ಬೆಂಗಳೂರು | ₹5 ಕೋಟಿ ವೆಚ್ಚದಲ್ಲಿ ಫ್ರೀಡಂ ಪಾರ್ಕ್ ನವೀಕರಣ

Date:

ಪ್ರತಿಭಟನೆಗಳಿಗೆಂದೆ ಸೀಮಿತವಾಗಿರುವ ಬೆಂಗಳೂರಿನ ಹೃದಯಭಾಗದಲ್ಲಿರುವ ಫ್ರೀಡಂಪಾರ್ಕ್‌ ಅನ್ನು ನವೀಕರಿಸಿ ಪ್ರೇಕ್ಷಣೀಯ ಸ್ಥಳ ಹಾಗೂ ಹೆರಿಟೇಜ್ ಹಬ್ ಮಾಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿದೆ. ಜತೆಗೆ, ಇದರಿಂದ ಬಿಬಿಎಂಪಿಗೆ ಆದಾಯ ಬರುವಂತೆ ಮಾಡಿಕೊಳ್ಳಲು ಯೋಜಿಸಿದೆ.

ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಸದ್ಯ ಪ್ರತಿಭಟನೆಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳು ನಡೆಯುತ್ತಿವೆ. ಈ ಸ್ಥಳ ಪ್ರತಿಭಟನೆ ನಡೆಯಲು ಮಾತ್ರ ಸೀಮಿತವಾಗಿದೆ ಎನ್ನುವಂತಾಗಿದೆ. ಇದೀಗ, 21 ಎಕರೆಯಲ್ಲಿರುವ ಈ ಫ್ರೀಡಂ ಪಾರ್ಕ್ ಅನ್ನು ನವೀಕರಣಗೊಳಿಸಲು ಬಿಬಿಎಂಪಿ ₹5 ಕೋಟಿ ಮೀಸಲಿಟ್ಟಿದ್ದು, ನವೀಕರಣ ಮಾಡಿ ಪ್ರೇಕ್ಷಣೀಯ ಸ್ಥಳದ ಜತೆಗೆ, ಹೆರಿಟೇಜ್ ಹಬ್ ಮಾಡಲು ಬಿಬಿಎಂಪಿ ಯೋಜಿಸಿದೆ.

ಇದೀಗ, ಫ್ರೀಡಂ ಪಾರ್ಕ್‌ನಲ್ಲಿ ಅಸ್ತಿತ್ವದಲ್ಲಿರುವ ಕಟ್ಟಡಗಳ ನವೀಕರಣ, ಹಳೆಯ ಸೆಂಟ್ರಲ್ ಜೈಲ್ ರಚನೆಗಳು, ವಿದ್ಯುತೀಕರಣ ಹಾಗೂ ದುರಸ್ತಿಗಾಗಿ ಬಿಬಿಎಂಪಿ ಯೋಜನೆ ರೂಪಿಸಿದೆ. ಜತೆಗೆ, ಕಟ್ಟಡಗಳಿಗೆ ಹಾನಿ ಸೇರಿದಂತೆ ನಾನಾ ಕಾಮಗಾರಿಯೊಂದಿಗೆ ರಾಮಚಂದ್ರ ರಸ್ತೆಯಿಂದ ಫ್ರೀಡಂ ಪಾರ್ಕ್ಗೆ ಎರಡನೇ ಪ್ರವೇಶ ದ್ವಾರ ನಿರ್ಮಾಣಕ್ಕೆ ಯೋಜನೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಫ್ರೀಡಂ ಪಾರ್ಕ್ ಅನ್ನು 2008ರಲ್ಲಿ ಸಾರ್ವಜನಿಕರಿಗೆ ತೆರೆಯಲಾಯಿತು. ಈ ಫ್ರೀಡಂ ಪಾರ್ಕ್‌ನಲ್ಲಿ ಈ ಹಿಂದಿನ ಕೇಂದ್ರ ಕಾರಾಗೃಹ ಒಳಗೊಂಡಿದೆ. ಕಾಲಾನಂತರದಲ್ಲಿ, ಫ್ರೀಡಂ ಪಾರ್ಕ್ ಹದಗೆಟ್ಟಿದೆ. ವಿಶೇಷವಾಗಿ ಕೇಂದ್ರ ಕಾರಾಗೃಹ ಭಾಗ ಸಂಪೂರ್ಣವಾಗಿ ಹದಗೆಟ್ಟಿದೆ. ಸದ್ಯ ಫ್ರೀಡಂ ಪಾರ್ಕ್ ಒಳಗಡೆ ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆ. ಮುಂದಿನ ದಿನಗಳಲ್ಲಿ ಪಾರ್ಕ್ನವೀಕರಣ ಮಾಡಿ ವಾಣಿಜ್ಯ ಆದಾಯ ಬರುವಂತೆ ಮಾಡಲು ಪಾಲಿಕೆ ಯೋಜಿಸಿದೆ.

ಈಗ ಬಿಬಿಎಂಪಿಯು ಫ್ರೀಡಂ ಪಾರ್ಕ್ ಅಸ್ತಿತ್ವದಲ್ಲಿರುವ ರಚನೆಗಳ ನವೀಕರಣ, ಅಕೌಸ್ಟಿಕ್ಸ್ ಮತ್ತು ವಿದ್ಯುದ್ದೀಕರಣಕ್ಕಾಗಿ ಟೆಂಡರ್ ಕರೆದಿದೆ. ಸಂಪೂರ್ಣ ಕಾಮಗಾರಿಗೆ 5 ಕೋಟಿ ವೆಚ್ಚವಾಗಬಹುದು ಎಂದು ಬಿಬಿಎಂಪಿ ಬಜೆಟ್‌ ನೀಡಿದೆ. ಕೋವಿಡ್ ಕಾಲದಲ್ಲಿ ₹2 ಕೋಟಿ ವೆಚ್ಚದಲ್ಲಿ ಬಿಬಿಎಂಪಿ ಫ್ರೀಡಂ ಪಾರ್ಕ್‌ ಅನ್ನು ನವೀಕರಿಸಿದೆ. ಈ ಸಮಯದಲ್ಲಿ ಖಾಲಿ ಇದ್ದ ಸ್ಥಳದಲ್ಲಿ ಆಂಫಿ ಥಿಯೇಟರ್​​​, ಹೊರ ಸಭಾಂಗಣ ಹಾಗೂ ಗಾರ್ಡನ್ ಅನ್ನು ಹೊಸದಾಗಿ ನಿರ್ಮಿಸಲಾಗಿತ್ತು. ಆದರೆ, ಕಳಪೆ ಕಾಮಗಾರಿಯಿಂದ ಎಲ್ಲವೂ ಸಂಪೂರ್ಣ ಹಾಳಾಗಿದೆ. ಜತೆಗೆ, ಪಾರ್ಕ್‌ ಒಳಗಿರುವ ಹಳೆಯ ಜೈಲು ಕುಸಿಯುವ ಹಂತದಲ್ಲಿದೆ.

ಈ ಸುದ್ದಿ ಓದಿದ್ದೀರಾ? ನಮ್ಮ ಮೆಟ್ರೋ | ತಾಂತ್ರಿಕ ದೋಷದಿಂದ ನೇರಳೆ ಮಾರ್ಗದ ಮೆಟ್ರೋ ಸಂಚಾರ ವ್ಯತ್ಯಯ: ನಿಲ್ದಾಣಗಳಲ್ಲಿ ಜನಸಂದಣಿ

ಪಾರ್ಕ್‌ ನವೀಕರಿಸಲು ಬಿಬಿಎಂಪಿ ₹8 ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಿತ್ತು. ಆದರೀಗ, ನವೀಕರಣಕ್ಕೆ ₹5 ಕೋಟಿ ಬಜೆಟ್‌ ಇದೆ. ಈ ಹಿನ್ನೆಲೆ, ಆಂಫಿಥಿಯೇಟರ್ ಒಳಗೆ ಹವಾನಿಯಂತ್ರಣ ಮತ್ತು ಅಕೌಸ್ಟಿಕ್ಸ್ ಯೋಜನೆಗಳನ್ನು ಬಿಬಿಎಂಪಿ ಕೈಬಿಟ್ಟಿದೆ ಎನ್ನಲಾಗಿದೆ.

60 ಆಸನಗಳ ಆಂಫಿಥಿಯೇಟರ್ ಅನ್ನು ನವೀಕರಿಸುವ ಯೋಜನೆಯನ್ನು ಪಾಲಿಕೆ ಕೈಬಿಟ್ಟಿದೆ ಎಂದು ಬಿಬಿಎಂಪಿ ಮೂಲಗಳು ತಿಳಿಸಿವೆ. ಪ್ರಸ್ತುತ, ಬಿಬಿಎಂಪಿಯು ಪ್ರವೇಶ ಶುಲ್ಕವಿಲ್ಲದೆ ಫ್ರೀಡಂ ಪಾರ್ಕ್ ಒಳಗೆ ಪ್ರವಾಸಿಗರಿಗೆ ಅವಕಾಶ ನೀಡುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...