ಬೆಂಗಳೂರು | ಸೈಬರ್ ಕ್ರೈಂಗಾಗಿ ಭಾರತೀಯ ಸಿಮ್‌ ಖರೀದಿ; ವಿದೇಶಕ್ಕೆ ಸಿಮ್ ರವಾನೆ ಮಾಡುತ್ತಿದ್ದವನ ಬಂಧನ

Date:

ಸೈಬರ್ ಕ್ರೈಂಗಾಗಿ ಭಾರತೀಯ ಸಿಮ್‌ಗಳನ್ನು ಖರೀದಿ ಮಾಡಿ ಅಕ್ರಮವಾಗಿ ವಿದೇಶಕ್ಕೆ ರವಾನೆ ಮಾಡುತ್ತಿದ್ದ ಆರೋಪಿಯನ್ನು ಸದ್ಯ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ.

ನಾರಾ ಶ್ರೀನಿವಾಸ್ ರಾವ್ ಬಂಧಿತ ಆರೋಪಿ. ಈತ ಮೂಲತಃ ಆಂಧ್ರಪ್ರದೇಶದ ವಿಶಾಖಪಟ್ಟಣದವನು. ಬಂಧಿತ ಆರೋಪಿ ಭಾರತದ ಸಿಮ್‌ಗಳನ್ನು ಖರೀದಿ ಮಾಡಿ ಪಾರ್ಸಲ್ ಮುಖಾಂತರ ಅಕ್ರಮವಾಗಿ ವಿದೇಶಕ್ಕೆ ತೆಗೆದುಕೊಂಡು ಹೋಗಲು ಪ್ರಯತ್ನ ಮಾಡುತ್ತಿದ್ದನು.

ಈ ವೇಳೆ, ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಸಿಮ್‌ಗಳು ಪತ್ತೆಯಾಗಿದ್ದು, ಸೈಬರ್‌ ಕ್ರೈಂ ಮಾಡುವ ಜಾಲದ ಬಗ್ಗೆ ಕಂಡು ಹಿಡಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂದು ಪಾರ್ಸಲ್​ನಲ್ಲಿ 24, ಮತ್ತೊಂದರಲ್ಲಿ 111 ಸಿಮ್​​ಗಳನ್ನು ಅಕ್ರಮವಾಗಿ ಸಾಗಣೆ ಮಾಡಲಾಗುತ್ತಿತ್ತು. ಚೆನ್ನೈನ ಸೈಯದ್​​​​​ ಎಂಬಾತನಿಗೆ ಸೇರಿದ ಕೊರಿಯರ್​​ ಕಂಪನಿ ಮೂಲಕ ಪಾರ್ಸಲ್ ಬುಕ್ ಆಗಿತ್ತು.

ಏನಿದು ಸಿಮ್‌ ಅಕ್ರಮ ಸಾಗಾಟ?

ಆರೋಪಿಗಳು ಭಾರತೀಯ ಸಿಮ್‌ಗಳನ್ನು ಖರೀದಿ ಮಾಡಿ ಅಕ್ರಮವಾಗಿ ತೈವಾನ್ ಮತ್ತು ಕಾಂಬೋಡಿಯಾ ಸೇರಿದಂತೆ ಇನ್ನಿತರ ದೇಶಗಳಿಗೆ ಸಾಗಾಟ ಮಾಡುತ್ತಾರೆ.

ವಿದೇಶದಲ್ಲಿ ಕುಳಿತು ಈ ಸಿಮ್‌ಗಳನ್ನು ಬಳಸಿ ಬ್ಯಾಂಕ್‌ ಖಾತೆ, ವಾಟ್ಸ್‌ಆಪ್ ಅಕೌಂಟ್ ಓಪನ್ ಮಾಡಿಕೊಳ್ಳುತ್ತಾರೆ. ಬಳಿಕ, ಭಾರತದಲ್ಲಿನ ಜನರಿಗೆ ಪಾರ್ಟ್ ಟೈಂ ಕೆಲಸ ಕೊಡಿಸುವುದಾಗಿ ಹೇಳಿ ಜನರಿಂದ ಹಣ ಲೂಟಿ ಮಾಡುತ್ತಾರೆ. ಇಲ್ಲದಿದ್ದರೇ, ಷೇರು ಮಾರ್ಕೆಟ್​ನಲ್ಲಿ ಹೂಡಿಕೆ ಮಾಡಿ ಅಂತ ಆಫರ್ ಕೊಟ್ಟು ವಂಚನೆ ಮಾಡುತ್ತಿದ್ದಾರೆ.

ಈ ದಂಧೆಯ ಮುಖ್ಯ ಕಿಂಗ್‌ಪಿನ್ ಹೈದರಾಬಾದ್​ ಮೂಲದ ವ್ಯಕ್ತಿ. ಈತ ವಿಯೆಟ್ನಾಂನಲ್ಲಿ ಕುಳಿತುಕೊಂಡು ಎಲ್ಲವನ್ನು ನೋಡಿಕೊಳ್ಳುತ್ತಿದ್ದನು. ಪೊಲೀಸರು ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದ್ದು, ಸದ್ಯ ಒಂದು ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಮಳೆ ಅಬ್ಬರ; ಹಲವೆಡೆ ಮಳೆ ಅವಾಂತರ

ಅಕ್ರಮ ಚಿನ್ನ ಸಾಗಾಟ; ನಾಲ್ವರು ವಶಕ್ಕೆ

ಬಟ್ಟೆಗಳಲ್ಲಿ ಅಡಗಿಸಿಟ್ಟುಕೊಂಡು ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಮಹಿಳೆ ಸೇರಿದಂತೆ ನಾಲ್ವರು ಆರೋಪಿಗಳನ್ನು ಕಸ್ಟಮ್ಸ್​ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಬರೋಬ್ಬರಿ ₹1.96 ಕೋಟಿ ಮೌಲ್ಯದ 2.814 ಕೆಜಿ ಚಿನ್ನವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್​ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ದುಬೈನಿಂದ ಬೆಂಗಳೂರಿಗೆ ಬಂದಿಳಿದ ಪ್ರಯಾಣಿಕರು ಬ್ಯಾಗ್​​ನಲ್ಲಿನ ಜೀನ್ಸ್ ಪ್ಯಾಂಟ್, ಟೀ ಶರ್ಟ್​​​ಗಳಲ್ಲಿ ಪೌಡರ್​ ರೂಪದ ಚಿನ್ನವನ್ನು ಇಟ್ಟುಕೊಂಡು ಅಕ್ರಮವಾಗಿ ಸಾಗಿಸಲು ಯತ್ನಿಸಿದ್ದರು. ಆದರೆ, ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ನಡೆಸುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ.

ವಿಮಾನದಲ್ಲಿ ಕಾಣಿಸಿಕೊಂಡ ಹೊಗೆ; ತುರ್ತು ಭೂಸ್ಪರ್ಶ

ಕೊಚ್ಚಿಗೆ ತೆರಳುತ್ತಿದ್ದ ಏರ್ಇಂಡಿಯಾ ವಿಮಾನದಲ್ಲಿ ಹೊಗೆ ಕಾಣಿಸಿಕೊಂಡಿದ್ದರಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶವಾಗಿದೆ. ​

AI 1132 ಏರ್ಇಂಡಿಯಾ ವಿಮಾನ ರಾತ್ರಿ 11.20ಕ್ಕೆ ಬೆಂಗಳೂರಿನಿಂದ ಕೇರಳದ ಕೊಚ್ಚಿಗೆ ತೆರಳಲು ಟೇಕ್​​ ಆಫ್ ಆಗಿತ್ತು. ಆದರೆ, ವಿಮಾನದಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ.

ಕೂಡಲೇ, ಎಚ್ಚೆತ್ತ ಪೈಲಟ್​​ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೇ ಎಮರ್ಜೆನ್ಸಿ ಲ್ಯಾಂಡ್ಮಾಡಿದರು. ಇದರಿಂದ ಭಾರೀ ಅನಾಹುತ ತಪ್ಪಿದೆ. ವಿಮಾನ ಭೂ ಸ್ಪರ್ಶವಾಗುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಬೆಂಕಿಯನ್ನು ನಂದಿಸಿದ್ದಾರೆ. ವಿಮಾನದಲ್ಲಿದ್ದ ಸಿಬ್ಬಂದಿ ಸೇರಿ 170 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...