ಬೆಂಗಳೂರು ವಿಮಾನ ನಿಲ್ದಾಣ | ಶೌಚಾಲಯದ ಕನ್ನಡಿ ಮೇಲೆ ‘ಸ್ಫೋಟ ಮಾಡುವುದಾಗಿ’ ಬೆದರಿಕೆ ಸಂದೇಶ

Date:

ವಿಮಾನ ನಿಲ್ದಾಣದ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಕಚೇರಿಯನ್ನು ಸ್ಫೋಟ ಮಾಡುವುದಾಗಿ ನಿಲ್ದಾಣದ ಶೌಚಾಲಯದ ಕನ್ನಡಿ ಮೇಲೆ ಬೆದರಿಕೆ ಸಂದೇಶ ಬರೆದ ಘಟನೆ ಬೆಂಗಳೂರಿನ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಈ ಬಗ್ಗೆ ವಿಚಾರ ತಿಳಿಯುತ್ತಿದ್ದಂತೆ ಶ್ವಾನದಳ‌ ಹಾಗೂ ಸಿಐಎಸ್ಎಫ್​ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಆ ಬಳಿಕ, ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದುಬಂದಿದೆ.

“25 ನಿಮಿಷದಲ್ಲಿ ಕಟ್ಟಡಗಳು ಸ್ಪೋಟವಾಗಲಿವೆ” ಎಂದು ವಿಮಾನ ನಿಲ್ದಾಣದ ಆಲ್ಪಾ 3 ಬಿಲ್ಡಿಂಗ್​ನಲ್ಲಿನ ಶೌಚಾಲಯದ ಕನ್ನಡಿ ಮೇಲೆ ಬರೆಯಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿಲ್ದಾಣದ ಸಿಬ್ಬಂದಿ ಬೆಳಿಗ್ಗೆ ಶೌಚಾಲಯಕ್ಕೆ ತೆರಳಿದ ವೇಳೆ, ಕನ್ನಡಿಯ ಮೇಲೆ ಬರೆದ ಬರಹವನ್ನು ಕಂಡು ಕೂಡಲೇ ಭದ್ರತಾ ಪಡೆಗೆ ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಹಾಲಕ್ಷ್ಮೀ ಯೋಜನೆ | ಕಾಂಗ್ರೆಸ್‌ ಗೆಲುವಿನ ಭರವಸೆ; ಖಾತೆ ತೆರೆಯಲು ಪೋಸ್ಟ್‌ ಆಫೀಸ್‌ ಮುಂದೆ ನಿಂತ ಮಹಿಳೆಯರು

ಕನ್ನಡಿ ಮೇಲೆ ಬರೆದಿದ್ದ ಈ ಬೆದರಿಕೆ ಸಂದೇಶದಿಂದ ನಿಲ್ದಾಣದ ಸಿಬ್ಬಂದಿ ಹಾಗೂ ಭದ್ರತಾ ಪಡೆ ಕೆಲಕಾಲ ಆತಂಕಕ್ಕೆ ಒಳಗಾಗಿದ್ದರು.

ಈ ಬಗ್ಗೆ ಪರಿಶೀಲನೆ ನಡೆಸಿದ ಬಳಿಕ ಇದೊಂದು ಹುಸಿ ಬಾಂಬ್ ಸಂದೇಶ ಎಂದು ತಿಳಿದುಬಂದಿದೆ. ಇನ್ನು ಸಿಬ್ಬಂದಿಯಿಂದಲೇ ಹುಸಿ ಬೆದರಿಕೆ ಸಂದೇಶ ಬರೆದಿರುವ ಶಂಕೆ ವ್ಯಕ್ತವಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...