ಬೆಂಗಳೂರು | ಯುವನಿಧಿ ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ

Date:

ಯುವನಿಧಿ ಯೋಜನೆ ಪ್ರಯೋಜನವನ್ನು ಪ್ರತಿ ತಿಂಗಳೂ ಪಡೆಯಬೇಕಿದ್ದರೆ, ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯವಾಗಿದೆ. ಫೆ.29ರೊಳಗೆ ಸ್ವಯಂ ಘೋಷಣೆ ಅಪ್‌ಲೋಡ್ ಮಾಡಬೇಕೆಂದು ಕೈಗಾರಿಕಾ ತರಬೇತಿ ಹಾಗೂ ಉದ್ಯೋಗ ಇಲಾಖೆಯ ಆಯುಕ್ತರು ಸೂಚನೆ ನೀಡಿದ್ದಾರೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಅವರು, “ʼಯುವನಿಧಿʼ ಯೋಜನೆಯಲ್ಲಿ ಫಲಾನುಭವ ಪಡೆಯಲು ಪದವಿ ಅಥವಾ ಸ್ನಾತಕೊತ್ತರ ಪದವಿ ಹಾಗೂ ಡಿಪ್ಲೊಮಾಗಳಲ್ಲಿ 2022-23ನೇ ಶೈಕ್ಷಣಿಕ ವರ್ಷದಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳು ಅರ್ಹತೆ ಹೊಂದಿದ್ದಾರೆ. ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಣಿಯಾಗಿದ್ದು, ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸ ಪೂರೈಸಿದ ಬಳಿಕ, ಅವರಿಗೆ ಜನವರಿ 2024ರಿಂದ ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ” ಎಂದು ತಿಳಿಸಿದ್ದಾರೆ.

“ಅಭ್ಯರ್ಥಿಗಳು ಈ ಪ್ರಯೋಜನವನ್ನು ಪ್ರತಿ ತಿಂಗಳು ಪಡೆಯಬೇಕಿದ್ದರೆ, ಪ್ರತಿ ಮಾಹೆಯಲ್ಲಿ ತಾನು ನಿರುದ್ಯೋಗಿಯೆಂದು, ವ್ಯಾಸಂಗ ಮುಂದುವರೆಸುತ್ತಿಲ್ಲವೆಂದು ಹಾಗೂ ಸ್ವಯಂ ಉದ್ಯೋಗಿಯಲ್ಲವೆಂದು ಸ್ವಯಂ ಘೋಷಣೆಯನ್ನು ಮಾಡಬೇಕಾಗಿರುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಸಕ್ತ ಫೆಬ್ರವರಿ 29ರವರೆಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಸ್ವಯಂ ಘೋಷಣೆ ಪ್ರಮಾಣ ಪತ್ರವನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಪ್ರಯೋಜನೆ ಪಡೆಯುತ್ತಿರುವ ಅರ್ಹ ಅಭ್ಯರ್ಥಿಗಳು ಪ್ರತೀ ತಿಂಗಳು ಸ್ವಯಂ ಘೋಷಣೆ ಮಾಡದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆಯನ್ನು ಮಾಡಲಾಗುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ.

ಈಗಾಗಲೇ ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ಜನವರಿ 2024ರಲ್ಲಿ ನೇರ ನಗದು ವರ್ಗಾವಣೆ ಮಾಡಲಾಗಿದ್ದು, ಮುಂದಿನ ತಿಂಗಳು ಪ್ರಯೋಜನ ಪಡೆದುಕೊಳ್ಳಲು ಸ್ವಯಂ ಘೋಷಣೆ ಮಾಡಬೇಕಾಗಿರುವ ಕುರಿತು ಎಸ್‌ಎಂಎಸ್ ಸಂದೇಶವನ್ನು ಅಭ್ಯರ್ಥಿಗಳಿಗೆ ರವಾನಿಸಲಾಗಿರುತ್ತದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆಯನ್ನು ಹೊಂದಿರತಕ್ಕದ್ದು ಎಂದು ಹೇಳಿದ್ದಾರೆ.

ಅಭ್ಯರ್ಥಿಗಳು ಸ್ವಯಂ ಘೋಷಣೆ ಮಾಡಿಕೊಳ್ಳಲು ಜಾಲತಾಣ https://sevasindhugs.karnataka.gov.in ವೀಕ್ಷಿಸಬಹುದು. ಹೆಚ್ಚಿನ ವಿವರಗಳಿಗೆ ದೂ.ಸಂಖ್ಯೆ: 080-25189112 ಸಂಪರ್ಕಿಸಬಹುದು ಎಂದು ಕೈಗಾರಿಕಾ ತರಬೇತಿ ಹಾಗೂ ಉದ್ಯೋಗ ಇಲಾಖೆ ಆಯುಕ್ತರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...