ಬೆಂಗಳೂರು | ಯುವಕನ ಮೇಲೆ ಗುಂಡಿನ ದಾಳಿ ; ನಿವೃತ್ತ ಮಿಲಿಟರಿ ಅಧಿಕಾರಿ ಬಂಧನ

Date:

ಮದ್ಯಪಾನ ಸೇವಿಸಿ ವ್ಯಕ್ತಿಯೊಬ್ಬ ಪರಿಚಿತರ ಮನೆಗೆ ತೆರಳಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಯುವಕನ ಮೇಲೆ ಗುಂಡಿನ ದಾಳಿ ಮಾಡಿರುವ ಘಟನೆ ಬೆಂಗಳೂರಿನ ಗಂಗಮ್ಮನ ಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸೋಮವಾರ ತಡರಾತ್ರಿ 12 ಗಂಟೆಗೆ ಈ ಘಟನೆ ನಡೆದಿದೆ. ಪರಶುರಾಮ್ಎಂಬಾತ ಸೂರಜ್​​ ಎಂಬ ಯುವಕನ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಅದೃಷ್ಟವಶಾತ್ಯಾವುದೇ ಅಪಾಯ ಸಂಭವಿಸಿಲ್ಲ. ಸದ್ಯ ಆರೋಪಿ ಪರಶುರಾಮ್ ಅವರನ್ನು ಗಂಗಮ್ಮನ ಗುಡಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಪರಶುರಾಮ್ ಮಿಲಿಟರಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತನಾಗಿದ್ದನು. ಈತ ತನ್ನ ಬಳಿ ಪರವಾನಗಿ ಹೊಂದಿರುವ ಗನ್ಇಟ್ಟುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೋಮವಾರ ಮಧ್ಯರಾತ್ರಿ ಏಕಾಏಕಿ ಪರಿಚಿತರ ಮನೆಗೆ ತೆರಳಿ ಕುಡಿದ ಮತ್ತಿನಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಲು ಆರಂಭಿಸಿದ್ದಾರೆ. ಈ ವೇಳೆ, ಮನೆಗೆ ಪ್ರವೇಶ ಮಾಡಲು ಹೊರಟ ಆರೋಪಿಯನ್ನು ಸೂರಜ್ ತಡೆದಿದ್ದಾನೆ. ಈ ವೇಳೆ ಇಬ್ಬರ ನಡುವೆ ಜಗಳ ಆರಂಭವಾಗಿದೆ.

ಕೋಪಗೊಂಡ ಪರಶುರಾಮ್ ತನ್ನ ಬಳಿ ಇದ್ದ ಗನ್ ತೆಗೆದು ಸೂರಜ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಅದೃಷ್ಟವಶಾತ್ ಗುಂಡು ಗೋಡೆಗೆ ತಾಕಿದ್ದು, ಯುವಕ ಸೂರಜ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಕ್ಕಳ ನಾಪತ್ತೆ ಪ್ರಕರಣ ಶೇ.34 ರಷ್ಟು ಏರಿಕೆ

ಗುಂಡಿನ ಸದ್ದು ಕೇಳಿ ಅಕ್ಕಪಕ್ಕದ ಮನೆಯವರೆಲ್ಲ ಓಡಿ ಬಂದು, ಆರೋಪಿ ಪರಶುರಾಮ್ನನ್ನು ಹಿಡಿದಿದ್ದಾರೆ. ಬಳಿಕ ಸೂರಜ್ಹಾಗೂ ಆತನ ತಂದೆ ಆರೋಪಿಯನ್ನು ಹಿಡಿದು ಅವರ ಬಳಿ ಇದ್ದ ಗನ್ಅನ್ನು ವಶಪಡಿಸಿಕೊಂಡು ಪೊಲೀಸ್ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ಗಂಗಮ್ಮನ ಗುಡಿ ಠಾಣೆಯ ಪೊಲೀಸರು ಪರಶುರಾಮ್‌ನನ್ನು ಬಂಧಿಸಿದ್ದಾರೆ. ಈ ಬಗ್ಗೆ ಗಂಗಮ್ಮನ ಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...