ಬೆಂಗಳೂರು | ಸುಳ್ಳು ದೂರು ನೀಡಿದ ಮಾಜಿ ಬಿಗ್​ ಬಾಸ್​ ಸ್ಪರ್ಧಿ; ಕ್ರಮಕ್ಕೆ ಮುಂದಾದ ಪೊಲೀಸರು

Date:

ಲಾರಿ ಚಾಲಕ ತನ್ನ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾನೆ ಎಂದು ಬಿಗ್ ಬಾಸ್ ಸ್ಪರ್ಧಿ ಆ್ಯಡಂ ಪಾಷ ಎಲೆಕ್ಟ್ರಾನಿಕ್ ಸಿಟಿ ಠಾಣೆಗೆ ದೂರು ನೀಡಿದ್ದರು. ದೂರಿನ ಮೇರೆಗೆ ಪ್ರಕರಣ ದಾಖಲು ಮಾಡಿ ತನಿಖೆ ಆರಂಭಿಸಿದ ಪೊಲೀಸರಿಗೆ ಪಾಷಾ ಅವರು ಸುಳ್ಳು ದೂರು ನೀಡಿದ್ದಾರೆ ಎಂಬುದು ಗೊತ್ತಾಗಿದೆ. ಇದೀಗ, ಆತನ ವಿರುದ್ಧವೇ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ವಾಟರ್ ಟ್ಯಾಂಕ್ ಲಾರಿ ಚಾಲಕ ಅತಿವೇಗವಾಗಿ ಬರ್ತಿದ್ದನ್ನ ಪ್ರಶ್ನಿಸಿದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾನೆ ಎಂದು ಬಿಗ್ ಬಾಸ್ ಸ್ಪರ್ಧಿ ಆ್ಯಡಂ ಪಾಷ ಎಲೆಕ್ಟ್ರಾನಿಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದರು. ಎಲೆಕ್ಟ್ರಾನಿಕ್ ಸಿಟಿ ಠಾಣಾ ವ್ಯಾಪ್ತಿಯಲ್ಲಿ ವ್ಯಾಲಂಕೇಣಿ ಬ್ರಿಡ್ಜ್ ಬಳಿ ಘಟನೆ ನಡೆದಿರೋದಾಗಿ ದೂರು ದಾಖಲಿಸಿದ್ದರು. ಪಾಷಾ ಪ್ರಕರಣ ದಾಖಲು ಮಾಡುವ ವೇಳೆ, ರಾಂಗ್ ನಂಬರ್ ಕೊಟ್ಟಿದ್ದಾರೆ.

ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಆರಂಭ ಮಾಡಿದ ಪೊಲೀಸರು ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ನಡೆಸಿದಾಗ ಆದಂ ಪಾಷಾ ಮೇಲೆ ಅನುಮಾನ ಮೂಡಿದೆ. ತನಿಖೆ ಚುರುಕುಗೊಳಿಸಿದ ಪೊಲೀಸರು ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದಾಗ ಪಾಷಾ ಕಳ್ಳಾಟ ಬಯಲಾಗಿದೆ. ಪಾಷಾ ತನ್ನ ಬಟ್ಟೆಗಳನ್ನು ತಾನೇ ಹರಿದುಕೊಂಡು ಪೊಲೀಸ್‌ ಠಾಣೆಗೆ ಬಂದು ದೂರು ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೀಟರ್ ಬಡ್ಡಿ ದಂಧೆ; ಸೈಕಲ್ ರವಿ ಸಹಚರರ ಬಂಧನ

ಸುಳ್ಳು ಪ್ರಕರಣ ದಾಖಲಿಸಿದ  ಆ್ಯಡಂ ಪಾಷಾ ವಿರುದ್ಧ ಇದೀಗ ಪೊಲೀಸರು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಅಲ್ಲದೇ, ಸುಳ್ಳು ದೂರು ಕೊಟ್ಟ ಹಿನ್ನಲೆ ಆದಂ ಪಾಷಾ ವಿರುದ್ಧ ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...