ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಲ್ಡರ್‌ಗಳ ಮನೆಗೆ ಆದಾಯ ತೆರಿಗೆ ಅಧಿಕಾರಿಗಳು ಮಾರ್ಚ್ 30ರಂದು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ.
ಹಲವು ಬಿಲ್ಡರ್‌ಗಳ ಮನೆ, ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೆ.ಆರ್.ಪುರಂ, ಕೊಡಿಗೇಹಳ್ಳಿ ಸೇರಿದಂತೆ 20ಕ್ಕೂ ಹೆಚ್ಚು ಕಡೆಗಳಲ್ಲಿ ಏಕಕಾಲದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಮಾರ್ಚ್ 30ರಂದು ಬೆಳಿಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಂಗಳೂರಿನಲ್ಲಿರುವ 20ಕ್ಕೂ ಹೆಚ್ಚು ಬಿಲ್ಡರ್‌ಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಾನ್ಸೂನ್ ಪ್ರವಾಹದ ಬಗ್ಗೆ ಈಗಲೇ ಎಚ್ಚೆತ್ತುಕ್ಕೊಳ್ಳಿ ಎಂದ ನಿವಾಸಿಗಳು
ಬೆಂಗಳೂರಿನ ಮೇಘನಾ ಫುಡ್ಸ್ ಗ್ರೂಪ್ ಕಂಪನಿಗೆ ಸೇರಿದ 10ಕ್ಕೂ ಹೆಚ್ಚು ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಳೆದ ವಾರ ದಾಳಿ ನಡೆಸಿದ್ದರು. ಮೇಘನಾ ಫುಡ್ಸ್ ಕಂಪನಿ ಹೋಟೆಲ್ ಮತ್ತು ರೆಸ್ಟೋರೆಂಟ್ಗಳನ್ನು ನಡೆಸುತ್ತಿದ್ದು, ಕೋರಮಂಗಲ, ಇಂದಿರಾನಗರ, ಜಯನಗರದಲ್ಲಿ ಇದರ ಶಾಖೆಗಳಿವೆ. ಆದಾಯ ತೆರಿಗೆ ಪಾವತಿಯಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು.




