ಬೆಂಗಳೂರು | ಉಸಿರುಗಟ್ಟಿಸಿ ವಿದೇಶಿ ಮಹಿಳೆ ಕೊಲೆ; ಶಂಕೆ

Date:

ವಿದೇಶಿ ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಜರೀನಾ ಮೃತ ಮಹಿಳೆ. ಈಕೆ ಮೂಲತಃ ಉಜ್ಬೇಕಿಸ್ತಾನದವರು. ಬಿಡಿಎ ಸೇತುವೆ ಬಳಿಯ ಖಾಸಗಿ ಸ್ಟಾರ್ ಹೋಟೆಲ್​ನ ಕೊಠಡಿಯಲ್ಲಿ ಅವರು ಮೃತಪಟ್ಟಿದ್ದಾರೆ.

ಜರೀನಾ ಕಳೆದ ನಾಲ್ಕು ದಿನದ ಹಿಂದೆ ಉಜ್ಬೇಕಿಸ್ತಾನದಿಂದ ಪ್ರವಾಸಿ ವೀಸಾದಡಿ ಬೆಂಗಳೂರಿಗೆ ಬಂದಿದ್ದರು. ಹೋಟೆಲ್​ವೊಂದರಲ್ಲಿ ತಂಗಿದ್ದರು. ಮಾರ್ಚ್‌ 13ರಂದು ಸಾಯಂಕಾಲ ಹೋಟೆಲ್ ಸಿಬ್ಬಂದಿ ಕೂಗಿದರೂ ಮಹಿಳೆ ಬಾಗಿಲು ತೆರೆದಿಲ್ಲ. ಹೀಗಾಗಿ, ಮಾರ್ಚ್‌ 13ರ ಮಧ್ಯರಾತ್ರಿ ಮಾಸ್ಟರ್ ಕೀ ಬಳಸಿ ಹೋಟೆಲ್ ಸಿಬ್ಬಂದಿ ಕೊಠಡಿಯ ಬಾಗಿಲು ತೆಗೆದಾಗ ಮಹಿಳೆಯ ಶವ ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಲೆಯಾಗಿರುವ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಶೇಷಾದ್ರಿಪುರಂ ಪೊಲೀಸರು, ಎಫ್​ಎಸ್​ಎಲ್ ತಂಡ ಹಾಗೂ ಡಾಗ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೇಂದ್ರ ವಿಭಾಗ ಡಿಸಿಪಿ ಶೇಖರ್ ಟೆಕ್ಕಣ್ಣನವರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಯಾವುದೇ ಅಡಚಣೆ ಆಗುವುದಿಲ್ಲ : ಸ್ಪಷ್ಟನೆ ನೀಡಿದ ಸಂಸ್ಥೆ

ಇನ್ನು ಆರೋಪಿ ಉಸಿರುಗಟ್ಟಿಸಿ ಮಹಿಳೆಯ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹೋಟೆಲ್ ಸಿಸಿಟಿವಿ ಸೇರಿದಂತೆ ಇನ್ನಿತರ ದಾಖಲೆಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಸದ್ಯ ಸ್ಥಳದಲ್ಲಿ ಎಫ್​ಎಸ್​ಎಲ್ ಪರಿಶೀಲನೆ ಮುಕ್ತಾಯವಾಗಿದೆ. ಮರಣೋತ್ತರ ಪರೀಕ್ಷೆಗೆ ಮಹಿಳೆಯ ಮೃತದೇಹವನ್ನು ಬೋರಿಂಗ್ ಆಸ್ಪತ್ರೆಗೆ ಸಾಗಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...