ಬೆಂಗಳೂರು | ತಮಾಷೆ ಮಾಡಲು ಗುದನಾಳಕ್ಕೆ ‘ಏರ್‌ಪ್ರೆಶರ್‌’ನಿಂದ ಗಾಳಿ ಬಿಟ್ಟ ಸ್ನೇಹಿತ: ಕರುಳು ಛಿದ್ರವಾಗಿ ಯುವಕ ಸಾವು

Date:

ತಮಾಷೆ ಮಾಡಲು ಹೋಗಿ ತನ್ನ ಸ್ನೇಹಿತನ ಗುದನಾಳಕ್ಕೆಏರ್ ಪ್ರೆಶರ್ ಪೈಪ್‌’ನಿಂದ ಗಾಳಿ ಬಿಟ್ಟ ಪರಿಣಾಮ ಒತ್ತಡ ಹೆಚ್ಚಾಗಿ ದೇಹದೊಳಗಿನ ಕರುಳು ಛಿದ್ರವಾಗಿದ್ದು, ಯುವಕ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಯೋಗೇಶ್ (24) ಮೃತ ಯುವಕ. ಆರೋಪಿ ಮುರುಳಿ ಎಂಬಾತನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಘಟನೆ ಮಾರ್ಚ್‌ 25ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮೂಲತಃ ದೇವನಹಳ್ಳಿ ತಾಲೂಕಿನ ಯೇಗೇಶ್ ಥಣಿಸಂದ್ರದಲ್ಲಿದ್ದ ತನ್ನ ಅಜ್ಜಿ ಮನೆಯಲ್ಲಿ ತಂದೆ ಹಾಗೂ ಅಕ್ಕನೊಂದಿಗೆ ವಾಸವಾಗಿದ್ದರು. ಫಾರ್ಮಾ ಕಂಪೆನಿಯೊಂದರಲ್ಲಿ ಡೆಲಿವರಿ ಬಾಯ್ಆಗಿ ಕೆಲಸ ಮಾಡುತ್ತಿದ್ದರು. ಮುಂದಿನ ಏಪ್ರಿಲ್ ತಿಂಗಳಿನಲ್ಲಿ ಆತನ ಸಹೋದರಿಯ ವಿವಾಹವೂ ನಿಶ್ಚಯವಾಗಿತ್ತು. ಹೀಗಾಗಿ, ಮದುವೆ ಕೆಲಸ ಕಾರ್ಯಗಳಿಗಾಗಿ ಓಡಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾರ್ಚ್‌ 25 ಸಂಜೆ ತನ್ನ ಬೈಕ್‌ ಸರ್ವೀಸ್‌ಗಾಗಿ ಥಣಿಸಂದ್ರದಲ್ಲಿ ವಾಹನ ಸರ್ವೀನ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ತನ್ನ ಸ್ನೇಹಿತ ಮುರುಳಿಗೆ ಬೈಕ್‌ ಕೊಡಲು ಯೋಗೇಶ್‌ ಹೋಗಿದ್ದರು.  ವೇಳೆ, ಯೋಗೇಶ್ ನಿಂತಿದ್ದಲ್ಲಿಗೆ ತೆರಳಿದ ಮುರುಳಿ ತಮಾಷೆಗಾಗಿ ಏಕಾಏಕಿ ಆತನ ಗುದದ್ವಾರಕ್ಕೆ ಏರ್ ಪ್ರೆಶರ್​​ನಿಂದ ಗಾಳಿ ಬಿಟ್ಟಿದ್ದಾನೆ ಎನ್ನಲಾಗಿದೆ.

ಗಾಳಿಯ ಒತ್ತಡ ಹೆಚ್ಚಾಗಿ ದೇಹದ ಹೊಟ್ಟೆಯೊಳಗಿನ ಕರುಳು ಸ್ಫೋಟಗೊಂಡು ಯೋಗೇಶ್ ಅಲ್ಲಿಯೇ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಕೂಡಲೇ, ಆತನನ್ನು ಮುರುಳಿ ಹಾಗೂ ಇನ್ನಿತರರು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಯೋಗೇಶ್ ಮೃತಪಟ್ಟಿದ್ದಾರೆ.

ಘಟನೆ ಸಂಬಂಧ ನಗರದ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 304 ಅಡಿ ಪ್ರಕರಣ ದಾಖಲಾಗಿದೆ. ಆರೋಪಿ ಮುರುಳಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುನಾವಣೆ | ವಿಪಕ್ಷಗಳ ಮೇಲೆ ಮೋ-ಶಾ ಪ್ರಯೋಗಿಸುತ್ತಿರುವ ಅಸ್ತ್ರಗಳಿವು

ಘಟನೆ ಸಂಬಂಧ ಮಾತನಾಡಿದ ಡಿಸಿಪಿ ಲಕ್ಷ್ಮೀ ಪ್ರಸಾದ್, “ಮೃತ ಯೋಗೇಶ್ ಮೂಲತಃ ವಿಜಯಪುರದವರು. ಬೆಂಗಳೂರಿನಲ್ಲಿ ಡೆಲವರಿ ಏಜೆಂಟ್ ಆಗಿ ಕೆಲಸ ಮಾಡಿಕೊಂಡು ನಗರದ ಥಣಿಸಂದ್ರದಲ್ಲಿ ವಾಸವಿದ್ದನು. ಮುರುಳಿ ಹಾಗೂ ಯೋಗೇಶ್ ಇಬ್ಬರು ಸ್ನೇಹಿತರಾಗಿದ್ದ ಕಾರಣ ಆಟ ಆಡಲು ಹೋಗಿ ಈ ಘಟನೆ ಸಂಭವಿಸಿದೆ. ಮೊದಲಿಗೆ ಮುರುಳಿ, ಯೋಗೇಶ್‌ನ ಮುಖ ಹಾಗೂ ಎದೆಗೆ ಗಾಳಿ ಬಿಟ್ಟಿದ್ದಾನೆ” ಎಂದರು.

ಬಳಿಕ, ಹಿಂಬದಿಯಿಂದ ಗುದದ್ವಾರಕ್ಕೆ ಗಾಳಿ ಬಿಟ್ಟಿದ್ದಾನೆ. ವೇಳೆ ಹೊಟ್ಟೆ ಒಮ್ಮೆಲೆ ಊದಿಕೊಂಡು ಯೋಗೇಶ್ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ” ಎಂದು ವಿವರಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...