ಬೆಂಗಳೂರು | ಡೆಂಗ್ಯೂ ಜ್ವರಕ್ಕೆ ಇಬ್ಬರು ಬಲಿ

Date:

ಮಳೆಗಾಲ ಆರಂಭವಾಗುತ್ತಿದ್ದಂತೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡೆಂಘೀ ಹಾವಳಿ ಹೆಚ್ಚಾಗುತ್ತಿದೆ. ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೆ ಇದೆ. ಇದೀಗ, ಡೆಂಗ್ಯೂ ಜ್ವರಕ್ಕೆ ಬೆಂಗಳೂರಿನಲ್ಲಿ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.

ಬಿಬಿಎಂಪಿ ಪೂರ್ವ ವಲಯದಲ್ಲಿ ತಮಿಳುನಾಡು ಮೂಲದ 80 ವರ್ಷದ ವೃದ್ಧೆ ನೀರಜಾ ದೇವಿ ಮತ್ತು ಕಗ್ಗದಾಸಪುರ ಮೂಲದವರಾದ 27 ವರ್ಷದ ಯುವಕ ಅಭಿಲಾಷ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ದೇವಿ ಕೂಡ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಡೆಂಗ್ಯೂಗೆ ಹಾವೇರಿಯಲ್ಲಿ ಮೊದಲ ಸಾವು ಸಂಭವಿಸಿತ್ತು. ಇದೀಗ, ಬೆಂಗಳೂರಿನಲ್ಲಿ ಸಂಭವಿಸಿದೆ. ನಾಳೆ ಬಿಬಿಎಂಪಿ ಅಧಿಕಾರಿಗಳು ಡೆತ್ ಆಡಿಟ್ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ನಾಳೆ ಬಿಬಿಎಂಪಿ ಅಧಿಕಾರಿಗಳು ಡೆತ್ ಆಡಿಟ್ ಮಾಡಲಿದ್ದಾರೆ. ಕಳೆದ ಎರಡು ವಾರಗಳಲ್ಲಿ 1,000 ಗಡಿಯನ್ನು ದಾಟಿದ ಡೆಂಗ್ಯೂ ಪ್ರಕರಣಗಳ ಏರಿಕೆಯ ಮಧ್ಯೆ ಸಾವುಗಳು ವರದಿಯಾಗಿವೆ. ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಡೆಂಘೀ ಪ್ರಕರಣಗಳ ಸಂಖ್ಯೆ ಎರಡು ಪಟ್ಟು ಹೆಚ್ಚಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? 9 ದಿನಗಳಲ್ಲಿ 5ನೇ ಸೇತುವೆ ಕುಸಿತ; ನಿತೀಶ್ ಸರ್ಕಾರದ ವಿರುದ್ಧ ತೇಜಸ್ವಿ ಯಾದವ್ ವಾಗ್ದಾಳಿ

ಬಿಬಿಎಂಪಿ ವ್ಯಾಪ್ತಿಯಲ್ಲಿ 2,457 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಸುಮಾರು 5,187 ಡೆಂಗ್ಯೂ ಕೇಸ್​ಗಳಿವೆ. ಹಾವೇರಿ, ಮೈಸೂರು ಸೇರಿದಂತೆ ಜಿಲ್ಲೆ ಜಿಲ್ಲೆಯಲ್ಲೂ ಜನ ಡೆಂಘೀಯಿಂದ ಬಳಲುತ್ತಿದ್ದಾರೆ. ಕೇವಲ 6 ತಿಂಗಳಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಶೇ.140ರಷ್ಟು ಹೆಚ್ಚಾಗಿದೆ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...