ಬೆಂಗಳೂರು | ಅಪಾರ್ಟ್‌ಮೆಂಟ್‌ನಲ್ಲಿ ಅಡಗಿರುವ ಚಿರತೆ ಸೆರೆಹಿಡಿಯಲು ಬೋನ್ ಇಟ್ಟ ಅರಣ್ಯ ಇಲಾಖೆ ಅಧಿಕಾರಿಗಳು

Date:

ರಾಜ್ಯ ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿರುವ ಬೊಮ್ಮನಹಳ್ಳಿಯ ಕೂಡ್ಲು, ಸಿಂಗಸಂದ್ರ ಬಳಿ ಅ.29ರ ರಾತ್ರಿ ಚಿರತೆ ಪ್ರತ್ಯಕ್ಷವಾಗಿದೆ. ಸದ್ಯ ಚಿರತೆ ಸೆರೆ ಹಿಡಿಯಲು ತಂಡಗಳಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಆದರೆ, ಚಿರತೆಯ ಸುಳಿವು ಪತ್ತೆಯಾಗಿಲ್ಲ. ಹೀಗಾಗಿ, ಬೊಮ್ಮನಹಳ್ಳಿ, ಹೆಚ್‌ಎಸ್‌ಆರ್‌ ಲೇಔಟ್, ಬಿಟಿಎಂ ಲೇಔಟ್​ನ ಜನರಲ್ಲಿ ಚಿರತೆ ಆತಂಕ ಮನೆ ಮಾಡಿದೆ.

ಅಕ್ಟೋಬರ್ 28ರ ಮಧ್ಯರಾತ್ರಿ ಆನೇಕಲ್‌ನಲ್ಲಿರುವ ಅಪಾರ್ಟ್‌ಮೆಂಟ್‌ನ 8 ಅಡಿ ಎತ್ತರದ ಗೋಡೆ ಹಾರಿ ಚಿರತೆ ನುಗ್ಗಿತ್ತು. ಇದರ ಬೆನ್ನಲ್ಲೇ ಬೊಮ್ಮನಹಳ್ಳಿಯ ಕೂಡ್ಲು, ಸಿಂಗಸಂದ್ರ ಬಳಿ ಅ.29ರ ರಾತ್ರಿ ಜನವಸತಿ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಈ ಹಿನ್ನೆಲೆಯಲ್ಲಿ ಜನರು ಹೊರಗಡೆ ಓಡಾಡಲು ಆಗದೇ, ಆತಂಕದಲ್ಲಿಯೇ ದಿನ ಕಳೆಯುವಂತಾಗಿದೆ.

“ಸದ್ಯ ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ವೊಂದರಲ್ಲಿ ಚಿರತೆ ಇರುವ ಕುರುಹು ಸಿಕ್ಕಿದೆ. ಖಾಲಿ ಕಟ್ಟಡದಲ್ಲಿ ಚಿರತೆ ಓಡಾಡಿರುವ ಹೆಜ್ಜೆ ಗುರುತು ಇದೆ. ಜತೆಗೆ 3 ದಿನಗಳ ಹಿಂದೆ ಚಿರತೆ ಮಲ ವಿಸರ್ಜನೆ ಮಾಡಿರುವುದು ಪತ್ತೆಯಾಗಿದೆ. ಚಿರತೆ ಈ ಸ್ಥಳದಲ್ಲಿ ಓಡಾಡಿರುವ ಕಾರಣ ಚಿರತೆಯ ಸೆರೆಗೆ ಅಧಿಕಾರಿಗಳು ಸ್ಥಳದಲ್ಲಿ ಬೋನ್ ಇಟ್ಟಿದ್ದಾರೆ. ಚಿರತೆ ಎಲ್ಲಿದೆ ಎಂಬುದನ್ನು ಡ್ರೋನ್ ಸಹಾಯದಿಂದ ಕಂಡು ಹಿಡಿಯಲು ಪ್ರಯತ್ನಿಸಲಾಗುತ್ತಿದೆ. ಇನ್ನು ಚಿರತೆ ಸೆರೆಗೆ ಆಧುನಿಕ ತಂತ್ರಜ್ಞಾನವನ್ನು ಬಳಸಲಾಗುತ್ತಿದೆ. ಎಇಸಿಎಫ್‌ ಲೇಔಟ್‌ಗೆ ಹೊಂದಿಕೊಂಡಿರುವ ಖಾಲಿ ಜಾಗದಲ್ಲಿ ಎರಡು ಬೋನ್ ಇರಿಸಲಾಗಿದ್ದು, ಅದರಲ್ಲಿ ಜೀವಂತ ಕೋಳಿಗಳನ್ನು ಬಿಡಲಾಗಿದೆ” ಎಂದು ಅರಣ್ಯ ಅಧಿಕಾರಿಗಳು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಲುಲು ಮಾಲ್‌ನಲ್ಲಿ ಯುವತಿ ಜತೆ ಅಶ್ಲೀಲ ವರ್ತನೆ ತೋರಿದ ವ್ಯಕ್ತಿ ವಿರುದ್ಧ ದೂರು ದಾಖಲು

ರಾತ್ರಿ ವೇಳೆ ಜನರು ಒಂಟಿಯಾಗಿ ಓಡಾಡದಂತೆ ಅರಣ್ಯ ಅಧಿಕಾರಿಗಳು ಸೂಚಿಸಿದ್ದಾರೆ.

ಚಿರತೆ ಸೆರೆಗಾಗಿ ಸಿಸಿಎಸ್ ಲಿಂಗರಾಜು, ಡಿಎಫ್ಓ ರವೀಂದ್ರ ನೇತೃತ್ವದಲ್ಲಿ 5 ತಂಡಗಳ ರಚನೆ ಮಾಡಲಾಗಿದೆ. ಆನೇಕಲ್, ಬನ್ನೇರುಘಟ್ಟ, ಕಗ್ಗಲೀಪುರ, ಕೆ.ಆರ್‌.ಪುರಂ ಆರ್‌ಎಫ್‌ಓ ಅಧಿಕಾರಿಗಳು ಈ ತಂಡದಲ್ಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...