ಬೆಂಗಳೂರು | ಮಹಿಳೆಗೆ ಬೆದರಿಸಿ ಹಣ ಸುಲಿಗೆ; ನಾಲ್ವರು ಪೊಲೀಸರ ಅಮಾನತು

Date:

ಇತ್ತೀಚಿಗೆ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿರುವುದಾಗಿ ಬೆದರಿಸಿ ಮಹಿಳೆಯೊಬ್ಬರಿಂದ ₹8,000 ಹಣ ಸುಲಿಗೆ ಮಾಡಿದ ಆರೋಪದ ಮೇರೆಗೆ ಜೀವನ್ ಭೀಮಾ (ಜೆಬಿ) ನಗರ ಸಂಚಾರ ಠಾಣೆಯ ಇನ್ಸ್ಪೆಕ್ಟರ್ ಸೇರಿದಂತೆ ನಾಲ್ವರನ್ನು ಅಮಾನತು ಮಾಡಲಾಗಿದೆ. ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

ಜೀವನ್ ಭೀಮಾ ನಗರ ಸಂಚಾರ ಠಾಣೆ ಇನ್ಸ್ಪೆಕ್ಟರ್ ವೆಂಕಟಾಚಲಪತಿ, ಹೆಡ್ ಕಾನ್ಸ್ಟೇಬಲ್ಗಳಾದ ಗಿರೀಶ್, ಹುಚ್ಚು ಸಾಬ್ ಮತ್ತು ಕಾನ್ಸ್ ಟೇಬಲ್ ಬಸಪ್ಪ ಇವರನ್ನು ಅಮಾನತುಗೊಳಿಸಲಾಗಿದೆ.

ಕಳೆದ ಶನಿವಾರ ಇಸ್ರೋ ಜಂಕ್ಷನ್ಬಳಿ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ವೇಳೆ ಕೃತ್ಯ ನಡೆದಿತ್ತು. ಬಗ್ಗೆ ಆಯುಕ್ತ ದಯಾನಂದ್ ಅವರಿಗೆಎಕ್ಸ್‌’ ತಾಣದಲ್ಲಿ ಸಂತ್ರಸ್ತೆ ತಂದೆ ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಗ್ಗೆ ಇಲಾಖಾ ಮಟ್ಟದ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಪೂರ್ವ ವಿಭಾಗ (ಸಂಚಾರ) ಡಿಸಿಪಿ ಕುಲದೀಪ್ ಆರ್.ಜೈನ್ ರವರಿಗೆ ಆಯುಕ್ತರು ಸೂಚನೆ ನೀಡಿದ್ದರು. ಡಿಸಿಪಿ ನೀಡಿದ ವರದಿ ಮೇರೆಗೆ ಕರ್ತವ್ಯಲೋಪವೆಸಗಿದ ಕಾರಣ ಇನ್ಸ್ಪೆಕ್ಟರ್ಹಾಗೂ ಮೂವರು ಸಿಬ್ಬಂದಿಯನ್ನು ಪೊಲೀಸ್ ಆಯುಕ್ತ ದಯಾನಂದ್ ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಏನಿದು ಘಟನೆ?

ಇಸ್ರೋ ಜಂಕ್ಷನ್‌ನಲ್ಲಿ ಕಳೆದ ಶನಿವಾರ ರಾತ್ರಿಯ ಸಮಯದಲ್ಲಿ ಜೆ.ಬಿ.ನಗರ ಸಂಚಾರ ಠಾಣೆ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಆ ವೇಳೆ ಮಣಿಪಾಲ್ ಆಸ್ಪತ್ರೆ ಕಡೆಯಿಂದ ಬಂದ ಮಹಿಳೆಯೊಬ್ಬರನ್ನು ಅಡ್ಡಗಟ್ಟಿದ ಜೆ.ಬಿ.ನಗರ ಸಂಚಾರ ಠಾಣೆ ಪೊಲೀಸರು ತಪಾಸಣೆ ನಡೆಸಿದ್ದರು.

ಈ ವೇಳೆ, ಆಲ್ಕೋಮೀಟರ್‌ ಮೂಲಕ ಡ್ರಂಕ್ ಅಂಡ್ ಡ್ರೈವ್ ತಪಾಸಣೆಗೊಳಪಡಿಸಿದಾಗ ಮಹಿಳೆ ಮದ್ಯ ಸೇವಿಸದೆ ಇದ್ದರೂ ₹15 ಸಾವಿರ ನೀಡುವಂತೆ ಪೊಲೀಸರು ಬೇಡಿಕೆ ಇಟ್ಟಿದ್ದರು. ಕೊನೆಗೆ ಮಹಿಳೆಯನ್ನು ಬೆದರಿಸಿ ಈ ನಾಲ್ವರು ಸಂಚಾರ ಪೊಲೀಸರು ಮಹಿಳೆಯಿಂದ ₹8,000 ಹಣವನ್ನು ಗೂಗಲ್ ಪೇ ಮೂಲಕ ಪಡೆದು ಆಕೆಯನ್ನು ಪೊಲೀಸರು ಕಳುಹಿಸಿದ್ದರು ಎಂದು ಆರೋಪಿಸಲಾಗಿತ್ತು.

ಬಗ್ಗೆ ಮಹಿಳೆಯ ತಂದೆ ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ, “ಸಂಚಾರ ಪೊಲೀಸರು ನನ್ನ ಮಗಳಿಂದ ಹಣ ಸುಲಿಗೆ ಮಾಡಿದ್ದಾರೆ” ಎಂದು ಪೋಸ್ಟ್ ಮಾಡಿದ್ದರು. ಎಕ್ಸ್‌ನಲ್ಲಿ ಪೊಲೀಸ್ ಆಯುಕ್ತರನ್ನು ಟ್ಯಾಗ್ ಮಾಡಿ ದೂರು ನೀಡಿದ್ದರು. ಹಿನ್ನೆಲೆ, ತನಿಖೆಗೆ ಆದೇಶಿಸಲಾಗಿತ್ತು. ಆನಂತರ ಕುರಿತು ತನಿಖೆ ನಡೆಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಚಿನ್ನಾಭರಣಕ್ಕಾಗಿ ಮಹಿಳೆಯ ಬರ್ಬರ ಕೊಲೆ; ಆರೋಪಿಯ ಬಂಧನ

ಪೂರ್ವ ಸಂಚಾರ ಡಿಸಿಪಿ ಕುಲದೀಪ ಕುಮಾರ್ ಜೈನ್ ಇಲಾಖೆ ಮಟ್ಟದ ತನಿಖೆ ನಡೆಸಿ ಆಯುಕ್ತರಿಗೆ ವರದಿ ಸಲ್ಲಿಸಿದ್ದರು. ಸದ್ಯ ಪೊಲೀಸರು ತಪ್ಪಿತಸ್ಥರು ಎಂದು ಸಾಬೀತಾಗಿದ್ದು, ನಾಲ್ವರನ್ನು ಅಮಾನತು ಮಾಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...