ಬೆಂಗಳೂರು | ಶ್ರೀರಾಮನ ಕಟೌಟ್ ಬಿದ್ದು ಪಾದಚಾರಿಗಳಿಗೆ ಗಾಯ: ಶಾಸಕ ರಘು, ಬಿಬಿಎಂಪಿ ಅಧಿಕಾರಿಗಳ ವಿರುದ್ಧ ದೂರು

Date:

“ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಎಚ್ಎಎಲ್ ವಿಮಾನ ನಿಲ್ದಾಣದ ಬಳಿ ಅನಧಿಕೃತವಾಗಿ ಹಾಕಿದ್ದ ಶ್ರೀರಾಮನ ಕಟೌಟ್ ಬಿದ್ದು ಪಾದಚಾರಿಗಳು ಗಾಯಗೊಂಡಿದ್ದಾರೆ. ಬ್ಯಾನರ್, ಕಟೌಟ್ ಹಾಕಿರುವ ಸಿವಿ ರಾಮನ್ ನಗರ ಶಾಸಕ ಎಸ್‌.ರಘು ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು” ಎಂದು ಆಮ್ ಆದ್ಮಿ ಪಕ್ಷ ಪೊಲೀಸರಿಗೆ ದೂರು ನೀಡಿದೆ.

ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಮತ್ತು ಪಕ್ಷದ ಕಾರ್ಯಕರ್ತರು ಜೀವನ್ ಭೀಮಾ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದಕ್ಕೂ ಮುನ್ನ ಕಟೌಟ್ ಬಿದ್ದು ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುವಿನ ಆರೋಗ್ಯ ವಿಚಾರಿಸಿದ್ದಾರೆ.

ದೂರು ನೀಡಿದ ಬಳಿಕ ಮಾತನಾಡಿದ ಮೋಹನ್ ದಾಸರಿ, “ಸಿವಿ ರಾಮನ್ ನಗರ ಶಾಸಕ ಎಸ್‌.ರಘು ತಾವೇ ಖುದ್ದಾಗಿ ತಮ್ಮ ಫೇಸ್‌ಬುಕ್ ಅಧಿಕೃತ ಖಾತೆಯಲ್ಲಿ ಈ ಬ್ಯಾನರ್, ಕಟೌಟ್ ಹಾಕಿರುವುದು ನಾನೇ ಎಂದು ಹೇಳಿದ್ದಾರೆ. 22ರಂದು ರಾಮ ಮಂದಿರ ಉದ್ಘಾಟನೆಯಾಗಿದೆ. ಅದಾದ ಬಳಿಕ ಇಷ್ಟು ದಿನವಾದರೂ ಬ್ಯಾನರ್, ಕಟೌಟ್ ತೆರವು ಮಾಡಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಬಿಎಂಪಿ ಇಂಜಿನಿಯರ್‌ಗಳು ಏನು ಮಾಡುತ್ತಿದ್ದಾರೆ? ಕಟೌಟ್‌ ಮತ್ತು ಬ್ಯಾನರ್ ಎಲ್ಲೇ ಹಾಕಿದರು ಅದು ಅನಧಿಕೃತ ಎಂದು ಕೋರ್ಟ್ ಆದೇಶ ಕೊಟ್ಟಿದೆ. ಇದು ಬಿಬಿಎಂಪಿ ಅಧಿಕಾರಿಗಳ ಕರ್ತವ್ಯ ಲೋಪ, ಇಷ್ಟು ದಿನವಾದರೂ ಯಾಕೆ ತೆರವುಗೊಳಿಸಿಲ್ಲ. ಬೆಮೆಲ್ ವೃತ್ತ, ಬಿಎಂಶ್ರೀ ವೃತ್ತ, ಬೆನ್ನಿಗಾನಹಳ್ಳಿ, ಎನ್‌ಜಿಎಫ್ ವೃತ್ತ, ಇಂದಿರಾನಗರ, ಹಳೇ ವಿಮಾನ ನಿಲ್ದಾಣ ರಸ್ತೆಯ ವಿಶ್ವೇಶ್ವರ ಶಾಲೆಯ ಬಳಿ ಅನಧಿಕೃತ ಕಟೌಟ್ ನಿಲ್ಲಿಸಲಾಗಿದೆ” ಎಂದು ಮೋಹನ್ ದಾಸರಿ ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಎಚ್ಎಸ್ಆರ್​ಪಿ ನಂಬರ್ ಪ್ಲೇಟ್ ಇಲ್ಲದ ವಾಹನ ಮಾಲೀಕರಿಗೆ ದಂಡ ವಿಧಿಸಲು ಮುಂದಾದ ಸಾರಿಗೆ ಇಲಾಖೆ

“ಆ ರಸ್ತೆಗಳಲ್ಲಿ ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುತ್ತವೆ. ಸಾವಿರಾರು ಪಾದಚಾರಿಗಳು ಓಡಾಡುತ್ತಾರೆ. ಅಂತಹ ಜಾಗದಲ್ಲಿ ಕಳೆದ 11 ದಿನದಿಂದ ಅನಧಿಕೃತವಾಗಿ ಕಟೌಟ್ ಅಳವಡಿಸಿದ್ದಾರೆ. ಮತ್ತೊಂದು ಕಟೌಟ್ ಬಿದ್ದು ಅನಾಹುತ ಸಂಭವಿಸಿದರೆ, ಯಾರು ಹೊಣೆ?” ಎಂದು ಪ್ರಶ್ನೆ ಮಾಡಿದರು.

“ಇಂದು ಆಗಿರುವ ಅನಾಹುತಕ್ಕೆ ಶಾಸಕ ರಘು ಮತ್ತು ಬಿಬಿಎಂಪಿ ಅಧಿಕಾರಿಗಳೇ ನೇರ ಹೊಣೆ. ಅವರ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ. ಅವರಿಗೆ ಕಠಿಣ ಶಿಕ್ಷೆಯಾಗಬೇಕು” ಎಂದು ಆಗ್ರಹಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...