ಬೆಂಗಳೂರು | ಸಂಸದ ಡಿ ಕೆ ಸುರೇಶ್ ಹೇಳಿಕೆಗೆ ಬಿಜೆಪಿ ಕಾರ್ಯಕರ್ತರ ತಿರುಗೇಟು

Date:

ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್‌ನಲ್ಲಿ ದಕ್ಷಿಣ ಭಾರತದ ರಾಜ್ಯಗಳಿಗೆ ಹಣ ಬಿಡುಗಡೆ ಮಾಡುವಲ್ಲಿ ಆಗಿರುವ ಅನ್ಯಾಯದ ಬಗ್ಗೆ ಟೀಕಿಸುತ್ತಾ, ಇಂತಹ ನಡೆ ಮುಂದುವರಿದಲ್ಲಿ ಪ್ರತ್ಯೇಕ ರಾಷ್ಟ್ರಕ್ಕಾಗಿ ಒತ್ತಾಯಿಸಬೇಕಾಗುತ್ತದೆ ಎಂದು ಪ್ರತಿಕ್ರಿಯಿಸಿದ ಡಿ ಕೆ ಸುರೇಶ್ ಹೇಳಿಕೆಗೆ ಪ್ರತಿಭಟಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ಅವರ ಬೆಂಗಳೂರಿನ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಅರಮನೆ ಮೈದಾನದಿಂದ ಧಿಕ್ಕಾರ ಕೂಗುತ್ತಾ ಸುರೇಶ್ ಅವರ ಮನೆಯ ಬೀದಿಗೆ ನುಗ್ಗಿದರು. ಪ್ರತಿಭಟನಾಕಾರರು ಸುರೇಶ್ ಅವರ ಮನೆಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಅಡ್ಡಗಟ್ಟಿದರು. ಬಿಜೆಪಿ ಯುವ ಮುಖಂಡರಾದ ಅನಿಲ್ ಶೆಟ್ಟಿ, ಪ್ರಶಾಂತ್, ಸಂದೀಪ್ ರವಿ, ಪ್ರತಾಪ್ ಸೇರಿ 35 ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿರುವ ವಿಚಾರವಾಗಿ ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಬಿಜೆಪಿಯ ಮತ್ತೊಂದು ಕಾರ್ಯಕರ್ತರ ತಂಡ ಗಾಯತ್ರಿ ವಿಹಾರ ಅರಮನೆ ಮೈದಾನ ಗೇಟ್ ಬಳಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯ ಹಿನ್ನೆಲೆಯಲ್ಲಿ ಬಳ್ಳಾರಿ ರಸ್ತೆಯಲ್ಲಿ ಸಾರಿಗೆ ಜಂಜಡ ಉಂಟಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏನಿದು ಹೇಳಿಕೆ?

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1ರಂದು ಲೋಕಸಭೆಯಲ್ಲಿ ಮಧ್ಯಂತರ ಬಜೆಟ್ ಮಂಡಿಸಿದ್ದರು. ಬಜೆಟ್ ಮಂಡನೆ ಬಳಿಕ ಸಂಸದ ಡಿ ಕೆ ಸುರೇಶ್ ಅವರು ನವದೆಹಲಿಯಲ್ಲಿ ಮಾಧ್ಯಮಗಳಿಗೆ, “ದಕ್ಷಿಣ ಭಾರತಕ್ಕೆ ಪ್ರತಿ ಹಂತದಲ್ಲೂ ಅನ್ಯಾಯ ಆಗುತ್ತಿದೆ. ಇದನ್ನು ನಾವು ಮುಂದಿನ ದಿನಗಳಲ್ಲಿ ಖಂಡಿಸದಿದ್ದರೆ, ಪ್ರತ್ಯೇಕ ರಾಷ್ಟ್ರಕ್ಕೂ ಕೂಡ ಬೇಡಿಕೆ ಇಡಬೇಕಾದ ಅನಿವಾರ್ಯ ಪರಿಸ್ಥಿತಿ ನಮ್ಮ ಮೇಲೆ ಹೇರಿಕೆಯಾಗುತ್ತಿದೆ” ಎಂದು ಹೇಳಿದ್ದರು.

ಈ ಸುದ್ದಿ ಓದಿದ್ದೀರಾ? ಕುಸಿದ ಅಂತರ್ಜಲ | ಬೇಸಿಗೆಗೂ ಮುನ್ನವೇ ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ

ಡಿ ಕೆಸುರೇಶ್ ಅವರ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಸಂಸತ್ತಿನಲ್ಲೂ ವಿರೋಧ ವ್ಯಕ್ತಪಡಿಸಿದೆ. ಆದರೆ ರಾಜ್ಯ ಕಾಂಗ್ರೆಸ್ ಮುಖಂಡರು ಅನುದಾನದ ಪಾಲಿನಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಮಾಧ್ಯಮಗಳ ಮುಂದೆ ಸಾಕ್ಷ್ಯಗಳನ್ನು ನೀಡುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...