ಬೆಂಗಳೂರು | ಹುಕ್ಕಾ ಬಾರ್​ಗಳ ಮೇಲೆ ಸಿಸಿಬಿ ದಾಳಿ : 7 ಜನ ಬಂಧನ

Date:

ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಹುಕ್ಕಾ ಬಾರ್​ಗಳ ಮೇಲೆ ನಿಷೇಧ ಹೇರಿ ಆದೇಶ ಹೊರಡಿಸಿತ್ತು. ಆದರೂ ನಗರದ ಕೆಲವು ಕಡೆಗಳಲ್ಲಿ ಅನಧಿಕೃತವಾಗಿ ಹುಕ್ಕಾ ಬಾರ್ ನಡೆಸಲಾಗುತ್ತಿತ್ತು. ಈ ಬಗ್ಗೆ ಸೂಕ್ತ ಮಾಹಿತಿ ಆಧರಿಸಿದ ಸಿಸಿಬಿ ಪೊಲೀಸರು ಬೆಂಗಳೂರಿನ ಕೆಲವೆಡೆ ಮಂಗಳವಾರ ದಾಳಿ ನಡೆಸಿದ್ದಾರೆ.

ಮಹಾಲಕ್ಷ್ಮೀ ಲೇಔಟ್, ಹೆಚ್​ಎಎಲ್ ಹಾಗೂ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಸಿಸಿಬಿ ದಾಳಿ ವೇಳೆ ಏಳು ಜನರನ್ನು ಬಂಧಿಸಲಾಗಿದ್ದು, ಬರೋಬ್ಬರಿ ₹12.5 ಲಕ್ಷ ಮೌಲ್ಯದ 710 ಹುಕ್ಕಾ ಫ್ಲೇವರ್, 36 ಹುಕ್ಕಾ ಪ್ಯಾಕೇಟ್, 28 ಬಾಕ್ಸ್ ಫಾಯಿಲ್ ಪೇಪರ್, 19 ಪಿಲ್ಟರ್​ಗಳು ಜತೆಗೆ 25 ಹುಕ್ಕಾ ಪೈಪ್​ಗಳನ್ನು ಸಿಸಿಬಿ ಸೀಜ್ ಮಾಡಿದೆ.

ಹುಕ್ಕಾ ಬಾರ್ ನಿಷೇಧ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕದಲ್ಲಿ ತಕ್ಷಣದಿಂದ ಹುಕ್ಕಾ ಬಾರ್‌ಗಳನ್ನು ನಿಷೇಧಿಸುವ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿ.ಪದ್ಮ ಅಧಿಸೂಚನೆ ಹೊರಡಿಸಿದ್ದರು.

ಸಂವಿಧಾನದ 47ನೇ ವಿಧಿ ಅನ್ವಯ ರಾಜ್ಯ ಸರ್ಕಾರಕ್ಕೆ ಲಭ್ಯವಿರುವ ಅಧಿಕಾರ ಬಳಸಿ, ಸಾರ್ವಜನಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಎಲ್ಲ ಬಗೆಯ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ, ಸಂಗ್ರಹಣೆ, ಜಾಹೀರಾತು, ಸೇವನೆಗೆ ಪ್ರಚೋದನೆ ಹಾಗೂ ವ್ಯಾಪಾರವನ್ನು ನಿಷೇಧಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿತ್ತು.

ಕರ್ನಾಟಕದಲ್ಲಿ ಹುಕ್ಕಾ ನಿಷೇಧ ಮಾಡಿದರೂ ಸುಮಾರು‌ 20 ಹುಕ್ಕಾ ಬಾರ್​ಗಳು ಅನಧಿಕೃತವಾಗಿ ನಡೀತಾ ಇತ್ತು. ಎಲ್ಲೆಲ್ಲಿ ಅನಧಿಕೃತವಾಗಿ ಹುಕ್ಕಾ ಬಾರ್‌ ನಡೆಸಲಾಗುತ್ತಿದೆ. ಅಂತಹ ಹುಕ್ಕಾ ಕೇಂದ್ರಗಳನ್ನು ಪತ್ತೆ ಮಾಡಿ ಅಧಿಕಾರಿಗಳು ಬಂದ್ ಮಾಡುತ್ತಿದ್ದಾರೆ.

ಹುಕ್ಕಾ, ತಂಬಾಕು ಅಥವಾ ನಿಕೋಟಿನ್ ಒಳಗೊಂಡ ನಿಕೋಟಿನ್ ರಹಿತ ತಂಬಾಕು ರಹಿತ ಸ್ವಾಧಭರಿತ, ಸ್ವಾಧರಹಿತ ಮೇಲಾಸಿಸ್ , ಶಿಶಾ ಹಾಗೂ ಇದೇ ಮಾದರಿಯ ಇನಿತ್ತರ ಹೆಸರುಗಳಿಂದ ಕರೆಯುವ ಹುಕ್ಕಾ ಉತ್ಪನ್ನ ಮಾರಾಟವನ್ನು ಕರ್ನಾಟಕದಲ್ಲಿ ನಿಷೇಧಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಾತೃಭಾಷೆ ಕಡ್ಡಾಯವಾಗಬೇಕೆಂಬ ಕುವೆಂಪು ಅವರ ಅಭಿಪ್ರಾಯಕ್ಕೆ ನನ್ನ ಸಹಮತವಿದೆ: ನ್ಯಾ. ಎನ್‌ ವಿ ಅಂಜಾರಿಯ

ಈ ಆದೇಶ ಉಲ್ಲಂಘನೆ ಮಾಡಿದವರ ವಿರುದ್ಧ ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ (ಕೋಟ್ಪಾ) ಕಾಯ್ದೆ–2003, ಮಕ್ಕಳ ಆರೈಕೆ ಮತ್ತು ರಕ್ಷಣೆ ಕಾಯ್ದೆ–2015, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ–2006, ಕರ್ನಾಟಕ ವಿಷ (ಸ್ವಾಧೀನ ಮತ್ತು ಮಾರಾಟ) ನಿಯಮ–2015 ಮತ್ತು ಭಾರತೀಯ ದಂಡಸಂಹಿತೆ ಹಾಗೂ ಅಗ್ನಿ ನಿಯಂತ್ರಣ ಮತ್ತು ಸುರಕ್ಷತಾ ಕಾಯ್ದೆಗಳ ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಧೀನ ಕಾರ್ಯದರ್ಶಿ ವಿ. ಪದ್ಮ ಆದೇಶದಲ್ಲಿ ಸೂಚಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...