ಬೆಂಗಳೂರು | ನಕಲಿ ಟಿಕೆಟ್ ಬಳಸಿ ವಿಮಾನ ನಿಲ್ದಾಣದೊಳಗೆ ಪ್ರವೇಶಿಸಿದ್ದ ಯುವಕನ ಬಂಧನ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದೊಳಗೆ ನಕಲಿ ಟಿಕೆಟ್ ಬಳಸಿ ಪ್ರವೇಶಿಸಿದ್ದ ಯುವಕನನ್ನು ನಗರದ ಏರ್‌ಪೋರ್ಟ್‌ ಸಿಬ್ಬಂದಿ ಬಂಧಿಸಿದ್ದಾರೆ.

ಪ್ರಖರ್ ಶ್ರೀವಾಸ್ತವ (24 ವರ್ಷ) ಬಂಧಿತ ಆರೋಪಿ. ಈತ ಮೂಲತಃ ಜಾರ್ಖಂಡ್‌ದವನು. ಬಂಧಿತನ ಸ್ನೇಹಿತೆ ಸಂಸ್ಕ್ರತಿ ಬೆಂಗಳೂರಿನಿಂದ ದೆಹಲಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಸ್ನೇಹಿತೆ ಸಂಸ್ಕ್ರತಿಯನ್ನು ಕಳುಹಿಸಿ ಕೊಡಲು ಪ್ರಖರ್ ಪ್ರಯಾಣದ ನಕಲಿ ಟಿಕೆಟ್ ತಯಾರಿಸಿ ವಿಮಾನ ನಿಲ್ದಾಣಕ್ಕೆ ಬಂದಿದ್ದನು.

ಅಲ್ಲದೇ, ನಕಲಿ ಟಿಕೆಟ್ ತೋರಿಸಿ ವಿಮಾನ ನಿಲ್ದಾಣದ ಒಳಗೆ ಬಂದಿದ್ದಾನೆ. ವಿಮಾನದಲ್ಲಿ ಪ್ರಯಾಣಿಸದೆ, ಸ್ನೇಹಿತೆಯನ್ನು ಕಳುಹಿಸಿ ವಾಪಸ್ಆಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ನೇಹಿತೆಯನ್ನು ಕಳುಹಿಸಿ ವಾಪಾಸ್ ಬರುವಾಗ ಗೇಟ್ ನಂ. 9 ಭದ್ರತಾ ಸಿಬ್ಬಂದಿ ಪ್ರಶ್ನೆ ಮಾಡಿದ್ದಾರೆ. ಆಗ, ನನಗೆ ತುರ್ತು ಕರೆ ಬಂದ ಕಾರಣ ನಾನು ವಾಪಾಸಾಗುತ್ತಿದ್ದೇನೆ ಎಂದು ಹೇಳಿದ್ದಾನೆ.

ಈತನ ಹೇಳಿಕೆಯಿಂದ ಅನುಮಾನಗೊಂಡ ಭದ್ರತಾ ಸಿಬ್ಬಂದಿ ಪ್ರಖರ್ ಪ್ರಯಾಣದ ಟಿಕೆಟ್ಅನ್ನು ಮತ್ತೊಮ್ಮೆ ಪರಿಶೀಲಿಸಿದ್ದಾರೆ. ಆಗ ಅದು ನಕಲಿ ಟಿಕೆಟ್‌ ಎಂಬುವುದು ತಿಳಿದುಬಂದಿದೆ. ಕೂಡಲೇ, ಪ್ರಖರ್‌ನನ್ನು ವಿಮಾನ ನಿಲ್ದಾಣದ ಸಿಬ್ಬಂದಿ ವಶಕ್ಕೆ ಪಡೆದು ವಿಮಾನ ನಿಲ್ದಾಣದ ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ | ಪ್ರಕರಣದ ಶಂಕಿತ ಆರೋಪಿ ಶಬ್ಬೀರ್ ಎನ್ಐಎ ವಶಕ್ಕೆ

ಪ್ರಖರನನ್ನ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದಾಗ ಸ್ನೇಹಿತೆಯನ್ನು ನಿಲ್ದಾಣದ ಒಳಗಿನಿಂದ ಕಳುಹಿಸಲು ಈ ರೀತಿ ನಕಲು ವಿಮಾನ ಟಿಕೆಟ್ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ.

ವಿಮಾನ ನಿಲ್ದಾಣದ ಒಳಗೆ ಅತಿಕ್ರಮಣ, ನಕಲಿ ಟಿಕೆಟ್ಮತ್ತು ವಂಚನೆಯ ಅಡಿಯಲ್ಲಿ ಆರೋಪಿ ವಿರುದ್ಧ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...