ಬೆಂಗಳೂರು | ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯ: ಸರಣಿ ಅಪಘಾತ

Date:

ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯದಿಂದ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ಸರಣಿ ಅಪಘಾತ ಸಂಭವಿಸಿದೆ.

ಈ ಘಟನೆ‌ ಶುಕ್ರವಾರ ರಾತ್ರಿ 10.45ರ ಸುಮಾರಿಗೆ ನಡೆದಿದೆ. ಆ್ಯಂಬುಲೆನ್ಸ್ ಚಾಲಕ ಸಿಟಿ ಮಾರುಕಟ್ಟೆ ಕಡೆಯಿಂದ ಗುಡ್ಡದಹಳ್ಳಿ ಮಾರ್ಗವಾಗಿ ವೇಗವಾಗಿ ಬಂದಿದ್ದಾನೆ. ಈ ವೇಳೆ, ನಿಯಂತ್ರಣ ತಪ್ಪಿ ಗುಡ್ಡದಹಳ್ಳಿ ಬಳಿ ನಿಂತಿದ್ದ ಕಾರಿಗೆ ಢಿಕ್ಕಿ ಹೊಡೆದಿದ್ದಾನೆ.

ಕಾರಿಗೆ ಢಿಕ್ಕಿ ಹೊಡೆದ ಸಂದರ್ಭದಲ್ಲಿ ಭಯಗೊಂಡ ಆ್ಯಂಬುಲೆನ್ಸ್ ಚಾಲಕ ಬ್ರೇಕ್ ಬದಲು ಎಕ್ಸ್‌ಲೇಟರ್ ತುಳಿದಿದ್ದಾನೆ. ಇದರ ಪರಿಣಾಮ ಕಾರಿನ ಮುಂದೆ ಇದ್ದ ಎರಡು ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೋಲಾರ | ಇವಿಎಂ ಮೆಷಿನ್ ಸಾಗಿಸುತ್ತಿದ್ದ ವಾಹನದ ಟೈರ್ ಬ್ಲಾಸ್ಟ್: ಪೊಲೀಸ್ ಬಂದೋಬಸ್ತ್

ಅಪಘಾತದ ಸಮಯದಲ್ಲಿ ಕಾರಿನಲ್ಲಿದ್ದ ನಾಲ್ಕು ತಿಂಗಳ ಗರ್ಭಿಣಿ ಮಹಿಳೆ ಅದೃಷ್ಟವಶಾತ್ ಪಾರಾಗಿದ್ದಾರೆ. ದ್ವಿಚಕ್ರ ವಾಹನ ಸವಾರನ ಕಾಲಿಗೆ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿಕಿತ್ಸೆ ಪಡೆಯುತ್ತಿದ್ದಾರೆ.

ಬ್ಯಾಟರಾಯನಪುರ ಸಂಚಾರ ಠಾಣಾ ಪೊಲೀಸರು ಆ್ಯಂಬುಲೆನ್ಸ್ ಚಾಲಕ ಸುಮಂತ್​​ನನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...