ಬೆಂಗಳೂರು | ಅಶ್ಲೀಲ ಫೋಟೋ ತೋರಿಸಿ ಬೆದರಿಸಿ ಹಣ ಸುಲಿಗೆ: ಎಫ್ಐಆರ್ ದಾಖಲು

Date:

ಜೈಲಿನಲ್ಲಿರುವ ರೌಡಿಶೀಟರ್‌ವೊಬ್ಬ ಪರಿಚಿತ ಮಹಿಳೆಯ ಫೋಟೋಗಳನ್ನು ಮಾರ್ಫ್ ಮಾಡಿ ಬೆದರಿಕೆ ಹಾಕಿ ಆಕೆಯ ತಾಯಿಯಿಂದ ಹಣ ಪೀಕುತ್ತಿದ್ದನು. ಸದ್ಯ ಆರೋಪಿಯ ವಿರುದ್ಧ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಮನೋಜ್ ಅಲಿಯಾಸ್ ಕೆಂಚ ಜೈಲಿನಲ್ಲಿರುವ ರೌಡಿ ಶೀಟರ್. ​ಪರಪ್ಪನ ಕಾರಾಗೃಹದಲ್ಲಿರುವ ರೌಡಿ ಶೀಟರ್‌ ತನ್ನ ಮಗಳ ಮಾರ್ಫ್ ಮಾಡಿದ ಚಿತ್ರಗಳು ಮತ್ತು ವೀಡಿಯೊಗಳನ್ನು ಹಾಕಿ ಬ್ಲಾಕ್ ಮೇಲ್ ಮಾಡಿ ಹಣ ಪೀಕುತ್ತಿದ್ದಾನೆ ಎಂದು ಆರೋಪಿಸಿ 43 ವರ್ಷದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.

“ಹಣ ನೀಡದಿದ್ದರೆ ಚಿತ್ರಗಳು ಮತ್ತು ವೀಡಿಯೊಗಳನ್ನು ತನ್ನ ಅಳಿಯನಿಗೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾನೆ” ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರೌಡಿಶೀಟರ್‌ಗೆ ಸಂತ್ರಸ್ತೆ ತಾಯಿ ಈ ಹಿಂದೆ ₹40 ಸಾವಿರ ಹಣ ನೀಡಿದ್ದರು ಎನ್ನಲಾಗಿದೆ. ಮತ್ತೆ ₹5 ಲಕ್ಷ ನೀಡಲು ಹಣದ ವ್ಯವಸ್ಥೆ ಮಾಡುವಂತೆ ದೂರುದಾರರಿಗೆ ಬೆದರಿಕೆ ಹಾಕುತ್ತಿದ್ದಾರೆ. ಹಣ ವಸೂಲಿ ಮಾಡಲು ಜೈಲಿನಿಂದ ವಾಟ್ಸ್‌ಆ್ಯಪ್ ಕರೆ ಮಾಡಿದ್ದನು” ಎನ್ನಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಯಲಹಂಕ ನ್ಯೂ ಟೌನ್ ಪೊಲೀಸರು ಆರೋಪಿಗಳ ಬಂಧನಕ್ಕೆ ಮುಂದಾಗಿದ್ದು, ಮನು, ಆತನ ಸಹಚರ ಕಾರ್ತಿಕ್ ಹಾಗೂ ಇತರರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ. ಮನು ಮತ್ತೊಂದು ಪ್ರಕರಣದಲ್ಲಿ ಜೈಲು ಪಾಲಾಗಿದ್ದು, 2023ರ ಆಗಸ್ಟ್‌ನಿಂದ ದೂರುದಾರರನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದಾನೆ ಎಂದು ಆರೋಪಿಸಲಾಗಿದೆ.

ಫೆಬ್ರವರಿ 9 ರಂದು ದೂರುದಾರರಿಗೆ ಕಾರ್ತಿಕ್ ಕರೆ ಮಾಡಿ ₹5 ಲಕ್ಷ ಹಣ ನೀಡಲು ಕೇಳಿದ್ದಾರೆ. ಆಕೆ ಹಣ ನೀಡಲು ನಿರಾಕರಿಸಿದಾಗ, ಮನು ಮತ್ತೆ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿವಾಹದ ಆನ್​ಲೈನ್ ನೋಂದಣಿ ಪ್ರಕ್ರಿಯೆಗೆ ಫೆ.15 ರಿಂದ ಪ್ರಾಯೋಗಿಕ ಚಾಲನೆ

ದೂರುದಾರ ಮಹಿಳೆಗೆ ಕಳೆದ ವರ್ಷ ಆಗಸ್ಟ್‌ನಲ್ಲಿ ಆರೋಪಿ ತನ್ನ ನಂಬರ್​ನಿಂದ ವಾಟ್ಸ್​ಆ್ಯಪ್ ಮೂಲಕ ಆಕೆಯ ವಿವಾಹಿತ ಮಗಳ ಅಶ್ಲೀಲ ಫೋಟೊ ಕಳುಹಿಸಿದ್ದನು. ತಕ್ಷಣ ದೂರುದಾರ ಮಹಿಳೆ ಆ ನಂಬರಿಗೆ ಕರೆ ಮಾಡಿದಾಗ ”ನಿನ್ನ ಮಗಳ ಇಂತಹ ನಗ್ನ ಫೋಟೋಗಳು ನನ್ನ ಬಳಿ ಇವೆ. ಅವುಗಳನ್ನು ನಿನ್ನ ಅಳಿಯನಿಗೆ ಕಳುಹಿಸುತ್ತೇನೆ. ಕಳುಹಿಸಬಾರದೆಂದರೆ ಹಣ ಕೊಡಬೇಕು” ಎಂದು ಆರೋಪಿ ಬೆದರಿಕೆ ಒಡ್ಡಿದ್ದಾನೆ. ಇದರಿಂದ ಭಯಗೊಂಡ ಮಹಿಳೆ ಆತ ಹೇಳಿದಂತೆ ಎರಡು ಖಾತೆಗಳಿಗೆ ಹಣ ವರ್ಗಾಯಿಸಿದ್ದರು ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...