ಬೆಂಗಳೂರು | ಕೆಎಎಸ್‌ ಅಧಿಕಾರಿಯ ಪತ್ನಿ ಅನುಮಾನಾಸ್ಪದ ಸಾವು

Date:

ರಾಜ್ಯ ರಾಜಧಾನಿ ಬೆಂಗಳೂರಿನ ಸಂಜಯನಗರ‌ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಕೆಎಎಸ್‌ ಅಧಿಕಾರಿಯೊಬ್ಬರ ಪತ್ನಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಚೈತ್ರಾ ಬಿ.ಗೌಡ (35) ಸಾವನ್ನಪ್ಪಿದ ಮಹಿಳೆಯಾಗಿದ್ದಾರೆ. ಹೈಕೋರ್ಟ್​​ನಲ್ಲಿ ಅಡ್ವೋಕೇಟ್ ಆಗಿದ್ದ‌ ಚೈತ್ರಾ ಅವರು ಸಂಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಅಣ್ಣಯ್ಯ ಲೇಔಟ್​​ನಲ್ಲಿ ವಾಸವಾಗಿದ್ದರು. ಮಹಿಳೆಯ ಪತಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ನಿಗಮದಲ್ಲಿ (ಕೆಐಡಿಬಿ) ಅಸಿಸ್ಟಂಟ್ ಕಮಿಷನರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವೃತ್ತಿಯಲ್ಲಿ ವಕೀಲರಾಗಿದ್ದ ಚೈತ್ರಾ, ಪ್ರವೃತ್ತಿಯಲ್ಲಿ ಮಾಡೆಲ್‌ ಆಗಿ ಗುರುತಿಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.

ಶನಿವಾರ ಬೆಳಗ್ಗೆ ಚೈತ್ರ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮನೆಯವರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಪೊಲೀಸರು ಮೃತದೇಹವನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅಕ್ರಮವಾಗಿ ಬ್ಯಾನರ್ ಅಳವಡಿಕೆ : ಎಫ್‌ಐಆರ್ ದಾಖಲು

2016ರಲ್ಲಿ ಶಿವಕುಮಾರ್ ಚೈತ್ರ ಅವರನ್ನು ಮದುವೆಯಾಗಿದ್ದರು. ಮೃತಳ ಮನೆಯವರಿಂದ ಸಾವಿನ ಹಿಂದೆ ಗಂಡನ ಹೊಣೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಘಟನೆ ಸಂಬಂಧ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...