ಬೆಂಗಳೂರು | ಮೇ 24ರಿಂದ ಲಾಲ್‌ಬಾಗ್‌ನಲ್ಲಿ ‘ಮಾವು-ಹಲಸು ಮೇಳ’

Date:

ರಾಜ್ಯ ರಾಜಧಾನಿ ಬೆಂಗಳೂರಿನ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಮೇ 24ರಿಂದ ಜೂನ್ 10ರವರೆಗೂ ಮಾವು ಮತ್ತು ಹಲಸಿನ ಮೇಳ ನಡೆಯಲಿದೆ. ಮೇಳ ಮಾಡುವುದಕ್ಕೆ ಮಾವು ಅಭಿವೃದ್ಧಿ ನಿಗಮ ಹಾಗೂ ಲಾಲ್‌ಬಾಗ್ ತೋಟಗಾರಿಕೆ ಇಲಾಖೆ ನಿರ್ಧರಿಸಿದೆ.

ಮೇಳದಲ್ಲಿ ಸುಮಾರು 60 ಮಳಿಗೆಗಳು ಇರಲಿವೆ. ಕೊಪ್ಪಳದ ಕೇಸರ್, ಚಿತ್ರದುರ್ಗ ಮತ್ತು ತುಮಕೂರಿನ ಬಾದಾಮಿ, ರಸಪುರಿ, ಬೆನಿಶಾ, ಮಲಗೋವಾ, ಇಮಾಮ್ಪಸಂದ್ನಂತಹ ಪ್ರಸಿದ್ಧ ತಳಿಗಳೂ ಸೇರಿದಂತೆ ಸೇಂಧೂರ, ನೀಲಂ, ಮಲ್ಲಿಕಾ, ಆಮ್ರಪಾಲಿ, ಬಂಗನಪಲ್ಲಿ, ತೋತಾಪುರಿ, ಸಕ್ಕರೆಗುತ್ತಿ ತಳಿಯ ಹಣ್ಣುಗಳು ಇರಲಿವೆ.‌

ಮಾವಿನ ಮೇಳಕ್ಕೆ ಕೋಲಾರ, ಶ್ರೀನಿವಾಸಪುರ, ಚಿಂತಾಮಣಿ, ಬೆಂಗಳೂರು ಗ್ರಾಮಾಂತರ, ಹಾವೇರಿ, ಧಾರವಾಡ ಸೇರಿದಂತೆ ನಾನಾ ಜಿಲ್ಲೆಗಳ ಮಾವು ಬೆಳೆಗಾರರು ಮೇಳದಲ್ಲಿ ಭಾಗವಹಿಸಲಿದ್ದಾರೆ. ಮೇಳದಲ್ಲಿ ವಾಣಿಜ್ಯ, ಪಾರಂಪರಿಕ ಮಾವಿನ ತಳಿಗಳ ಜತೆಗೆ ಉಪ್ಪಿನಕಾಯಿಗೆ ಬಳಸುವ ಆಮ್ಲೆಟ್‌, ಮಿಡಿ ಮಾವು ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಇರಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಣ್ಣುಗಳ ರಾಜ ಮಾವಿನ ಹಣ್ಣು ಮಾರುಕಟ್ಟೆಗಳಲ್ಲಿ ಸದ್ಯ ದುಬಾರಿಯಾಗಿದೆ. ನೀರಿಲ್ಲದೇ, ಬಿಸಿಲಿನ ಝಳಕ್ಕೆ ಬಾರಿ ಮಾವಿನ ಇಳುವರಿ ಕುಂಠಿತಗೊಂಡಿದೆ. ಹೀಗಾಗಿ, ದರ ಕೂಡ ದುಬಾರಿಯಾಗಿದೆ. ಆದರೂ ಬೆಂಗಳೂರಿನ ಜನ ಖರೀದಿಸುತ್ತಿದ್ದಾರೆ. ಪ್ರತಿವರ್ಷ ಮಾವಿನ ಸೀಸನ್ನಲ್ಲಿ ರಾಜ್ಯದಲ್ಲಿ ಸುಮಾರು 15 ಲಕ್ಷ ಟನ್ಮಾವು ಉತ್ಪಾದನೆಯಾಗಬೇಕಿತ್ತು. ಆದರೆ, ಮಳೆಯಿಲ್ಲದ ಪರಿಣಾಮ ಹಾಗೂ ಅಧಿಕ ತಾಪಮಾನದಿಂದಾಗಿ ಕೇವಲ 4-5 ಲಕ್ಷ ಟನ್ನಷ್ಟು ಮಾವಿನ ಫಸಲು ಕಡಿಮೆ ಬಂದಿದೆ. ಹೀಗಾಗಿ, ಬಾರಿ ಮೇಳದಲ್ಲಿ ದರ ಕೊಂಚ ಹೆಚ್ಚು ಇರಲಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿಡಿಯೋ ಕಾಲ್ ಮಾಡಿ ಪತ್ನಿಗೆ ಹೆದರಿಸಲು ಹೋಗಿ ಪತಿ ಸಾವು

ಪ್ರತಿ ವರ್ಷದಂತೆ ವರ್ಷವೂ ಕೂಡ ನಗರದ ಲಾಲ್ಬಾಗ್ನಲ್ಲಿ ಮಾವಿನ ಮೇಳ ನಡೆಯಲಿದ್ದು, ಈಗಾಗಲೇ ಭರ್ಜರಿ ಸಿದ್ಧತೆ ಆರಂಭಗೊಂಡಿದೆ. ಲಾಲ್ಬಾಗ್ ಮಾವು ಮತ್ತು ಹಲಸಿನ ಮೇಳದಲ್ಲಿ ಜಿಕೆವಿಕೆ, ಐಐಎಚ್ಆರ್ ಸೇರಿದಂತೆ ಇತರ ಸಂಸ್ಥೆಗಳು ಅಭಿವೃದ್ಧಿಪಡಿಸಿದ ಹಲಸಿನ ತಳಿಗಳು, ರೈತರು ಬೆಳೆದ ನಾನಾ ತಳಿಯ ಹಲಸಿನ ಹಣ್ಣನ್ನು ಮಾರಾಟ ಮಾಡಲಾಗುತ್ತದೆ.

ಮಾವು ಬೆಳೆಯುವ ಪ್ರಮುಖ ಜಿಲ್ಲೆಗಳಾದ ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ರೈತರು ರಸಪುರಿ ಮತ್ತು ತೋತಾಪುರಿಯಂತಹ ತಳಿಯ ಹಣ್ಣುಗಳನ್ನು ಮೇಳಕ್ಕೆ ತರಲಿದ್ದಾರೆಎಂದು ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಅಧ್ಯಕ್ಷ ಸಿ.ಜಿ.ನಾಗರಾಜ್ ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...