ಬೆಂಗಳೂರು | ಇನ್ನುಮುಂದೆ ಚರ್ಚ್ ಸ್ಟ್ರೀಟ್‌ನಲ್ಲಿ ಚಲನಚಿತ್ರ ಚಿತ್ರೀಕರಣ ನಿರ್ಬಂಧ

Date:

ಸದಾ ಜನರಿಂದ ತುಂಬಿರುವ ರಾಜಧಾನಿ ಬೆಂಗಳೂರಿನ ಪ್ರಮುಖ ಸ್ಥಳವಾದ ಚರ್ಚ್ ಸ್ಟ್ರೀಟ್‌ನಲ್ಲಿ ಇನ್ನುಮುಂದೆ ಚಲನಚಿತ್ರ ಚಿತ್ರೀಕರಣ ಮಾಡುವಂತಿಲ್ಲ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತಿಳಿಸಿದೆ.

ವಿಶೇಷವಾಗಿ ವಾರಾಂತ್ಯದಲ್ಲಿ ಪಾರ್ಟಿಗೆ ಹೋಗುವವರಿಗೆ ಮತ್ತು ಖರೀದಿದಾರರಿಗೆ ಚರ್ಚ್‌ಸ್ಟ್ರೀಟ್ ಬೆಂಗಳೂರಿನ ಪ್ರಮುಖ ಆಕರ್ಷಣೆಯಾಗಿದೆ. ಚರ್ಚ್‌ಸ್ಟ್ರೀಟ್‌ನಲ್ಲಿ ಚಿತ್ರೀಕರಣ ಮಾಡುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತದೆ. ಅಲ್ಲದೇ, ಜನನಿಬಿಡ ಪ್ರದೇಶವಾದ ಇಲ್ಲಿ ಚಿತ್ರೀಕರಣ ನಡೆಸುವುದರಿಂದ ಇನ್ನು ಹೆಚ್ಚಿನ ಜನದಟ್ಟಣೆ ಉಂಟಾಗುತ್ತದೆ ಎಂದು ಕಾರಣ ನೀಡಿ ಪಾಲಿಕೆ ಈ ಆದೇಶ ಹೊರಡಿಸಿದೆ.

ಕಳೆದ ಭಾನುವಾರ ಚರ್ಚ್‌ಸ್ಟ್ರೀಟ್​​​ನಲ್ಲಿ ಮಲಯಾಳಂ ಸಿನಿಮಾ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ, ಸಂಚಾರ ದಟ್ಟಣೆ ಉಂಟಾಗಿತ್ತು. ಇದನ್ನು ಗಮನಿಸಿದ ಬಿಬಿಎಂಪಿ ಅಧಿಕಾರಿಗಳು ಚರ್ಚ್‌ಸ್ಟ್ರೀಟ್‌ನಲ್ಲಿ ಸಿನಿಮಾ ಚಿತ್ರೀಕರಣ ಮಾಡುವಂತಿಲ್ಲ ಎಂದು ಈ ಆದೇಶ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲದೇ, ಈ ಸ್ಥಳದಲ್ಲಿ ಸೂಕ್ತ ಅನುಮತಿ ಪಡೆಯದೆ ಸಿನಿಮಾ ಚಿತ್ರೀಕರಣ ನಡೆಸಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಆದರೆ, ಚಿತ್ರತಂಡ ಪೊಲೀಸರಿಂದ ಅನುಮತಿ ಪಡೆದಿದ್ದೇವೆ ಎಂದು ಹೇಳಿತ್ತು.

ಆದರೆ, ಪೊಲೀಸರು ಶೂಟಿಂಗ್‌ಗೆ ಅನುಮತಿ ನೀಡಿಲ್ಲ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಅನುಮತಿ ಪಡೆದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಆದರೆ, ಈ ಬಗ್ಗೆ ಕೆಎಫ್‌ಸಿಸಿ ಕೂಡ ಸ್ಪಷ್ಟನೆ ನೀಡಿದ್ದು, ಯಾವುದೇ ಅನುಮತಿ ನೀಡಿಲ್ಲ ಎಂದು ಹೇಳಲಾಗಿದೆ.

ಪಾದಚಾರಿ ಮಾರ್ಗದಲ್ಲಿ ಶೂಟಿಂಗ್ ನಡೆಯುತ್ತಿದ್ದು, ನೂರಾರು ಮಂದಿ ಶೂಟಿಂಗ್ ನೋಡಲು ನಿಂತಿದ್ದರು. ಇದರಿಂದಾಗಿ ಸಂಚಾರ ದಟ್ಟಣೆ ಉಂಟಾಗಿತ್ತು.

“ಚರ್ಚಸ್ಟ್ರೀಟ್‌ನಲ್ಲಿ ಸಿನಿಮಾ ಶೂಟಿಂಗ್‌ ನಡೆಸಲು ನಾವು ಅನುಮತಿ ನೀಡಿಲ್ಲ. ಬಹುತೇಕ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಅನುಮತಿ ಪಡೆದಿರಬಹುದು” ಎಂದು ಕೇಂದ್ರೀಯ ಡಿಸಿಪಿ ಶೇಖರ್ ಎಚ್.ತೆಕ್ಕನವರ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಾತೃಭಾಷೆ ಕಡ್ಡಾಯವಾಗಬೇಕೆಂಬ ಕುವೆಂಪು ಅವರ ಅಭಿಪ್ರಾಯಕ್ಕೆ ನನ್ನ ಸಹಮತವಿದೆ: ನ್ಯಾ. ಎನ್‌ ವಿ ಅಂಜಾರಿಯ

”ಚರ್ಚ್‌ಸ್ಟ್ರೀಟ್‌ನಲ್ಲಿ ಸಿನಿಮಾ ಶೂಟಿಂಗ್ ನಡೆಸಲು ಅನುಮತಿ ನೀಡುವುದಕ್ಕೆ ನಮಗೆ ಯಾವುದೇ ಅಧಿಕಾರವಿಲ್ಲ” ಎಂದು ಕೆಎಫ್‌ಸಿಸಿ ಅಧ್ಯಕ್ಷ ಎನ್.ಎಂ.ಸುರೇಶ್ ಸ್ಪಷ್ಟಪಡಿಸಿದರು.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಾತನಾಡಿ, ”ಚರ್ಚ್ ಸ್ಟ್ರೀಟ್‌ನಲ್ಲಿ ಚಲನಚಿತ್ರಗಳ ಚಿತ್ರೀಕರಣವನ್ನು ನಿರ್ಬಂಧಿಸಲಾಗಿದೆ. ಅದೊಂದು ಜನನಿಬಿಡ ರಸ್ತೆ. ಸಿನಿಮಾ ಚಿತ್ರೀಕರಣ ಸಂಚಾರಕ್ಕೆ ಅಡ್ಡಿಯಾಗಲಿದೆ. ಚಿತ್ರೀಕರಣಕ್ಕೆ ಪೊಲೀಸರು ಅಥವಾ ಕೆಎಫ್‌ಸಿಸಿ ಅನುಮತಿ ನೀಡಲು ಸಾಧ್ಯವಿಲ್ಲ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...