ಬೆಂಗಳೂರು | ನಕಲಿ ದಾಖಲೆ ಸೃಷ್ಟಿಸಿ 15 ಬ್ಯಾಂಕ್‌ಗಳಲ್ಲಿ ಕೋಟ್ಯಾಂತರ ರೂಪಾಯಿ ಸಾಲ ಮಾಡಿದ ದಂಪತಿ

Date:

ನಕಲಿ ದಾಖಲೆ ಸೃಷ್ಟಿ ಮಾಡಿ ದಂಪತಿಯೊಬ್ಬರು ರಾಷ್ಟ್ರೀಕೃತ ಬ್ಯಾಂಕ್‌ಗಳು, ಪ್ರಾದೇಶಿಕ ಸಹಕಾರಿ ಬ್ಯಾಂಕ್‌ಗಳು ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳು ಸೇರಿದಂತೆ ಒಟ್ಟು 15 ಬ್ಯಾಂಕ್‌ಗಳಲ್ಲಿ ಕೋಟ್ಯಾಂತರ ರೂಪಾಯಿ ಸಾಲ ಮಾಡಿ ವಂಚಿಸಿದ್ದಾರೆ.

ಕೆ.ಎಸ್.ನಾಗೇಶ್ ಮತ್ತು ಸುಮಾ.ಬಿ.ಎಸ್ ದಂಪತಿ ಸಾಲ ಮಾಡಿ ಬ್ಯಾಂಕ್‌ಗಳಿಗೆ ವಂಚನೆ ಮಾಡಿದವರು. ದಂಪತಿ ಒಂದೇ ಆಸ್ತಿಯನ್ನು ಅಡವಿಟ್ಟು ಮತ್ತು ಇಲ್ಲದ ಆಸ್ತಿಯ ಬಗ್ಗೆ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿ ಬ್ಯಾಂಕ್​ಗಳಲ್ಲಿ ಕೋಟಿ ಕೋಟಿ ಸಾಲ ಮಾಡಿದ್ದಾರೆ. ಜತೆಗೆ, ಶ್ರೀನಿಧಿ ಮ್ಯಾನುಫ್ಯಾಕ್ಚುರರ್ಸ್ ಮತ್ತು ಶ್ರೀನಿಧಿ ಮಸಾಲಾ ಕಂಪನಿಗಳಿಗೆ ಯಂತ್ರೋಪಕರಣಗಳನ್ನು ಖರೀದಿ ಮಾಡಲು ದಂಪತಿ ಸಾಲ ಪಡೆದಿದ್ದರು.

ಸಾಲ ಮತ್ತು ಬಡ್ಡಿಯನ್ನು ವಸೂಲಿ ಮಾಡಲು 15 ಕ್ಕೂ ಹೆಚ್ಚು ಬ್ಯಾಂಕ್‌ಗಳು ಮತ್ತು ಹಣಕಾಸು ಸಂಸ್ಥೆಗಳು ಬೆಂಗಳೂರು ದಕ್ಷಿಣ ತಾಲ್ಲೂಕಿನ ಬೇಗೂರಿನಲ್ಲಿ ಆಸ್ತಿಯನ್ನು ಜಪ್ತಿ ಮಾಡಲು ಹೋದಾಗ ಈ ವಿಚಾರ ಬೆಳಕಿಗೆ ಬಂದಿದೆ. ಈಗಾಗಲೇ ಅನೇಕ ಹಣಕಾಸು ಸಂಸ್ಥೆಗಳಿಗೆ ಆ ಜಾಗವನ್ನು ಒತ್ತೆ ಇಟ್ಟಿರುವುದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೇಗೂರು ಸಬ್ ರಿಜಿಸ್ಟ್ರಾರ್ ಕಚೇರಿ, ಬಿಬಿಎಂಪಿ ಹಾಗೂ ಬಿಡಿಎಗಳಲ್ಲಿ ದಾಖಲೆಗಳನ್ನು ಪರಿಶೀಲಿಸಿದಾಗ, ಬೇಗೂರಿನಲ್ಲಿ ನಾನಾ ನಂಬರ್‌ಗಳಲ್ಲಿ ತೋರಿಸಿರುವ ಜಮೀನು ಮತ್ತು ಸೈಟ್‌ಗಳ ದಾಖಲೆಗಳು ನಕಲಿ ಎಂದು ತಿಳಿದುಬಂದಿದೆ.

ಯಾವ ಯಾವ ಬ್ಯಾಂಕ್‌ನಲ್ಲಿ ಎಷ್ಟು ಸಾಲ?

ತುಮಕೂರು ಮರ್ಚೆಂಟ್ಸ್ ಕ್ರೆಡಿಟ್ ಕೋ ಆಪರೇಟಿವ್‌ನಿಂದ ₹1.30 ಕೋಟಿ, ತುಮಕೂರು ಧಾನ್ಯ ವ್ಯಾಪಾರಿಗಳ ಸಹಕಾರಿ ಬ್ಯಾಂಕ್‌ನಿಂದ ₹2.09 ಕೋಟಿ, ಕೋಟೇಶ್ವರ ಸಹಕಾರಿ ಬ್ಯಾಂಕ್‌ನಿಂದ ₹1.88 ಕೋಟಿ, ತುಮಕೂರು ವೀರಶೈವ ಸಹಕಾರಿ ಬ್ಯಾಂಕ್​ನಿಂದ ₹1 ಕೋಟಿ ಹಾಗೂ ಸಿಂಡಿಕೇಟ್ ಬ್ಯಾಂಕ್‌ನಿಂದ ₹95 ಲಕ್ಷ ಸಾಲವನ್ನು ದಂಪತಿ ಪಡೆದಿದ್ದರು.

ಈ ಸುದ್ದಿ ಓದಿದ್ದೀರಾ? ಕುಡಿಯುವ ನೀರು ಕೊಡದೆ ಯಾವ ಬ್ರ್ಯಾಂಡ್ ಬೆಂಗಳೂರು ಮಾಡ್ತೀರಾ; ಮೋಹನ್ ದಾಸರಿ ಪ್ರಶ್ನೆ

ಅಲ್ಲದೇ, ಬನಶಂಕರಿ ಸಹಕಾರಿ ಬ್ಯಾಂಕ್, ಬಿಡಿಸಿಸಿ ಬ್ಯಾಂಕ್, ಟಾಟಾ ಕ್ಯಾಪಿಟಲ್, ಕಾರ್ಪೊರೇಷನ್ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್, ಲಕ್ಷ್ಮೀ ವಿಲಾಸ್ ಬ್ಯಾಂಕ್, ಬನಶಂಕರಿ ಮಹಿಳಾ ಸಹಕಾರಿ ಬ್ಯಾಂಕ್, ತುಮಕೂರು ಮರ್ಚೆಂಟ್ಸ್ ಕ್ರೆಡಿಟ್ ಕೋ ಆಪರೇಟಿವ್ ಲಿಮಿಟೆಡ್, ಕೋಟೇಶ್ವರ ಸಹಕಾರಿ ಬ್ಯಾಂಕ್, ನ್ಯಾಷನಲ್ ಸಹಕಾರಿ ಬ್ಯಾಂಕ್, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಮಣಪ್ಪುರಂ ಫೈನಾನ್ಸ್, ಮಹಿಳಾ ಸಹಕಾರಿ ಬ್ಯಾಂಕ್, ಕೆನರಾ ಬ್ಯಾಂಕ್ ಮತ್ತು ಅಲಹಾಬಾದ್ ಬ್ಯಾಂಕ್‌ಗಳಲ್ಲಿ ಸಾಲ ಪಡೆದು ದಂಪತಿ ವಂಚಿಸಿದ್ದಾರೆ ಎಂದು ತಿಳಿದುಬಂದಿದೆ.

ದಂಪತಿ ವಿರುದ್ಧ 2018 ಮತ್ತು 2022ರ ನಡುವೆ ಜಯನಗರ ಪೊಲೀಸ್ ಠಾಣೆಯಲ್ಲಿ ಎರಡು, ವಿ.ವಿ.ಪುರಂ ಪೊಲೀಸ್ ಠಾಣೆಯಲ್ಲಿ ನಾಲ್ಕು, ಪುಟ್ಟೇನಹಳ್ಳಿ ಮತ್ತು ಶೇಷಾದ್ರಿಪುರಂ ಠಾಣೆಗಳಲ್ಲಿ ತಲಾ ಒಂದು ಎಫ್​ಐಆರ್​​ ದಾಖಲಾಗಿವೆ.

ಈ ನ್ಯಾಯಾಲಯಗಳಿಗೆ ಜಯನಗರ ಪೊಲೀಸರು ಸಲ್ಲಿಸಿದ ವರದಿಯ ಪ್ರಕಾರ, ದಂಪತಿ ವಿರುದ್ಧ ಒಟ್ಟು ಎಂಟು ಎಫ್‌ಐಆರ್‌ ದಾಖಲಾಗಿದೆ. ನಿರೀಕ್ಷಣಾ ಜಾಮೀನಿಗಾಗಿ ದಂಪತಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ‘ದಿ ನ್ಯೂ ಇಂಡಿಯನ್ ಎಕ್ಸ್​ಪ್ರೆಸ್’ ವರದಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...