ಬೆಂಗಳೂರು | 50,000ಕ್ಕೂ ಅಧಿಕ ದಂಡ ಬಾಕಿ ಇದ್ದರೆ, ಮನೆ ಬಾಗಿಲಿಗೆ ಬರ್ತಾರೆ ಸಂಚಾರ ಪೊಲೀಸರು!

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಅಲ್ಲದೇ, ನಿಯಮ ಉಲ್ಲಂಘನೆ ಮಾಡಿ ದಂಡ ಪಾವತಿ ಮಾಡಿದೇ ತಪ್ಪಿಸಿಕೊಂಡು ಓಡಾಡುವವರಿಗೆ ಬಿಸಿ ಮುಟ್ಟಿಸಲು ಸಂಚಾರ ಪೊಲೀಸ್ ಇಲಾಖೆ ಮುಂದಾಗಿದೆ.

ಹೌದು, ಸಂಚಾರ ನಿಯಮ ಉಲ್ಲಂಘನೆ ಮಾಡಿ 50 ಸಾವಿರಕ್ಕೂ ಅಧಿಕ ದಂಡ ಬಾಕಿ ಉಳಿಸಿಕೊಂಡಿದ್ದರೇ, ಅಂತಹವರ ಮನೆಗೆ ಸಂಚಾರ ಪೊಲೀಸರು ತೆರಳಿ ದಂಡ ವಸೂಲಿ ಮಾಡಲು ಮುಂದಾಗಿದ್ದಾರೆ.

2,300ಕ್ಕೂ ಅಧಿಕ ವಾಹನಗಳು 50 ಸಾವಿರಕ್ಕೂ ಅಧಿಕ ದಂಡ ಬಾಕಿ ಉಳಿಸಿಕೊಂಡಿವೆ. ಈಗಾಗಲೇ ಬೆಂಗಳೂರು ಸಂಚಾರ ಪೊಲೀಸರು ಹಲವು ವಾಹನ ಮಾಲೀಕರಿಂದ ದಂಡ ಸಂಗ್ರಹ ಮಾಡಲಾಗಿದೆ. ನಿಯಮ ಉಲ್ಲಂಘನೆ ದಂಡ ಕಟ್ಟದಿದ್ದರೆ ಅಂತಹ ವಾಹನ ಸವಾರರ ವಿರುದ್ಧ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಲಿದ್ದು, ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಹತ್ತು ದಿನಗಳಿಂದ ನಗರಾದ್ಯಂತ ಫುಟ್‌ಪಾತ್‌ ರೈಡಿಂಗ್‌, ಅಪ್ರಾಪ್ತರ ವಾಹನ ಚಾಲನೆ, ನೀರಿನ ಟ್ಯಾಂಕರ್‌, ನಂಬರ್‌ ಪ್ಲೇಟ್‌ ಮರೆ ಮಾಚುತ್ತಿರುವ ವಾಹನ ಸವಾರರನ್ನು ಪತ್ತೆ ಹಚ್ಚಿ ಸಂಚಾರ ಪೊಲೀಸರು ಪ್ರಕರಣ ದಾಖಲಿಸುತ್ತಿದ್ದಾರೆ. ಬಹುತೇಕ ಪ್ರಕರಣಗಳಲ್ಲಿ ನಿಯಮ ಉಲ್ಲಂಘಿಸಿದ ಸವಾರರ ಬಳಿ ಸ್ಥಳದಲ್ಲಿಯೇ ದಂಡ ವಸೂಲಿ ಮಾಡುತ್ತಿದ್ದಾರೆ.

ಪದೇಪದೆ ಸಂಚಾರ ನಿಯಮ ಉಲ್ಲಂಘನೆ ಮಾಡುವ ವಾಹನ ಸವಾರರ ಡ್ರೈವಿಂಗ್ ಲೈಸೆನ್ಸ್ ಅಮಾನತು ಮಾಡುವಂತೆ ಕಳೆದ ತಿಂಗಳು ಬೆಂಗಳೂರು ಸಂಚಾರ ಇಲಾಖೆ ಜಿಲ್ಲಾ ಪೊಲೀಸರಿಗೆ ಸೂಚನೆ ನೀಡಿತ್ತು.

ಈ ಸುದ್ದಿ ಓದಿದ್ದೀರಾ? ಕೆಐಎ | 3 ಪ್ರತ್ಯೇಕ ಪ್ರಕರಣಗಳಲ್ಲಿ ₹6.8 ಕೋಟಿ ಮೌಲ್ಯದ 9.3 ಕೆಜಿ ಚಿನ್ನ ವಶ; 6 ಮಂದಿ ಬಂಧನ

ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡುವುದರಿಂದ ಅಪಘಾತಗಳು ಸಂಭವಿಸಿ, ಅನೇಕರು ಸಾವನ್ನಪ್ಪಿದ್ದಾರೆ. ಅಲ್ಲದೇ ಹಲವು ಜನ ಗಾಯಗೊಂಡಿದ್ದಾರೆ. ಹಾಗಾಗಿ, ಜನರು ಟ್ರಾಫಿಕ್ ನಿಯಮ ಪಾಲಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಪೊಲೀಸರು ಮಾತ್ರವಲ್ಲದೆ, ಕೆಲವು ಕಾಲೇಜು ವಿದ್ಯಾರ್ಥಿಗಳು ಬೆಂಗಳೂರಿನ ಸಿಗ್ನಲ್​ಗಳಲ್ಲಿ ಟ್ರಾಫಿಕ್ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.

“ವಾಹನಗಳ ಮಾಲೀಕರು ಅನೇಕ ಸಂದರ್ಭಗಳಲ್ಲಿ ದಂಡ ಪಾವತಿ ಮಾಡದೇ, ವಾಹನವನ್ನು ಮಾರಾಟ ಮಾಡಿದ್ದಾರೆ. ಹೀಗೆ ಮಾಡಬಾರದು. ಮುಂದಿನ ದಿನಗಳಲ್ಲಿ ದಂಡ ಪಾವತಿಸದೇ ಇದ್ದರೆ ಕಾನೂನಾತ್ಮಕವಾಗಿ ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಲಾಗುತ್ತದೆ. ಇದೀಗ ವಾಹನ ಮಾರಾಟ ಮಾಡಿದವರಿಗೆ ದಂಡ ಪಾವತಿ ಮಾಡಲು ಕಾಲಾವಕಾಶ ನೀಡಲಾಗಿದೆ” ಎಂದು ಸಂಚಾರ ವಿಭಾಗದ ಜಂಟಿ ಆಯುಕ್ತ ಎಂ.ಎನ್.ಅನುಚೇತ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...