ಬೆಂಗಳೂರು | ಮಾಲ್, ಮನರಂಜನಾ ಕೇಂದ್ರಗಳ ಸುರಕ್ಷತಾ ಕ್ರಮಗಳ ಪರಿಶೀಲನೆಗೆ ಸೂಚನೆ ನೀಡಿದ ಡಿಸಿಎಂ

Date:

ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಮಾಲ್‌ಗಳು, ಗೇಮಿಂಗ್ ಜೋನ್‌ಗಳು, ಮನರಂಜನಾ ಕೇಂದ್ರಗಳಲ್ಲಿ ಅಗ್ನಿ ದುರಂತ ಸೇರಿದಂತೆ ಎಲ್ಲ ರೀತಿಯ ಅನಾಹುತ ತಪ್ಪಿಸಲು ಕೈಗೊಂಡಿರುವ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ಈ ವಿಚಾರವಾಗಿ ಪಾಲಿಕೆ ಆಯುಕ್ತರಾದ ತುಷಾರ್ ಗಿರಿನಾಥ್ ಅವರಿಗೆ ಶಿವಕುಮಾರ್ ಅವರು ಪತ್ರ ಬರೆದಿದ್ದು, “ಗುಜರಾತಿನ ರಾಜ್ ಕೋಟ್‌ನ ಮನರಂಜನಾ ಕೇಂದ್ರದಲ್ಲಿ ಶನಿವಾರ ಸಂಜೆ ಸಂಭವಿಸಿರುವ ಅಗ್ನಿ ಅವಘಡ ಅತ್ಯಂತ ಕಳವಳಕಾರಿಯಾಗಿದೆ. ಈ ದುರಂತ ಎಚ್ಚರಿಕೆ ಗಂಟೆಯಾಗಿದ್ದು, ಬೆಂಗಳೂರಿನಲ್ಲಿರುವ ಮಾಲ್ ಹಾಗೂ ಇತರೆ ಜನನಿಬಿಡ ಕೇಂದ್ರಗಳಲ್ಲಿ ಅಗ್ನಿ ದುರಂತ ಸೇರಿದಂತೆ ಯಾವುದೇ ಅನಾಹುತ ಸಂಭವಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆಯೇ ಎಂಬ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಪರಿಶೀಲನೆ ನಡೆಸಬೇಕು” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಾಲಮಿತಿಯೊಳಗೆ ರಸ್ತೆ ಗುಂಡಿ ಮುಚ್ಚಲು ಸೂಚನೆ ನೀಡಿದ ಬಿಬಿಎಂಪಿ ಮುಖ್ಯ ಆಯುಕ್ತ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಕೇಂದ್ರಗಳಲ್ಲಿ ಈಗಾಗಲೇ ಸೂಚಿಸಿರುವ ರಕ್ಷಣಾ ನಿಯಮಗಳನ್ನು ಪಾಲನೆ ಮಾಡಲಾಗುತ್ತಿದೆಯೇ ಎಂದು ಪರಿಶೀಲಿಸಬೇಕು. ಬೆಂಗಳೂರಿನಲ್ಲಿ ಗುಜರಾತ್ ನಂತಹ ಯಾವುದೇ ದುರ್ಘಟನೆ ನಡೆಯಬಾರದು” ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...