ಬೆಂಗಳೂರು | ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದ ಮಹಿಳೆಯ ಮಾಂಗಲ್ಯ ಸರ ಕಳ್ಳತನ

Date:

ಎದೆನೋವು ಎಂದು ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದ ಮಹಿಳೆಯ ಮಾಂಗಲ್ಯ ಸರ ಕಳ್ಳತನವಾದ ಘಟನೆ ಬೆಂಗಳೂರಿನ ಗೋವಿಂದರಾಜ ನಗರದಲ್ಲಿ ನಡೆದಿದೆ.

ರಾಧಾ ಎಂಬ ಮಹಿಳೆಯ ಮಾಂಗಲ್ಯ ಸರ್ ಕಳ್ಳತನವಾಗಿದೆ. ಫೆಬ್ರವರಿ 8 ರಂದು ಮಹಿಳೆಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ, ಮೂಡಲಪಾಳ್ಯದಲ್ಲಿರುವ ಖಾಸಗಿ ಆಸ್ಪತ್ರೆಗೆ ತೆರಳಿದ್ದಾರೆ. ಈ ವೇಳೆ, ಇಸಿಜಿ ಮಾಡಬೇಕಾದಾಗ ನರ್ಸ್‌ ಅಕ್ಷತಾ ಎಂಬುವವರು ಮಾಂಗಲ್ಯ ಸರವನ್ನು ತೆಗೆಯಲು ಹೇಳಿದ್ದಾರೆ.

ರಾಧಾ ಮಾಂಗಲ್ಯ ಸರ ತೆಗೆದ ಬಳಿಕ ತಮ್ಮ ಪತಿಗೆ ಆ ಮಾಂಗಲ್ಯ ಸರವನ್ನು ಕೊಡಲು ನರ್ಸ್‌ಗೆ ಹೇಳಿದ್ದಾರೆ. ನರ್ಸ್‌ ಅಲ್ಲೇ ದಿಂಬಿನ ಕೆಳಗೆ ಇಡಿ ಎಂದು ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನರ್ಸ್‌ ಹೇಳಿದಂತೆ ರಾಧಾ ತನ್ನ ಮಾಂಗಲ್ಯ ಸರವನ್ನು ದಿಂಬಿನ ಕೆಳಗಡೆ ಇಟ್ಟು ಇಸಿಜಿ ಮಾಡಿಸಿಕೊಂಡಿದ್ದಾರೆ. ಬಳಿಕ, ಸರವನ್ನು ಮರೆತು ಹೋಗಿದ್ದಾರೆ. ಮನೆಗೆ ತೆರಳಿದ ರಾಧಾ ಸರವನ್ನು ಮರೆತು ರಾತ್ರಿ ನಿದ್ದೆ ಮಾಡಿದ್ದಾರೆ.

ಬಳಿಕ, ಮರುದಿನ ಸ್ನಾನಕ್ಕೆ ಹೋದಾಗ ಮಹಿಳೆಗೆ ಸರದ ಬಗ್ಗೆ ಅರಿವಾಗಿದೆ. ಕೂಡಲೇ ನೆನಪು ಮಾಡಿಕೊಂಡು ಆಸ್ಪತ್ರೆಗೆ ಹೋಗಿ ವಿಚಾರಿಸಿದಾಗ ಆಸ್ಪತ್ರೆ ಸಿಬ್ಬಂದಿ ಸರಿಯಾಗಿ ಉತ್ತರಿಸಿಲ್ಲ.

ಈ ವೇಳೆ, ಸಿಸಿಟಿವಿ ಪರಿಶೀಲನೆ ಮಾಡಿದಾಗ ನರ್ಸ್ ಒಬ್ಬರು ಸರವನ್ನು ಯಾರಿಗೂ ಗೊತ್ತಾಗದಂತೆ ಹಿಡಿದುಕೊಂಡು ಹೋಗುತ್ತಿರುವುದು ಅನುಮಾನ ಹುಟ್ಟು ಹಾಕಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ; ಕೆ.ಆರ್ ಪುರದಲ್ಲಿ 15 ದಿನಕ್ಕೊಮ್ಮೆ ಕಾವೇರಿ ನೀರು

ಸಿಸಿಟಿವಿ ದೃಶ್ಯಗಳೊಂದಿಗೆ ಗೋವಿಂದರಾಜ್ ನಗರ ಪೊಲೀಸ್ ಠಾಣೆಗೆ ಮಹಿಳೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಮಾಂಗಲ್ಯ ಸರದ ಕಳ್ಳತನದ ಹಿಂದೆ ಆಸ್ಪತ್ರೆ ಸಿಬ್ಬಂದಿ ಕೈವಾಡ ಇರುವ ಬಗ್ಗೆ ಮಹಿಳೆ ಶಂಕೆ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...