ಬೆಂಗಳೂರು | ವಿದೇಶಿ ಕರೆನ್ಸಿಗಾಗಿ ಮಹಿಳೆ ಕೊಲೆ; ಇಬ್ಬರ ಬಂಧನ

Date:

ವಿದೇಶಿ ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬೆಂಗಳೂರಿನ ಶೇಷಾದ್ರಿಪುರಂ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಜರೀನಾ ಮೃತ ಮಹಿಳೆ. ಈಕೆ ಮೂಲತಃ ಉಜ್ಬೇಕಿಸ್ತಾನದವರು. ಬಿಡಿಎ ಸೇತುವೆ ಬಳಿಯ ಖಾಸಗಿ ಸ್ಟಾರ್ ಹೋಟೆಲ್​ನ ಕೊಠಡಿಯಲ್ಲಿ ಅವರು ಮೃತಪಟ್ಟಿದ್ದರು.

ಮಹಿಳೆ ಬಳಿಯಿದ್ದ ವಿದೇಶಿ ಹಣ ಮತ್ತು ಮೊಬೈಲ್​ಗಾಗಿ ಹೋಟೆಲ್​ನಲ್ಲಿ‌ ಹೌಸ್ ಕೀಪಿಂಗ್​ ಆಗಿ ಕೆಲಸ ಮಾಡುತ್ತಿದ್ದ ಆರೋಪಿಗಳಿಬ್ಬರು ರೂಮ್ ಸರ್ವಿಸ್​ಗೆ ಹೋಗಿದ್ದಾಗ ಮಹಿಳೆಯನ್ನು ದಿಂಬಿನಿಂದ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳಿಕ, ಆಕೆ ಬಳಿಯಿದ್ದ ಹಣ ಮತ್ತು ಮೊಬೈಲ್​ ಕದ್ದು ಪರಾರಿಯಾಗಿದ್ದರು. ಈ ಬಗ್ಗೆ ಪ್ರಕರಣ ದಾಖಲು ಮಾಡಿಕೊಂಡ ಪೊಲೀಸರು ವಿಶೇಷ ತಂಡ ರಚಿಸಿ ಶೋಧ ಕಾರ್ಯ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಇಬ್ಬರು ಆರೋಪಿಗಳು ಅಸ್ಸಾಂ ಮೂಲದವರು ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳಿಂದ ಪೊಲೀಸರು ₹13,000 ಸಾವಿರ ನಗದು, ₹2,000 ಮುಖಬೆಲೆಯ ಉಜ್ಬೇಕಿಸ್ಥಾನದ ಎರಡು ನೋಟುಗಳು ₹5,000 ಮುಖ‌ಬೆಲೆಯ ಒಂದು ನೋಟನ್ನು ಸೀಜ್ ಮಾಡಿದ್ದಾರೆ.

ಏನಿದು ಪ್ರಕರಣ?  

ವಿದೇಶಿ ಮಹಿಳೆ ಜರೀನಾ ಕಳೆದ ನಾಲ್ಕು ದಿನದ ಹಿಂದೆ ಉಜ್ಬೇಕಿಸ್ತಾನದಿಂದ ಪ್ರವಾಸಿ ವೀಸಾದಡಿ ಬೆಂಗಳೂರಿಗೆ ಬಂದಿದ್ದರು. ಕಳೆದ ಆರು ದಿನಗಳಿಂದ ಶೇಷಾದ್ರಿಪುರಂ ಬಳಿಯಿರುವ ಜಗದೀಶ್ ಹೋಟೆಲ್​ನಲ್ಲಿ ತಂಗಿದ್ದರು. ಮಾರ್ಚ್‌ 13ರಂದು ಸಾಯಂಕಾಲ ಹೋಟೆಲ್ ಸಿಬ್ಬಂದಿ ಎಷ್ಟೇ ಕೂಗಿದರೂ ಮಹಿಳೆ ಬಾಗಿಲು ತೆರೆದಿಲ್ಲ. ಹೀಗಾಗಿ, ಮಾರ್ಚ್‌ 13ರ ಮಧ್ಯರಾತ್ರಿ ಮಾಸ್ಟರ್ ಕೀ ಬಳಸಿ ಹೋಟೆಲ್ ಸಿಬ್ಬಂದಿ ಕೊಠಡಿಯ ಬಾಗಿಲು ತೆಗೆದಾಗ ಮಹಿಳೆಯ ಶವ ಪತ್ತೆಯಾಗಿದೆ.

ಕೊಲೆಯಾಗಿರುವ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಶೇಷಾದ್ರಿಪುರಂ ಪೊಲೀಸರು, ಎಫ್​ಎಸ್​ಎಲ್ ತಂಡ ಹಾಗೂ ಡಾಗ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಕೇಂದ್ರ ವಿಭಾಗ ಡಿಸಿಪಿ ಶೇಖರ್ ಟೆಕ್ಕಣ್ಣನವರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಹೋಟೆಲ್ ಸಿಸಿಟಿವಿ ಸೇರಿದಂತೆ ಇನ್ನಿತರ ದಾಖಲೆಗಳನ್ನು ಪೊಲೀಸರು ಪರಿಶೀಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಉಸಿರುಗಟ್ಟಿಸಿ ವಿದೇಶಿ ಮಹಿಳೆ ಕೊಲೆ; ಶಂಕೆ

ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ರವಾನಿಸಿದ್ದರು‌. ಬಳಿಕ, ಅನುಮಾನಾಸ್ಪದ ಸಾವಿನಡಿ‌ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...