ಬೆಂಗಳೂರು | ಕಾಲಮಿತಿಯೊಳಗೆ ರಸ್ತೆ ಗುಂಡಿ ಮುಚ್ಚಲು ಸೂಚನೆ ನೀಡಿದ ಬಿಬಿಎಂಪಿ ಮುಖ್ಯ ಆಯುಕ್ತ

Date:

“ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ರಸ್ತೆಗಳಲ್ಲಿ ಬಿದ್ದಿರುವ ರಸ್ತೆಗುಂಡಿಗಳನ್ನು ಕಾಲಮಿತಿಯೊಳಗಾಗಿ ಮುಚ್ಚಬೇಕು” ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದಲ್ಲಿ ರಸ್ತೆ ಗುಂಡಿ ಮುಚ್ಚುವುದು, ರಾಜಕಾಲುವೆ ಸ್ವಚ್ಛತೆ ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ಮೇ 27ರಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು, “ನಗರದ ಆರ್ಟಿರಿಯಲ್, ಸಬ್ ಆರ್ಟಿರಿಯಲ್ ಹಾಗೂ ವಾರ್ಡ್ ರಸ್ತೆಗಳಲ್ಲಿ ಈಗಾಗಲೇ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಪ್ರಗತಿಯಲ್ಲಿದ್ದು, ಅದಕ್ಕೆ ಮತ್ತಷ್ಟು ಚುರುಕು ನೀಡಿ ತ್ವರಿತಗತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

“ಆಯಾ ವಲಯ ವ್ಯಾಪ್ತಿಯಲ್ಲಿ ವಾರ್ಡ್ ಇಂಜಿನಿಯರ್‌ಗಳು ರಸ್ತೆ ಗುಂಡಿಗಳನ್ನು ಪತ್ತೆಮಾಡಿ ಕೂಡಲೇ ರಸ್ತೆಗುಂಡಿಗಳನ್ನು ಮುಚ್ಚಬೇಕು. ಎಲ್ಲಿಯೂ ರಸ್ತೆ ಗುಂಡಿಗಳಿರುವ ದೂರುಗಳು ಬಾರದಂತೆ ನೋಡಿಕೊಳ್ಳಬೇಕು. ಹಾಟ್ ಮಿಕ್ಸ್ ಹಾಗೂ ಕೋಲ್ಡ್ ಮಿಕ್ಸ್ ಮೂಲಕ ಹಗಲು-ರಾತ್ರಿ ರಸ್ತೆಗುಂಡಿಗಳನ್ನು ಮುಚ್ಚಬೇಕು” ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜಕಾಲುವೆ ಸ್ವಚ್ಛತೆ ಕಾಪಾಡಿ

“ನಗರದಲ್ಲಿ ಬರುವ ಪ್ರಥಮ, ದ್ವಿತೀಯ ರಾಜಕಾಲುವೆಗಳಲ್ಲಿ ಸಕ್ರಿಯವಾಗಿ ಹೂಳೆತ್ತುವ ಕೆಲಸ ನಡೆಯಬೇಕು‌. ರಾಜಕಾಲುವೆಗೆ ತ್ಯಾಜ್ಯ ಬಿಸಾಡದಂತೆ ಸೂಕ್ತ ಕ್ರಮ ವಹಿಸಬೇಕು. ಎಲ್ಲ ಕಡೆ ಸ್ವಚ್ಛತೆ ಕಾಪಾಡಿ ಎಲ್ಲಿಯೂ ನೀರು ನಿಲ್ಲದೆ ಸರಾಗವಾಗಿ ಹರಿದು ಹೋಗುವಂತೆ ಮಾಡಬೇಕು” ಎಂದು ಹೇಳಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬರೆದ ಪತ್ರದಂತೆ ನಗರದಲ್ಲಿರುವ ಪ್ರತಿಷ್ಠಿತ ಮಾಲ್‌ಗಳು, ಮನರಂಜನಾ ಕೇಂದ್ರಗಳು ಹಾಗೂ ಇವಿ ಚಾರ್ಚಿಂಗ್ ಸ್ಟೇಷನ್‌ಗಳಲ್ಲಿ ಅಗ್ನಿ ದುರಂತ ಸೇರಿದಂತೆ ಇನ್ನಿತರೆ ಅನಾಹುತ ತಪ್ಪಿಸಲು ಕೈಗೊಂಡಿರುವ ಸುರಕ್ಷತಾ ಕ್ರಮಗಳನ್ನು ಪರಿಶೀಲನೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಮೇ 31ರಿಂದ ಮುಂಗಾರು ಮಳೆ ಆರಂಭ

ಈ ವೇಳೆ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಡಾ. ಕೆ. ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಶಿವಾನಂದ್ ಕಲ್ಕೆರೆ, ಎಲ್ಲ ವಲಯ ಆಯುಕ್ತರು, ಪ್ರಧಾನ ಅಭಿಯಂತರರು, ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...