ಬೆಂಗಳೂರು | ಗುಡುಗು-ಮಿಂಚು ಸಹಿತ ಭಾರೀ ಗಾಳಿ ಮಳೆ; ನಗರದ ಹಲವೆಡೆ ಸಂಚಾರ ಅಸ್ತವ್ಯಸ್ತ

Date:

ಬೆಂಗಳೂರು ನಗರದಲ್ಲಿ ಗುರುವಾರ ಸಂಜೆ ಗುಡುಗು-ಮಿಂಚು ಸಹಿತ ಭಾರೀ ಗಾಳಿ ಮಳೆ ಆರಂಭವಾಗಿದ್ದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ನಗರದ ಹಲವು ಕಡೆ ತಗ್ಗು ಪ್ರದೇಶಗಳಲ್ಲಿ ಹಾಗೂ ಹಲವು ಭಾಗಗಳ ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದರಿಂದ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ.

ಮಳೆಯಿಂದಾಗಿ ಹಲವು ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಬಿಎಂಟಿಸಿ ಬಸ್ಸುಗಳು ತಡವಾಗಿ ಸಂಚರಿಸುತ್ತಿದ್ದು, ಕೆಲಸಕ್ಕೆ ತೆರಳಿದ್ದ ಒಂದಷ್ಟು ಉದ್ಯೋಗಿಗಳಿಗೆ ಮನೆ ತಲುಪಲು ಅಡ್ಡಿಯಾಯಿತು. ಕೆಲಸ ಬಿಡುವ ವೇಳೆಗೆ ಸುರಿದ ಮಳೆಯಿಂದ, ಕಾರ್ಮಿಕರ ದಿನದಂದೂ ಕೆಲಸಕ್ಕೆ ತೆರಳಿದ್ದ ಕೆಲಸಗಾರರು ಸಮಯಕ್ಕೆ ಸರಿಯಾಗಿ ಮನೆಗೆ ತೆರಳದಂತೆ ಅಡ್ಡಿಯಾಯಿತು.

ಭಾರೀ, ಗಾಳಿ ಮಳೆಗೆ ಕತ್ರಿಗುಪ್ಪೆಯ ಎಂ ಎಂ ಬಾರ್​ ಬಳಿ ಆಟೋದ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ವಿಚಾರ ತಿಳಿದು ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ನಗರದ ರಿಚ್ಮಂಡ್ ಟೌನ್, ಶಾಂತಿನಗರ, ಕಾರ್ಪೊರೇಷನ್, ಮೆಜೆಸ್ಟಿಕ್​, ಕೆ ಆರ್ ಮಾರ್ಕೆಟ್​, ರಾಜಾಜಿನಗರ, ಬಸವೇಶ್ವರ ನಗರ, ನಂದಿನಿ ಲೇಔಟ್ ನಾಗಸಂದ್ರ, ಕೆಂಗೇರಿ, ಜಯನಗರ, ಬನಶಂಕರಿ, ಜೆಪಿ ನಗರ ಸೇರಿದಂತೆ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಕೆಲವು ಕಡೆಗಳಲ್ಲಿ ಮರಗಳ ಕೊಂಬೆಗಳು, ಮರಗಳು ರಸ್ತೆಗುರುಳಿದ್ದು, ವಿದ್ಯುತ್‌ ತಂತಿ ಮೇಲೆಯೂ ಬಿದ್ದಿವೆ. ಇದರಿಂದ ಸಂಚಾರಕ್ಕೆ ಅಡ್ಡಿಯಾಗಿದ್ದು, ವಿದ್ಯುತ್‌ ವ್ಯತ್ಯಯವೂ ಉಂಟಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆಬ್ಬಾಳ ಪೊಲೀಸ್ ಠಾಣೆಯಿಂದ ವಿಮಾನ ನಿಲ್ದಾಣದ ಕಡೆಗೆ, ಆರ್ ಪಿ ರಸ್ತೆಯಿಂದ ಪಿ ಜಿ ಹಳ್ಳಿ ಕಡೆಗೆ, ವರ್ತೂರು ಕಡೆಯಿಂದ ಗುಂಜೂರು ಕಡೆಗೆ, ಭಾಷ್ಯಂ ವೃತ್ತದಿಂದ ಕಾವೇರಿ ಕಡೆಗೆ, ಉದಯ ಟಿ ವಿ ಜಂಕ್ಷನ್ ಕಡೆಯಿಂದ ಜಯಮಹಲ್ ರಸ್ತೆ ಕಡೆಗೆ, ಬಿಳೇಕಹಳ್ಳಿಯಿಂದ ಜೆಡಿ ಮರದ ಕಡೆಗೆ, ವೀರಸಂದ್ರ ಎರಡೂ ಬದಿ ರಸ್ತೆ, ಹೊಸ ರಸ್ತೆಯಿಂದ ಬಸಾಪುರ ಜಂಕ್ಷನ್ ಕಡೆಗೆ ಹಾಗೂ
ಹೊರಮಾವು ಕೆಳಸೇತುವೆಯಿಂದ ಕೆಆರ್ ಪುರದ ಕಡೆಗೆ ಭಾರೀ ಗಾಳಿ ಮಳೆ ಸುರಿಯುತ್ತಿದೆ. ಹಾಗಾಗಿ ನಿಧಾನಗತಿಯ ಸಂಚಾರವಿರುತ್ತದೆ ಎಂದು ಬೆಂಗಳೂರು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿದ್ದೀರಾ? ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್​ ಬೆಲೆ ಇಳಿಕೆ

ಅಲ್ಲದೆ, ʼಅನಗತ್ಯವಾಗಿ ಮನೆಯಿಂದ ಹೊರಗೆ ಹೋಗದಿರುವುದು ಹಾಗೂ ತಗ್ಗು ಪ್ರದೇಶಗಳಲ್ಲಿ, ಮರಗಳ ಕೆಳಗೆ ವಾಹನಗಳನ್ನು ನಿಲ್ಲಿಸದೇ ಇರುವುದು ಉತ್ತಮʼ ಎಂದು ಸಲಹೆ ನೀಡಿದ್ದಾರೆ.

ಮೇ 3ರವರೆಗೆ ಮಳೆ ಸಾಧ್ಯತೆ

ಟ್ರಫ್ ಇರುವುದರಿಂದ ಬೆಂಗಳೂರಲ್ಲಿ ಮೇ 1ರಿಂದ 3ರವರೆಗೆ ಸಾಧಾರಣ ಮಳೆಯಾಗಲಿದೆ. ಈ ಅವಧಿಯಲ್ಲಿ ನಗರದ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಗುರುವಾರ ಮುನ್ಸೂಚನೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...