ; ಧೂಳಿನಲ್ಲಿ ಮುಳುಗಿದ ಬೆಂಗಳೂರು

ಮರಗಳು ಬಿದ್ದು ಸಾವು-ನೋವುಗಳಿಗೆ ಕಾರಣವಾಗುವ ಇಂತಹ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ವರದಿಯಾಗುತ್ತಿವೆ. ಏಪ್ರಿಲ್ 5 ರಂದು ಶಾಂತಿನಗರದ ನಂಜಪ್ಪ ರಸ್ತೆಯಲ್ಲಿ ದೊಡ್ಡ ಮರವೊಂದು ಉರುಳಿ ಬಿದ್ದ ಪರಿಣಾಮ ಚಂಚಲ್ ಚೌಧರಿ ಎಂಬುವವರು ಗಾಯಗೊಂಡಿದ್ದರು.

ಕಳೆದ ವರ್ಷ ಜುಲೈನಲ್ಲಿ 18 ವರ್ಷದ ರಾಜಶೇಖರ್ ಕೆ ವಿ ಎಂಬ ವಿದ್ಯಾರ್ಥಿಯು ಚಂದ್ರಿಕಾ ಹೋಟೆಲ್ ಜಂಕ್ಷನ್‌ನಲ್ಲಿ ಬೃಹತ್ ಮರವೊಂದು ಬಿದ್ದು ಅವರಿಗೆ ಗಂಭೀರ ಗಾಯಗಳಾಗಿದ್ದವು. ಈ ಘಟನೆ ನಡೆದು ಸುಮಾರು ಒಂದು ವರ್ಷ ಕಳೆದಿದೆ. ಆದರೆ, ರಾಜಶೇಖರ್ ಅವರು ಇನ್ನೂ ನಡೆಯಲು ಇನ್ನು ಚಿಕಿತ್ಸೆ ಪಡೆಯುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...