ಬೆಂಗಳೂರು | ಫೇಸ್‌ಬುಕ್‌ನಲ್ಲಿ ಕಾಲ್‌ ಗರ್ಲ್‌ ಎಂದು ತನ್ನ ಪತ್ನಿಯ ಫೋಟೋ ಹಾಕಿದ ವಿಕೃತ ಪತಿ

Date:

ವಿಚ್ಛೇದನ ಪಡೆಯಲು ಮುಂದಾಗಿದ್ದ ಪತ್ನಿ ಮೇಲೆ ಸೇಡು ತೀರಿಸಿಕೊಳ್ಳಲು ಪತಿ ಆಕೆಯ ಫೋಟೋ ಮತ್ತು ಮೊಬೈಲ್‌ ಸಂಖ್ಯೆಯನ್ನು ಸಾಮಾಜಿಕ ಜಾಲತಾಣದಲ್ಲಿ ಅಪಲೋಡ್ ಮಾಡಿ ‘ಕಾಲ್ ಗರ್ಲ್​ ಬೇಕೇ’? ಕರೆ ಮಾಡಿ ಎಂದು ಪೋಸ್ಟ್‌ ಹಾಕಿದ ವಿಲಕ್ಷಣ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ.

ಈ ಬಗ್ಗೆ ಬೆಂಗಳೂರಿನ ನಂದಿನಿ ಲೇಔಟ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾಂಪತ್ಯ ಕಲಹವೇ ಈ ಘಟನೆಗೆ ಮುಖ್ಯ ಕಾರಣ ಎಂಬುದು ಪ್ರಾಥಮಿಕ ಹಂತದ ತನಿಖೆ ಎಂದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತ್ನಿ ವಿರುದ್ಧ ಸೇಡು ತೀರಿಸಿಕೊಳ್ಳಲು ಸತ್ಯನಾರಾಯಣ ರೆಡ್ಡಿ ಎಂಬ ವ್ಯಕ್ತಿ ಕಲಾಶಶಿ ಎಂಬ ಫೇಸ್‌ಬುಕ್‌ ಪೇಜ್ ಅನ್ನು ಕ್ರಿಯೇಟ್ ಮಾಡಿದ್ದಾನೆ. ಅದರಲ್ಲಿ ವಿಚ್ಛೇದನ ನೀಡಲು ಹೊರಟಿರುವ ಪತ್ನಿ, ಆಕೆಯ ಸಹೋದರಿ ಹಾಗೂ ಸಹೋದರನ ನಂಬರ್ ಹಾಕಿದ್ದಾನೆ ಎಂದು ಎಫ್‌ಐಆರ್‌ನಲ್ಲಿ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂದಿನಿ ಲೇಔಟ್ ವ್ಯಾಪ್ತಿಯ ಸತ್ಯನಾರಾಯಣ ರೆಡ್ಡಿ ಎಂಬುವವರ ವಿರುದ್ಧ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾಳೆ.

2019ರಲ್ಲಿ ವಿವಾಹವಾಗಿದ್ದ ಸತ್ಯನಾರಾಯಣ ರೆಡ್ಡಿ ಮತ್ತು ಆತನ ಪತ್ನಿ ವೈಯಕ್ತಿಕ ಕಲಹದ ಕಾರಣದಿಂದ ಒಂದು ವರ್ಷದ ಹಿಂದೆ ದೂರವಾಗಿದ್ದರು. ಕಳೆದ ಒಂದು ವರ್ಷದಿಂದ ಪತಿಯು ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದ ಕಾರಣ ಪತ್ನಿ ಆತನಿಂದ ದೂರವಾಗಿದ್ದಳು. ಹೀಗಾಗಿ, ಡಿವೊರ್ಸ್‌ ಕೂಡ ಪಡೆಯಲು ಮುಂದಾಗಿದ್ದಳು ಎಂದು ತಿಳಿದುಬಂದಿದೆ.

ಈ ವಿಚಾರದಲ್ಲಿ ಕೋಪಗೊಂಡಿದ್ದ ಸತ್ಯನಾರಾಯಣ ಡಿವೋರ್ಸ್​ಗೆ ಅರ್ಜಿ ಹಾಕಿದ್ದನ್ನು ಸಹಿಸದೆ ತನ್ನ ಪತ್ನಿಯ ವಿರುದ್ಧ ಸೇಡು ತೀರಿಸಿಕೊಳ್ಳಲು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಎಸ್‌ಎಸ್‌ಎಲ್‌ಸಿ | ಮೇ ಮೊದಲ ವಾರದೊಳಗೆ ಫಲಿತಾಂಶ ಪ್ರಕಟ ಸಾಧ್ಯತೆ

ಸತ್ಯನಾರಾಯಣ ರೆಡ್ಡಿ ‘ಕಲಾ ಶಶಿ’ ಎಂಬ ಫೇಸ್‌ಬುಕ್ ಪೇಜ್ ಕ್ರಿಯೇಟ್ ಮಾಡಿದ್ದನು. ಆರೋಪಿ ಅದರಲ್ಲಿ ಪತ್ನಿಯ ದೂರವಾಣಿ ಸಂಖ್ಯೆ, ಫೋಟೋ ಮತ್ತು ಆಕೆಯ ಸಹೋದರನ ಮೊಬೈಲ್ ಸಂಖ್ಯೆ ಕೂಡ ಪೋಸ್ಟ್ ಮಾಡಿದ್ದನು. ಇಷ್ಟೇ ಅಲ್ಲದೆ, ಕಾಲ್ ಗರ್ಲ್ ಬೇಕಿದ್ದಲ್ಲಿ ಸಂಪರ್ಕಿಸಿ ಎಂದು ಪೋಸ್ಟ್ ಹಾಕಿದ್ದನು. ಇದರಿಂದಾಗಿ ಸಂತ್ರಸ್ತೆ ಮತ್ತು ಆಕೆಯ ಸಹೋದರನಿಗೆ ಸಾಕಷ್ಟು ಕರೆಗಳು ಬಂದಿವೆ. ಇದರಿಂದ ಬೇಸತ್ತ ಮಹಿಳೆ ಹಾಗೂ ಆಕೆಯ ಸಹೋದರ ನಂದಿನಿ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...