ಖಾಸಗಿ ನರ್ಸಿಂಗ್ ಕಾಲೇಜಿನ ಆವರಣದಲ್ಲಿ ನಿಲ್ಲಿಸಿದ್ದ ಬಸ್‌ಗಳಿಗೆ ಏಕಕಾಲಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿದೆ. ಈ ವೇಳೆ, 5 ಬಸ್‌ಗಳು ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿ ಕ್ರಾಸ್ ಬಳಿ ನಡೆದಿದೆ.
ಶನಿವಾರ ಮಧ್ಯಾಹ್ನ 2.40ರ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಈ ದುರ್ಘಟನೆ ನಡೆದಿದೆ. ವಿಷಯ ತಿಳಿದು ಸ್ಥಳಕ್ಕಾಗಿಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಘಟನೆಯಲ್ಲಿ ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ.
ಖಾಸಗಿ ನರ್ಸಿಂಗ್ ಕಾಲೇಜಿನ ಆವರಣದಲ್ಲಿ ಕೆಟ್ಟು ಹೋಗಿರುವ ಬಸ್‌ಗಳನ್ನು ಒಂದೆಡೆ ನಿಲ್ಲಿಸಲಾಗಿತ್ತು. ಈ ವೇಳೆ, ಏಕಾಏಕಿ ಬೆಂಕಿ ಹೊತ್ತಿಕೊಂಡು ಬಸ್‌ಗಳು ಸುಟ್ಟು ಬಸ್ಮವಾಗಿವೆ.
ಈ ಸುದ್ದಿ ಓದಿದ್ದೀರಾ? ಮಹಾರಾಷ್ಟ್ರ | ‘ಸಮೃದ್ಧಿ ಎಕ್ಸ್‌ಪ್ರೆಸ್ ವೇ’ನಲ್ಲಿ ಭೀಕರ ಅಪಘಾತ; ಏಳು ಮಂದಿ ಸಾವು
ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಹಾಗೂ ರಾಜಗೋಪಾಲ ನಗರ ಪೊಲೀಸರಿಗೆ ಕಾಲೇಜು ಮಂಡಳಿ ಕರೆ ಮಾಡಿದ್ದರು. ಈ ಕುರಿತು ಪೊಲೀಸರು ತನಿಖೆ ಅರಂಭಿಸಿದ್ದಾರೆ.




