ಬೆಂಗಳೂರು | ಪ್ರತಿಷ್ಠಿತ ಬ್ರ್ಯಾಂಡ್‌ಗಳ ನಕಲು ದಂಧೆ : ಸಿಸಿಬಿ ಬಲೆಗೆ ಬಿದ್ದ ಗ್ಯಾಂಗ್

Date:

ದಿನನಿತ್ಯ ಜನರು ಬಳಸುವ ವಸ್ತುಗಳನ್ನು ಗುರಿಯಾಗಿಟ್ಟುಕೊಂಡು ಪ್ರತಿಷ್ಠಿತ ಕಂಪನಿಗಳ ಹೆಸರು ಹಾಕಿ ಕಳೆದ ಐದು ವರ್ಷಗಳಿಂದ ನಕಲಿ ವಸ್ತುಗಳನ್ನು ತಯಾರು ಮಾಡುತ್ತಿದ್ದ ಗ್ಯಾಂಗ್‌ವೊಂದು ಸಿಸಿಬಿ ಬಲೆಗೆ ಬಿದ್ದಿದೆ.

ಶಿವಪಾಟೀಲ್, ದೌಲತ್ ಸಿಂಗ್ ಹಾಗೂ ಶುಬಂ ಬಂಧಿತ ಆರೋಪಿಗಳು. ಈ ಗ್ಯಾಂಗ್ ಕಳೆದ ಐದು ವರ್ಷದಿಂದ ಪ್ರತಿಷ್ಠಿತ ಕಂಪನಿಗಳ ಹೆಸರು ಬಳಸಿಕೊಂಡು ನಕಲಿ ವಸ್ತುಗಳ ಮಾರಾಟ ಮಾಡುತ್ತಿತ್ತು.

ನಕಲಿ ವಸ್ತು ತಯಾರಿಸುತ್ತಿದ್ದವರ ಬಗ್ಗೆ ಮಾಹಿತಿ ಪಡೆದ ಪ್ರತಿಷ್ಠಿತ ಕಂಪನಿಗಳಾದ ಹಿಂದೂಸ್ಥಾನ್ ಯುನಿಲಿವರ್ ಲಿಮಿಟೆಡ್ ಹಾಗೂ ರೆಕಿಟ್ ಬೆಂಕಿಸರ್ ಇಂಡಿಯಾ ಲಿಮಿಟೆಡ್ ಕಂಪನಿಗಳ ಅಧಿಕೃತ ಪ್ರತಿನಿಧಿಗಳು ಸಿಸಿಬಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ. ಪ್ರಕರಣದ ತನಿಖೆ ಕೈಗೊಂಡ ಸಿಸಿಬಿ ನಕಲಿ ಜಾಲವನ್ನು ಭೇದಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಪ್‌ ಎಕ್ಸೆಲ್, ವಿಮ್ ಲಿಕ್ವಡ್, ಲೈಫ್ ಬಾಯ್ ಹ್ಯಾಂಡ್ ವಾಶ್, ರಿನ್, ವೀಲ್ ಡಿಟರ್ಜಂಟ್ ಪೌಡರ್, ರೆಡ್ ಲೇಬಲ್ ಟಿ ಪೌಡರ್, ಲೈಜಾಲ್, ಹಾರ್ಪಿಕ್ ಸೇರಿದಂತೆ ಹಲವು ಉತ್ಪನ್ನಗಳ ನಕಲಿ ವಸ್ತುಗಳನ್ನು ಇರಿಸಲಾಗಿದ್ದ ವಿಲ್ಸನ್ ಗಾರ್ಡನ್‌ನ ಗೋಡಾನ್ ಹಾಗೂ ಇದನ್ನು ತಯಾರಿಸುತಿದ್ದ ಆವಲಹಳ್ಳಿ ಬಳಿಯ ರಾಮಪುರ ಮತ್ತು ಬಿದರಹಳ್ಳಿಯ ಫ್ಯಾಕ್ಟರಿಗಳಿಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ನಕಲಿ ತಯಾರಿಕಾ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಈ ಬಗ್ಗೆ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತರಿಂದ ₹95 ಲಕ್ಷ ಮೌಲ್ಯದ ನಕಲಿ ವಸ್ತುಗಳನ್ನು ಸಿಸಿಬಿ ವಶಕ್ಕೆ ಪಡೆದಿದೆ.

ಬಂಧಿತ ಆರೋಪಿಗಳು ಉತ್ತರ ಭಾರತದವರು. ಕಳೆದ ಹಲವು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ನೆಲೆಸಿದ್ದಾರೆ. ಇವರು ನಕಲಿ ವಸ್ತುಗಳನ್ನು ತಯಾರು ಮಾಡುವಲ್ಲಿ ಕುಖ್ಯಾತಿ ಹೊಂದಿದ್ದ ಎನ್ನಲಾದ ಮಹೇಶ್ ಗಾಂಧಿ ಎಂಬಾತನ ಬಳಿ ಕೆಲವು ವರ್ಷ ಕೆಲಸ ಮಾಡಿದ್ದಾರೆ.

ಈ ಸಮಯದಲ್ಲಿ ಬ್ರಾಂಡ್ ಹೆಸರಿನ ವಸ್ತುಗಳನ್ನು ನಕಲು ಮಾಡಿ ಮಾರಾಟ ಮಾಡುವ ಬಗ್ಗೆ ಕಲಿತ ಆರೋಪಿಗಳು ನಂತರದ ದಿನಗಳಲ್ಲಿ ತಮ್ಮದೇ ಆದ ವ್ಯವಸ್ಥಿತ ಜಾಲ ತೆರೆದಿದ್ದಾರೆ. ದಿನಕಳೆದಂತೆ ಇವರು ರಾಜ್ಯ ಸೇರಿದಂತೆ ಹಲವೆಡೆ ತಮ್ಮದೇ ಜಾಲ ರೂಪಿಸಿಕೊಂಡು ವ್ಯವಹಾರ ಆರಂಭ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ : ಅಪರಿಚಿತ ವ್ಯಕ್ತಿ ವಿರುದ್ಧ ಎಫ್​​ಐಆರ್​ ದಾಖಲು

ಬಂಧಿತ ಆರೋಪಿಗಳ ಪೈಕಿ ಶಿವ ಪಾಟೀಲ್ ನಕಲಿ ವಸ್ತುಗಳನ್ನು ತಯಾರಿ ಮಾಡುತ್ತಿದ್ದನು. ಮತ್ತೋರ್ವ ಆರೋಪಿ ದೌಲತ್ ಸಿಂಗ್ ಅದರ ಡಿಸ್ಟ್ರಿಬ್ಯೂಟಿಂಗ್ ಬಗ್ಗೆ ನೋಡಿಕೊಳ್ಳುತ್ತಿದ್ದನು. ಕಳೆದ ಐದು ವರ್ಷದಿಂದ ಬಂಧಿತ ಆರೋಪಿಗಳು ಈ ಕೃತ್ಯ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...