ಬೆಂಗಳೂರು | ಬಿಬಿಎಂಪಿ ನಿರ್ಲಕ್ಷ್ಯ; ಮರದ ಕೊಂಬೆ ಬಿದ್ದು, ಬೈಕ್ ಸವಾರನ ಬೆನ್ನು ಮೂಳೆ ಮುರಿತ

Date:

ಮರದ ಕೊಂಬೆ ಮುರಿದು ಬೈಕ್ ಸವಾರನೊಬ್ಬನ ಬೆನ್ನು ಮೂಳೆ ಮುರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಾಗರಬಾವಿ ನಿವಾಸಿ ಚಂದನ್‌ ಗಾಯಗೊಂಡ ವ್ಯಕ್ತಿ. ಅವರು ರಿಚ್‌ಮಂಡ್ ರಸ್ತೆಯಲ್ಲಿರುವ ಫೈನಾನ್ಸ್ ಕಂಪನಿವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಮಾರ್ಚ್ 7ರಂದು ಬೆಳಿಗ್ಗೆ ಕಚೇರಿಗೆ ಹೋಗುತ್ತಿದ್ದಾಗ ರಸ್ತೆಗೆ ಚಾಚಿಕೊಂಡಿದ್ದ ಮರದ ಕೊಂಬೆ ಮುರಿದು ಚಂದನ್ ಮೇಲೆ ಬಿದ್ದಿದೆ.

ಘಟನೆಯಲ್ಲಿ ಅವರ ಕುತ್ತಿಗೆಗೆ ಗಾಯವಾಗಿದೆ ಮತ್ತು ಬೆನ್ನು ಮೂಳೆ ಮುರಿದಿದೆ. ಕೂಡಲೇ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಂದನ ಅವರು ಕಳೆದ ಹದಿನಾಲ್ಕು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮರದ ಕೊಂಬೆ ಬೀಳುವಂತಿದ್ದರೂ ತೆರುವು ಮಾಡದ ಖಾಸಗಿ ಶಾಲೆ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿರುದ್ಧ ಆಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪ್ರಧಾನಿ ಮೋದಿ ತನಿಖಾ ಸಂಸ್ಥೆ ಬಳಸಿ ಕೇಜ್ರಿವಾಲ್‌ರನ್ನು ಬಂಧಿಸಿದ್ದಾರೆ: ಮುಖ್ಯಮಂತ್ರಿ ಚಂದ್ರು

ಖಾಸಗಿ ಶಾಲೆಯ ಆವರಣದಲ್ಲಿದ್ದ ಈ ಮರದ ಕೊಂಬೆಯನ್ನು ತೆಗೆಯುವಂತೆ ಹಲವರು ಬಿಬಿಎಂಪಿಗೆ ದೂರು ನೀಡಿದ್ದರು. ಆದರೂ ಸಹ ಎಚ್ಚೆತ್ತುಕ್ಕೊಳ್ಳದ ಅಧಿಕಾರಗಳ ನಿರ್ಲಕ್ಷ್ಯದಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...