ಬೆಂಗಳೂರು | ಹಾಡಹಗಲೇ ಜ್ಯುವೆಲರಿ ಶಾಪ್‌ಗೆ ನುಗ್ಗಿ ಮಾಲೀಕನ ಮೇಲೆ ಗುಂಡಿನ ದಾಳಿ

Date:

ಹಾಡಹಗಲೇ ಜ್ಯುವೆಲರಿ ಶಾಪ್‌ಗೆ ನುಗ್ಗಿ ಮಾಲೀಕನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ಬೆಂಗಳೂರಿನ ದೇವಿನಗರದಲ್ಲಿ ನಡೆದಿದೆ.

ಬೆಂಗಳೂರಿನ ಕೊಡಿಗೆಹಳ್ಳಿ ವ್ಯಾಪ್ತಿಯ ದೇವಿಹಳ್ಳಿಯಲ್ಲಿರುವ ಲಕ್ಷ್ಮಿ ಬ್ಯಾಂಕರ್ಸ್ ಮತ್ತು ಜ್ಯುವೆಲರಿ ಶಾಪ್‌ಗೆ ನುಗ್ಗಿದ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ.

ಮಾರ್ಚ್‌ 14ರ ಬಳಿಗ್ಗೆ 11 ಗಂಟೆ ಸುಮಾರಿಗೆ ದೇವಿನಗರದ ಆರ್‌ಎಮ್‌ವಿ ಅಪಾರ್ಟ್‌ಮೆಂಟ್ ಮುಂಭಾಗದಲ್ಲಿರುವ ಲಕ್ಷ್ಮಿ ಬ್ಯಾಂಕರ್ಸ್ ಮತ್ತು ಜ್ಯುವೆಲರಿ ಶಾಪ್‌ಗೆ ದರೋಡೆ ಮಾಡಲು ನಾಲ್ವರು ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದಿದ್ದಾರೆ. ಅಂಗಡಿಗಳಿಗೆ ನುಗ್ಗಿದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡು ಬೈಕ್‌ಗಳಲ್ಲಿ ಬಂದ ನಾಲ್ಕು ಮಂದಿ ದುಷ್ಕರ್ಮಿಗಳಲ್ಲಿ, ಇಬ್ಬರು ಗುಂಡಿನ ದಾಳಿ ಮಾಡಿದ್ದಾರೆ. ಈ ವೇಳೆ ಅಂಗಡಿ ಮಾಲೀಕ ಅಪ್ಪುರಾಮ್ ಎಂಬವರ ಹೊಟ್ಟೆಗೆ ಗುಂಡು ತಗುಲಿದೆ. ಅಲ್ಲದೇ, ಅಭಿರಾಮ್ ಎಂಬವವರ ಕಾಲಿಗೆ ಗುಂಡು ತಗುಲಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪ್ಪುರಾಮ್ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಚಿನ್ನಾಭರಣ ದೋಚಲು ದುಷ್ಕರ್ಮಿಗಳು ವಿಫಲ ಯತ್ನ ನಡೆಸಿದ್ದಾರೆ. ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು ಪರಾರಿಯಾಗಿದ್ದು, 1 ಪಿಸ್ತೂಲ್ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಎಫ್‌ಎಸ್‌ಎಲ್ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್, “ಸುಮಾರು 11 ಗಂಟೆ ವೇಳೆಗೆ ನಾಲ್ವರು ಆರೋಪಿಗಳು ಬಂದು ಫೈರಿಂಗ್ ಮಾಡಿದ್ದಾರೆ. ದುಷ್ಕರ್ಮಿಗಳು ರಾಬರಿ ಮಾಡುವುದಕ್ಕೆ ಬಂದ ಹಾಗೇ ಇದೆ. ಇಬ್ಬರ ಮೇಲೆ ಫೈರಿಂಗ್ ಮಾಡಿದ್ದಾರೆ. ಸದ್ಯ ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜ್ಯದಾದ್ಯಂತ ತಾಪಮಾನ ಹೆಚ್ಚಳ; ಮಳೆ ಮುನ್ಸೂಚನೆ ಸದ್ಯಕ್ಕಿಲ್ಲ

ಘಟನಾ ಸ್ಥಳಕ್ಕೆ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಕಮಿಷನರ್ ದಯಾನಂದ್ ಹಾಗೂ ಕೋಡಿಗೆಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...