ಬೆಂಗಳೂರು | ರೋಬೋಟಿಕ್ ತಂತ್ರಜ್ಞಾನದ ಮೂಲಕ ಜಲಮಂಡಳಿ ಕೊಳವೆ ಬಾವಿಗಳ ನಿರ್ವಹಣೆಗೆ ಸೂಚನೆ: ಜಲಮಂಡಳಿ ಅಧ್ಯಕ್ಷ

Date:

  • ಯುದ್ದೋಪಾದಿಯಲ್ಲಿ ಕೊಳವೆ ಬಾವಿಗಳ ದುರಸ್ತಿ ಕಾರ್ಯ ಮುಗಿಸಿಸಲು ಸೂಚನೆ
  • ಬತ್ತಿಹೋಗಿರುವ ಕೊಳವೆ ಬಾವಿಗಳನ್ನು ಸಾಮೂಹಿಕ ಮಳೆ ನೀರು ಮರುಪುರಣಕ್ಕೆ ಬಳಸಲು ಸೂಚನೆ

“ಜಲಮಂಡಳಿಯ ಕೊಳವೆ ಬಾವಿಗಳ ಸಮರ್ಪಕ ನಿರ್ವಹಣೆಗಾಗಿ ಆಧುನಿಕ ರೋಬೋಟಿಕ್‌ ತಂತ್ರಜ್ಞಾನ ಅಳವಡಿಸಿಕೊಳ್ಳಿ” ಎಂದು  ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್‌ ಪ್ರಸಾತ್‌ ಮನೋಹರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಾರ್ಚ್‌ 19ರಂದು ಜಲಮಂಡಳಿಯ ಕೇಂದ್ರ ಕಚೇರಿಯಲ್ಲಿ ಬೆಂಗಳೂರು ಕೊಳವೆಬಾವಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಜತೆಗೆ ಸಭೆ ನಡೆಸಿ ಸಮಗ್ರ ಮಾಹಿತಿಯನ್ನು ಪಡೆದುಕೊಂಡರು.

ಮುಂದುವರೆದು ಮಾತನಾಡಿದ ಅವರು, “ನಗರದಲ್ಲಿ ಜಲಮಂಡಳಿಯ 11 ಸಾವಿರಕ್ಕೂ ಹೆಚ್ಚು ಕೊಳವೆ ಬಾವಿಗಳಿವೆ. ಇವುಗಳಲ್ಲಿ ಹಲವು ಕೊಳವೆ ಬಾವಿಗಳು ಸಮರ್ಪಕ ನಿರ್ವಹಣೆ ಇಲ್ಲದೆ ಬತ್ತಿ ಹೋಗಿವೆ. ಕೆಲವು ತಾಂತ್ರಿಕ ಕಾರಣದಿಂದಾಗಿ ಬಳಸಲಾಗುತ್ತಿಲ್ಲ. ಅಸಮರ್ಪಕ ನಿರ್ವಹಣೆಯೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಕೊಳವೆ ಬಾವಿಯ ಪಂಪ್‌ ಸೆಟ್‌ಗಳನ್ನ ಹೆಚ್ಚಿನ ಸಮಯ ಬಳಸುವುದು. ನೀರು ಇಲ್ಲದೇ ಮೋಟಾರ್‌ ಓಡಿಸುವುದರಿಂದ ಬಹಳಷ್ಟು ತಾಂತ್ರಿಕ ಸಮಸ್ಯೆ ಆಗುತ್ತಿದೆ. ಇವುಗಳನ್ನ ಸರಿಯಾದ ಸಮಯದಲ್ಲಿ ರಿಪೇರಿ ಮಾಡುವುದು ಸಾಧ್ಯವಾಗುತ್ತಿಲ್ಲ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಆಧುನಿಕ ರೋಬೋಟಿಕ್‌ ತಂತ್ರಜ್ಞಾನ ಬಳಸಬೇಕು” ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್‌ ಪ್ರಸಾತ್‌ ಮನೋಹರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಆಧುನಿಕ ತಂತ್ರಜ್ಞಾನದಿಂದ ಪಂಪ್‌ಸೆಟ್‌ಗಳ ಮಾಹಿತಿ, ನೀರಿನ ಹರಿವಿನ ಮಾಹಿತಿ, ದುರಸ್ಥಿಯ ಮಾಹಿತಿ ಸೇರಿದಂತೆ ಆಟೋಮ್ಯಾಟಿಕ್‌ ಆಗಿ ಸ್ವಿಚ್‌ ಆನ್‌ ಮತ್ತು ಸ್ವಿಚ್‌ ಆಫ್‌ ಮಾಡುವುದು ಸಾಧ್ಯವಾಗುತ್ತದೆ. ಜಲಮಂಡಳಿಗೆ ಮಾಹಿತಿ ದೊರೆಯುವುದಲ್ಲದೇ ನೀರಿಲ್ಲದೇ ಇದ್ದಾಗ ಮೋಟಾರ್‌ ಸ್ವಯಂ ಚಾಲಿತವಾಗಿ ಆಫ್‌ ಆಗುವಂತೆಯೂ ಮಾಡಬಹುದಾಗಿದೆ. ಇದರಿಂದ ಆಗಾಗ್ಗೆ ದುರಸ್ಥಿಗೆ ಬರುವುದು ತಪ್ಪುವುದಲ್ಲದೇ ಸಾರ್ವಜನಿಕರಿಗೂ ತೊಂದರೆ ಆಗುವುದು ಕಡಿಮೆಯಾಗುತ್ತದೆ” ಎಂದು ಹೇಳಿದರು.

“‍ಅಂತರ್ಜಲ ಕುಸಿತ ಆಗಿರುವುದರಿಂದ ಕೊಳವೆ ಬಾವಿಗಳಲ್ಲಿ ನೀರು ಕುಸಿಯುತ್ತಿದೆ. ಈ ಕೊಳವೆ ಬಾವಿಗಳನ್ನು ಸುಸ್ಥಿತಿಗೆ ತರುವ ನಿಟ್ಟಿನಲ್ಲಿ ಆಗಬೇಕಾದ ಕಾರ್ಯಗಳು, ಅವುಗಳಲ್ಲಿನ ನೀರಿನ ಲಭ್ಯತೆ, ರಿಪೇರಿಗಳ ಬಗ್ಗೆ ಮಾಹಿತಿ ಸಂಗ್ರಹಿಸುವುದು ಅಗತ್ಯವಿದೆ. ಇದಕ್ಕಾಗಿ ನಗರದಲ್ಲಿ ಇರುವಂತಹ ಜಲಮಂಡಳಿಯ ಕೊಳವೆ ಬಾವಿಗಳ ಸಮೀಕ್ಷೆ ಮಾಡುವುದು ಅಗತ್ಯವಿದೆ. ಇದಕ್ಕಾಗಿ ಜಲಮಂಡಳಿಯ ಪರವಾನಗಿ ಹೊಂದಿರುವ ಬೆಂಗಳೂರು ಕೊಳವೆ ಬಾವಿ ಗುತ್ತಿಗೆದಾರ ಸಂಘದವರು ಅಧಿಕಾರಿಗಳೊಂದಿಗೆ ಜಂಟಿಯಾಗಿ ತಮ್ಮ ವ್ಯಾಪ್ತಿಯಲ್ಲಿ ಇರುವ ಕೊಳವೆ ಬಾವಿಗಳ ಮಾಹಿತಿಯನ್ನು ಕ್ರೋಢೀಕರಿಸಿ ನೀಡಬೇಕು” ಎಂದು ಸೂಚನೆ ನೀಡಿದರು.

ಯುದ್ದೋಪಾದಿಯಲ್ಲಿ ಕೊಳವೆ ಬಾವಿಗಳ ರಿಪೇರಿ ಮಾಡಿ

ರಿವೈಂಡಿಗ್‌ ಸೇರಿದಂತೆ ಸಣ್ಣ ಪುಟ್ಟ ತಾಂತ್ರಿಕ ಸಮಸ್ಯೆಯಿಂದ ಸ್ಥಬ್ದವಾಗಿರುವ ಕೊಳವೆ ಬಾವಿಗಳನ್ನು ರಿಪೇರಿ ಮಾಡಿ ಅದನ್ನು ಸುಸ್ಥಿತಿಗೆ ತರುವುದು ಮೊದಲ ಆದ್ಯತೆ ಆಗಬೇಕಾಗಿದೆ. ಇದಕ್ಕೆ ಇರುವ ಕೆಲವು ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಹರಿಸುವಂತೆ ಗುತ್ತಿಗೆದಾರರು ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಲಮಂಡಳಿ ಆಯುಕ್ತರು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬೆಳ್ಳಂದೂರಿನ ಪ್ರಕ್ರಿಯಾ ಶಾಲಾ ಆವರಣದಲ್ಲಿ ಸ್ಫೋಟಕಗಳು ಪತ್ತೆ; ಆತಂಕ ಸೃಷ್ಟಿ

ಬತ್ತಿಹೋಗಿರುವ ಕೊಳವೆ ಬಾವಿಗಳನ್ನ ಸಾಮೂಹಿಕ ಮಳೆ ನೀರು ಮರುಪುರಣಕ್ಕೆ ಬಳಸಲು ಸೂಚನೆ

ನಗರದಲ್ಲಿ ಬೀಳುವ ಮಳೆಯನ್ನು ಸರಿಯಾದ ರೀತಿಯಲ್ಲಿ ಮರುಪೂರಣ ಆಗುವಂತೆ ಮಾಡುವ ನಿಟ್ಟಿನಲ್ಲಿ ಬತ್ತಿ ಹೋಗಿರುವ ಕೊಳವೆ ಬಾವಿಗಳನ್ನು ಉಪಯೋಗಿಸಬಹುದಾಗಿದೆ. ಬತ್ತಿ ಹೋಗಿರುವ ಹಾಗೂ ಅವುಗಳನ್ನು ಮತ್ತೆ ಸರಿಪಡಿಸಲು ಸಾಧ್ಯ ಆಗದೆ ಇರುವ ಕೊಳವೆ ಬಾವಿಗಳನ್ನು ಮಳೆ ನೀರು ಇಂಗು ಗುಂಡಿ ಆಗಿ ಬಳಸಲು, ಅದಕ್ಕೆ ಅಕ್ಕಪಕ್ಕದ ಮನೆಗಳಿಂದ ಮಳೆ ನೀರು ಕೊಯ್ಲು ವ್ಯವಸ್ಥೆ ಅಳವಡಿಸಲು ಅಗತ್ಯ ಯೋಜನೆ ರೂಪಿಸುವಂತೆ ಅಧ್ಯಕ್ಷರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಮಂಡಳಿಯ ಎಂಜನಿಯರ್ ಇನ್ ಚೀಫ್ ಸುರೇಶ, ಚೀಪ್ ಎಂಜನಿಯರ್ ಜಯಪ್ರಕಾಶ, ಬೆಂಗಳೂರು ಕೊಳವೆಬಾವಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಯಣ್ಣ ಸೇರಿದಂತೆ ಇನ್ನಿತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...