ಬೆಂಗಳೂರು | ಮಾರ್ಚ್‌ 10ರ ಭಾನುವಾರ ಬೆಳಗ್ಗೆ 6 ಗಂಟೆಗೇ ಆರಂಭ ನಮ್ಮ ಮೆಟ್ರೋ

Date:

“ಮಾರ್ಚ್‌ 10ರಂದು ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ಬೆಳಗ್ಗೆ 7ರ ಬದಲಾಗಿ 6 ಗಂಟೆಗೆ ಪ್ರಾರಂಭಿಸಲಾಗುವುದು” ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ತಿಳಿಸಿದೆ.

“ಕರ್ನಾಟಕ ಪೊಲೀಸ್ ವತಿಯಿಂದ ರಾಜ್ಯ ಮಟ್ಟದ 10 ಕಿಲೋ ಮೀಟರ್ ಮತ್ತು 5 ಕಿ.ಮೀ ಓಟದ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಸುಗಮವಾಗಿ ಭಾಗವಹಿಸಲು ಬಿಎಂಆರ್‌ಸಿಎಲ್ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ಎಲ್ಲ ನಾಲ್ಕು ಟರ್ಮಿನಲ್‌ಗಳಿಂದ ಮಾರ್ಚ್ 10 (ಭಾನುವಾರ)ರಂದು ಬೆಳಗ್ಗೆ 7ರ ಬದಲಾಗಿ 6 ಗಂಟೆಗೆ ಪ್ರಾರಂಭಿಸಲಿದೆ” ಎಂದು ಪ್ರಕಟಣೆ ಮೂಲಕ ಮಾಹಿತಿ ನೀಡಿದೆ.

ರಾಜ್ಯ ಮಟ್ಟದ 10 ಕಿ.ಮೀ ಮತ್ತು 5 ಕಿ.ಮೀ ಓಟದ ಸ್ಪರ್ಧೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯ ಪೊಲೀಸ್ ಇಲಾಖೆಯ ಸುವರ್ಣ ಮಹೋತ್ಸವದ ಅಂಗವಾಗಿ ಭಾರತೀಯ ಸ್ಟೇಟ್ ಬ್ಯಾಂಕ್ ಸಹಯೋಗದಲ್ಲಿ ಮಾ.10೦ರಂದು 5 ಹಾಗೂ 10 ಕಿ.ಮೀ ಓಟದ ಸ್ಪರ್ಧೆ ಆಯೋಜಿಸಿದೆ.

ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಸೋಮವಾರ ಸುವರ್ಣ ಮಹೋತ್ಸವದ ಲೋಗೋ ಮತ್ತು ಟೀ ಶರ್ಟ್ ಅನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಬಿಡುಗಡೆಗೊಳಿಸಿ ಮಾತನಾಡಿದರು, “ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾ ಮಟ್ಟದಲ್ಲಿ ಫಿಟ್‌ನೆಸ್ ಫಾರ್ ಆಲ್ ಎಂಬ ಶೀರ್ಷಿಕೆಯಡಿ ಈ ಓಟದ ಸ್ಪರ್ಧೆ ಏರ್ಪಡಿಸಲಾಗಿದೆ. ಈ ಓಟದ ಮುಖಾಂತರ ಮಾದಕ ವಸ್ತು ಮುಕ್ತ ಕರ್ನಾಟಕ, ಸೈಬರ್ ಕ್ರೈಂ ಮತ್ತು ಹಸಿರು ಬೆಂಗಳೂರು ಎಂಬ ನಾಲ್ಕು ಮಾದರಿಯಲ್ಲಿ ಜಾಗೃತಿ ಮೂಡಿಸಲಾಗುವುದು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕುಡಿಯುವ ನೀರಿನ ಸಮಸ್ಯೆಯಿಂದ ತತ್ತರ: ಶೌಚಕ್ಕೂ ನೀರಿಲ್ಲದೆ ಮಾಲ್‌ ಕಡೆ ಮುಖ ಮಾಡಿದ ಜನ

ಬಹುಮಾನ

“ಮಾ.10 ರಂದು ವಿಧಾನಸೌಧದ ಎದುರು ಓಟ ಪ್ರಾರಂಭವಾಗಲಿದ್ದು, ಕಬ್ಬನ್‌ಪಾರ್ಕ್ ಮುಖಾಂತರ ಸಾಗಿ ವಿಧಾನಸೌಧದ ಎದುರೇ ಮುಕ್ತಾಯಗೊಳ್ಳಲಿದೆ. ಪೊಲೀಸ್, ಪಬ್ಲಿಕ್ ಹಾಗೂ ಎಸ್‌ಬಿಐ ಎಂಬ ಮೂರು ವಿಭಾಗಗಳಲ್ಲಿ 5 ಕಿ.ಮೀ. ಮತ್ತು 10 ಕಿ.ಮೀ. ಓಟ ನಡೆಯಲಿದೆ. ಪ್ರಥಮ ಬಹುಮಾನ ₹1 ಲಕ್ಷ ಮತ್ತು 5 ಕಿ.ಮೀ. ಓಟದಲ್ಲಿ ಪ್ರಥಮ ಬಹುಮಾನ ₹40 ಸಾವಿರ ನೀಡಲಾಗುತ್ತದೆ. ಮೂರು ವಿಭಾಗಗಳಲ್ಲಿ ಪುರುಷರು ಮತ್ತು ಮಹಿಳಾ ವಿಜೇತರಿಗೆ ಪ್ರತ್ಯೇಕವಾಗಿ ನಗದು ಬಹುಮಾನ ನೀಡಲಾಗುತ್ತದೆ. ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೂ ಪ್ರತ್ಯೇಕವಾಗಿ ಬಹುಮಾನ ನೀಡಲಾಗುವುದು” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...