ಬೆಂಗಳೂರು | ಫೆಂಗಲ್ ಚಂಡಮಾರುತ; ಡಿ.3ರಂದು ಮೂರು ಜಿಲ್ಲೆಗಳ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ

Date:

ಫೆಂಗಲ್ ಚಂಡಮಾರುತದಿಂದಾಗಿ ಬೆಂಗಳೂರು ಮತ್ತು ಕರ್ನಾಟಕದ ಇತರ ಭಾಗಗಳಲ್ಲಿ ಮುಂದಿನ ಎರಡು ದಿನಗಳವರೆಗೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಸೋಮವಾರ ತಿಳಿಸಿದೆ.

“ಭಾನುವಾರ ಸಂಜೆಯಿಂದಲೂ ಬೆಂಗಳೂರಿನಲ್ಲಿ ಎಡಬಿಡದೆ ಮಳೆಯಾಗುತ್ತಿದ್ದು, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಸೋಮವಾರವೂ ವ್ಯಾಪಕ ಮಳೆಯಾಹಿದೆ. ಈ ಪ್ರದೇಶಗಳಲ್ಲಿ ಮೂರನೇ ದಿನದಿಂದ ಮಳೆ ಕಡಿಮೆಯಾಗುವ ಸಾಧ್ಯತೆಯಿದೆ” ಎಂದು ಭಾರತೀಯ ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

“ಫೆಂಗಲ್ ಚಂಡಮಾರುತದ ಪ್ರಭಾವದಿಂದಾಗಿ ಭಾನುವಾರದಿಂದ ಬೆಂಗಳೂರು ಮತ್ತು ಕರ್ನಾಟಕದ ಇತರ ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಬೆಂಗಳೂರು, ಹಾಸನ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಸೋಮವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ” ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ ಎಸ್ ಪಾಟೀಲ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಉಡುಪಿ, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆರೆಂಜ್ ಅಲರ್ಟ್ ಎಂದರೆ 11 ಸೆಂ.ಮೀ ನಿಂದ 20 ಸೆಂ.ಮೀ ವರೆಗೆ ಭಾರೀ ಮಳೆಯಾಗುತ್ತದೆ ಎಂದರ್ಥ ಮತ್ತು ಯೆಲ್ಲೋ ಅಲರ್ಟ್‌( ಹಳದಿ ಎಚ್ಚರಿಕೆ) ಎಂದರೆ 6 ಸೆಂಮೀನಿಂದ 11ಸೆಂಮೀ ನಡುವೆ ಭಾರೀ ಮಳೆಯಾಗುತ್ತದೆಂದು ಅರ್ಥ” ಎಂದು ಐಎಂಡಿ ಅಧಿಕಾರಿಗಳು ತಿಳಿಸಿದ್ದಾರೆ.

“ಫೆಂಗಲ್ ಚಂಡಮಾರುತದ ಪ್ರಭಾವದಿಂದಾಗಿ ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಮೈಸೂರು ಜಿಲ್ಲಾಧಿಕಾರಿಗಳು ಮುಂಜಾಗೃತಾ ಕ್ರಮವಾಗಿ ಡಿಸೆಂಬರ್ 2ರಂದು ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದರು. ಅಂತೆಯೇ, ಫೆಂಗಲ್ ಚಂಡಮಾರುತದಿಂದ ಉಂಟಾದ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಆರೆಂಜ್ ಅಲರ್ಟ್ ಘೋಷಿಸಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಧಿಕಾರಿ ಡಾ ಮುಲ್ಲೈ ಮುಗಿಲನ್ ಸಲಹೆ ನೀಡಿದ್ದು, ಈಗಾಗಲೇ ಸಮುದ್ರದಲ್ಲಿರುವ ಮೀನುಗಾರರು ತಕ್ಷಣವೇ ಮರಳುವಂತೆ ಸೂಚನೆ ನೀಡಿದ್ದಾರೆ.

ಮಳೆ ತೀವ್ರವಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಕಾರಣ ಇದೇ 3ರಂದು ಉಡುಪಿ, ದಕ್ಷಿಣ ಕನ್ನಡ ಹಾಗೂ ಚಾಮರಾಜನಗರ ಜಿಲ್ಲೆಗಳ ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕೊಡಗು ಜಿಲ್ಲೆಗೆ ಹವಾಮಾನ ಇಲಾಖೆ ಭಾರೀ ಮಳೆ ಬೀಳುವ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಿದೆ. ಜಿಲ್ಲೆಯ ಎಲ್ಲೆಡೆ ದಟ್ಟ ಮೋಡಗಳ ಕವಿದಿದ್ದು, ಹಲವೆಡೆ ಸಾಧಾರಣ ಮಳೆಯಾಗುತ್ತಿದೆ.

ಐಎಂಡಿ ಹೇಳಿಕೆಯ ಪ್ರಕಾರ, ಉತ್ತರ ಕರಾವಳಿ ತಮಿಳುನಾಡು ಮತ್ತು ಪುದುಚೇರಿಯ ಮೇಲೆ ವಾಯುಭಾರ ಕುಸಿತ (ಫೆಂಗಲ್ ಚಂಡಮಾರುತದ ಅವಶೇಷ) ಪಶ್ಚಿಮಕ್ಕೆ ಚಲಿಸಿ ಸೋಮವಾರ ಬೆಳಿಗ್ಗೆ 5.30ರ ವೇಳೆಗೆ ತಮಿಳುನಾಡಿನ ಉತ್ತರ ಒಳನಾಡಿನಲ್ಲಿ ನೆಲೆಗೊಂಡಿರುವ ಉತ್ತಮವಾಗಿ ಗುರುತಿಸಲಾದ ಕಡಿಮೆ ಒತ್ತಡದ ಪ್ರದೇಶವಾಗಿ ದುರ್ಬಲಗೊಂಡಿದೆ. ತಗ್ಗು ಪ್ರದೇಶಗಳು, ಜಲಾವೃತ ವಲಯಗಳು, ನದಿ ತೀರಗಳು ಮತ್ತು ಕಡಲತೀರಗಳು ಜಲಾವೃತವಾಗುವುದನ್ನು ತಪ್ಪಿಸಲು ನಿವಾಸಿಗಳನ್ನು ಒತ್ತಾಯಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಫೆಂಗಲ್ ಚಂಡಮಾರುತ‌ | ಧಾರಾಕಾರ ಮಳೆಗೆ ಮಲಗಿದ ರಾಗಿ-ಭತ್ತದ ಫಸಲು; ರೈತ ಕಂಗಾಲು

ಡಿಸೆಂಬರ್ 3ರ ವೇಳೆಗೆ ಉತ್ತರ ಕೇರಳ ಮತ್ತು ಕರ್ನಾಟಕದ ಕರಾವಳಿಯ ಆಗ್ನೇಯ ಮತ್ತು ಪಕ್ಕದ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದಲ್ಲಿ ಉಳಿದಿರುವ ಕಡಿಮೆ ಒತ್ತಡದ ವ್ಯವಸ್ಥೆಯು ಮತ್ತೆ ಹೊರಹೊಮ್ಮುವ ನಿರೀಕ್ಷೆಯಿದೆ ಎಂಸು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರು ಸಹಾಯವಾಣಿ ಸಂಖ್ಯೆ 1077 ಅಥವಾ 0824-2442590ನ್ನು ಸಂಪರ್ಕಿಸಬಹುದು ಎಂದು ಐಎಂಡಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...